ಸೇನೆ ಅವಹೇಳನ, ಕಾಂಗ್ರೆಸ್ ನಾಯಕರ ವಿರುದ್ಧ ಕ್ರಿಮಿನಲ್ ಕೇಸ್
ನವದೆಹಲಿ, ಜೂನ್ 29: ಭಾರತೀಯ ಸೇನೆಗೆ ಅವಮಾನ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕರಿಬ್ಬರ ಮೇಲೆ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗಿದೆ.
ಹಿರಿಯ ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಅಜಾದ್ ಮತ್ತು ಸೈಫುದ್ದೀನ್ ಸೋಜ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗಿದೆ. ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಈ ಪ್ರಕರಣ ದಾಖಲಿಸಲಾಗಿದೆ.
ಭಾರತೀಯ ಸೇನೆಯ ವಿರುದ್ಧ ರಾಷ್ಟ್ರದ್ರೋಹದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸೇನಾ ಪಡೆಗಳು ನಾಲ್ವರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿ 20 ನಾಗರಿಕರನ್ನು ಕೊಂದು ಹಾಕುತ್ತವೆ. ಅವರ ಕ್ರಮಗಳು ಉಗ್ರರಿಗಿಂತ ನಾಗರಿಕರ ಮೇಲೆಯೇ ಹೆಚ್ಚಾಗಿರುತ್ತದೆ. ಉದಾಹರಣೆಗೆ ಅವರು ಪುಲ್ವಾಮಾದಲ್ಲಿ 13 ನಾಗರಿಕರನ್ನು ಮತ್ತು ಕೇವಲ 1 ಉಗ್ರರನ್ನು ಕೊಂದಿದ್ದರು ಎಂದು ಸಂದರ್ಶನವೊಂದರಲ್ಲಿ ಗುಲಾಂ ನಬಿ ಅಜಾದ್ ಹೇಳಿಕೆ ನೀಡಿದ್ದರು.
ಇದರ ವಿರುದ್ಧ ಈಗ ಪ್ರಕರಣ ದಾಖಲಿಸಲಾಗಿದೆ.












Click it and Unblock the Notifications