ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ: ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
ಭಾರತ ಮತ್ತು ಅಮೆರಿಕದ ಬಾಂಧವ್ಯ ಇತ್ತೀಚಿನ ದಿನಗಳಲ್ಲಿ ಬಿರುಕು ಮೂಡುವುದಕ್ಕೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಹೌದು ಡೊನಾಲ್ಡ್ ಟ್ರಂಪ್ ಅವರು ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ನಿಲ್ಲಿಸಿದರ ಕ್ರೆಡಿಟ್ ತೆಗೆದುಕೊಳ್ಳಬೇಕು ಎಂದು ಕಾಯುತ್ತಿದ್ದರು. ಆದರೆ, ಭಾರತ ಇದಕ್ಕೆ ಅವಕಾಶ ನೀಡಿಲ್ಲ. ಭಾರತ - ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಹ ನಾವು ಯುದ್ಧ ನಿಲ್ಲಿಸುವುದಕ್ಕೆ ಅಮೆರಿಕ ಕಾರಣವಲ್ಲ ಅಂತ ಹೇಳಿವೆ. ಈ ನಡುವೆ ಭಾರತದ ಬಗ್ಗೆ ಅಪಪ್ರಚಾರ ಮಾಡುವುದಕ್ಕೆ ಅಮೆರಿಕ ಮುಂದಾದಂತಿದೆ. ಇದೀಗ ಅಮೆರಿಕ ಪ್ರಜೆಗಳಿಗೆ ಭಾರತದ ಪ್ರವಾಸದ ಬಗ್ಗೆ ನೀಡಿರುವ ಎಚ್ಚರಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ.
ಭಾರತದಲ್ಲಿ ಕೆಲಸ ಮಾಡುವ ಅಮೆರಿಕ ಸರ್ಕಾರಿ ನೌಕರರು ಹಾಗೂ ಭಾರತಕ್ಕೆ ಭೇಟಿ ನೀಡುವ ಅಮೆರಿಕದ ಪ್ರಜೆಗಳಿಗೆ ಅಮೆರಿಕ ಹೊಸ ಎಚ್ಚರಿಕೆಯೊಂದನ್ನು ನೀಡಿದೆ. ಭಾರತದಲ್ಲಿ ಅಪರಾಧ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಎಚ್ಚರಿಕೆಯನ್ನು ವಹಿಸಿ ಎಂದು ಮುನ್ಸೂಚನೆ ನೀಡಿದೆ. ಅಲ್ಲದೇ ಭಾರತದಲ್ಲಿ ಕೆಲವೊಂದು ಪ್ರಮುಖ ಪ್ರದೇಶಗಳಲ್ಲಿ ಭಯೋತ್ಪಾದನೆಯ ಆತಂಕದ ಕಾರಣಕ್ಕೆ ಪ್ರಯಾಣ ಮಾಡಬೇಡಿ ಅಂತಲೂ ಅಮೆರಿಕ ಸಲಹೆ ನೀಡಿದೆ. ಇದು ಭಾರತದ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನವೇ ಇಲ್ಲ. ಅಮೆರಿಕದ ಪ್ರಜೆಗಳ ರಕ್ಷಣೆಯ ದೃಷ್ಟಿಯಿಂದಲೇ ಈ ರೀತಿ ಸಲಹೆಗಳನ್ನು ನೀಡಲಾಗಿದೆಯೇ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಭಾರತಕ್ಕೆ ಪ್ರವಾಸ ಮಾಡುವ ಬಗ್ಗೆ ಇತ್ತೀಚಿಗೆ ಅಮೆರಿಕ ಸರ್ಕಾರವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ, ಭಾರತದಲ್ಲಿ ಅತ್ಯಾಚಾರ ಹೆಚ್ಚಾಗಿ ನಡೆಯುತ್ತಿರುವ ಅಪರಾಧಗಳಲ್ಲಿ ಒಂದಾಗಿದೆ. ಭಾರತದ ಕೆಲವೊಂದು ಪ್ರವಾಸಿ ತಾಣಗಳಲ್ಲಿ ಲೈಂಗಿಕ ದೌರ್ಜನ್ಯ ಸೇರಿದಂತೆ ಹಿಂಸಾತ್ಮಕ ಅಪರಾಧಗಳು ಸಂಭವಿಸುತ್ತಿವೆ. ಹೀಗಾಗಿ ಒಬ್ಬೊಂಟಿಯಾಗಿ ಪ್ರಯಾಣ ಮಾಡಬೇಡಿ ಹಾಗೂ ಅಗತ್ಯ ಮುಂಜಾಗ್ರತೆ ವಹಿಸಿ ಎಂದು ಹೇಳಲಾಗಿದೆ.
ಈ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಿ: ಪ್ರವಾಸಿ ಸ್ಥಳಗಳು ಮಾತ್ರವಲ್ಲದೇ ಬಸ್ ಹಾಗೂ ರೈಲು ನಿಲ್ದಾಣಗಳು, ಮಾರುಕಟ್ಟೆಗಳು/ಶಾಪಿಂಗ್ ಮಾಲ್‌ಗಳು ಮತ್ತು ಸರ್ಕಾರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ಮಾಡುವ ಸಾಧ್ಯತೆ ಇದೆ ಎನ್ನುವ ಅಂಶವನ್ನೂ ಈ ಪ್ರವಾಸಿ ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ. ಭಾರತದ ಕೆಲವೊಂದು ಗ್ರಾಮೀಣ ಭಾಗದಲ್ಲಿ ನೀವು ಸಂಕಷ್ಟಕ್ಕೆ ಸಿಲುಕಿದರೆ ಯುಎಸ್‌ನಿಂದ ಸೀಮಿತ ನೆರವು ನೀಡಲು ಸಾಧ್ಯವಿದೆ ಅಥವಾ ವಿಳಂಬವಾಗಬಹುದು. ಅದರಲ್ಲಿ ಮುಖ್ಯವಾಗಿ ಪೂರ್ವ ಮಹಾರಾಷ್ಟ್ರ ಮತ್ತು ಉತ್ತರ ತೆಲಂಗಾಣದ ಅಲ್ಲದೇ ಪಶ್ಚಿಮ ಬಂಗಾಳದ ಪಶ್ಚಿಮ ಪ್ರದೇಶದ ವರೆಗೆ ಪ್ರಯಾಣ ಮಾಡುವಾಗ ಎಚ್ಚರಿಕೆ ವಹಿಸಿ ಎಂದು ಹೇಳಲಾಗಿದೆ.
ಈ ರಾಜ್ಯಗಳಿಗೆ ಭೇಟಿ ನೀಡಬೇಡಿ: ಇನ್ನು ಅಮೆರಿಕದ ಪ್ರಜೆಗಳು ಭಯೋತ್ಪಾದನೆಯ ಆತಂಕ ಇರುವುದರಿಂದ ಭಾರತದ ಮಧ್ಯ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳಿಗೆ ಭೇಟಿ ನೀಡಬಾರದು ಎಂದು ಮುನ್ಸೂಚನೆ ನೀಡಲಾಗಿದೆ. ಮಾವೋವಾದಿ ಅಥವಾ ನಕ್ಸಲೀಯರ ದಾಳಿಯ ಬಗ್ಗೆಯೂ ಉಲ್ಲೇಖಿಸಲಾಗಿದೆ. ಇನ್ನು ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ ಹಾಗೂ ಜಾರ್ಖಂಡ್‌ನ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ವಿರಳ ದಾಳಿಗಳು ನಡೆದಿವೆ. ಹೀಗಾಗಿ ಈ ರಾಜ್ಯಗಳ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡುವಾಗ ಎಚ್ಚರಿಕೆ ವಹಿಸಿ ಎಂದು ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರಯಾಣಿಸದಂತೆ ಎಚ್ಚರಿಸಲಾಗಿದೆ.
ಅಲ್ಲದೇ ಮುಖ್ಯವಾಗಿ ಭಾರತದಲ್ಲಿ ಕೆಲಸ ಮಾಡುತ್ತಿರುವ ಅಮೆರಿಕ ಸರ್ಕಾರಿ ನೌಕರರು ಭಾರತದ ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಮೇಘಾಲಯ ಹಾಗೂ ಒಡಿಶಾ ರಾಜ್ಯಗಳಲ್ಲಿ ಪ್ರಯಾಣ ಮಾಡುವುದಿದ್ದರೆ ಯುಎಸ್‌ಸರ್ಕಾರದ ಪೂರ್ವಾನುಮತಿ ಕಡ್ಡಾಯವಾಗಿದೆ. ಆದರೆ, ಈ ರಾಜ್ಯಗಳ ರಾಜಧಾನಿಗೆ ಭೇಟಿ ನೀಡುವುದಾದರೆ ಅನುಮತಿ ಬೇಕಾಗಿಲ್ಲ ಎಂದು ಯುಎಸ್ ಪ್ರಯಾಣ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications