CAPFs Exam in 13 Language: ಗುಡ್ ನ್ಯೂಸ್: ಕನ್ನಡ ಸೇರಿ 13ಸ್ಥಳೀಯ ಭಾಷೆಗಳಲ್ಲಿ 'ಸಶಸ್ತ್ರ ಪೊಲೀಸ್ ಪಡೆಗಳ' ಪರೀಕ್ಷೆ
ಬೆಂಗಳೂರು, ಫೆಬ್ರವರಿ 12: CRPF, BSF, CISF ಒಳಗೊಂಡ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ ಕಾನ್ಸ್‌ಟೇಬಲ್‌ಗಳ ನೇಮಕಾತಿಗಾಗಿ ಇದೇ ಮೊದಲ ಭಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದೆ.
ಕೇಂದ್ರೀಯ ರಿಸರ್ವ್ ಪೊಲೀಸ್ ಫೋರ್ಸ್ (CRPF), ಗಡಿ ಭದ್ರತಾ ಪಡೆ (BSF) ಮತ್ತು ಸೆಂಟ್ರಲ್ ಇಂಡಸ್ಟ್ರೀಯಲ್ ಸೆಕ್ಯೂರಿಟಿ ಫೋಸ್ (CISF) ಸೇರಿದಂತೆ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ ನೇಮಕಾತಿಯ ಪರೀಕ್ಷೆಗಳು ಸಾಮಾನ್ಯವಾಗಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಬರೆಯಬೇಕಿತ್ತು. ಇದೀಗ ಆ ಎರಡು ಭಾಷೆಗಳ ಹೊರತಾಗಿ ಕನ್ನಡ ಸೇರಿದಂತೆ ವಿವಿಧ ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

128 ನಗರಗಳಲ್ಲಿ ಮಾರ್ಚ್ 7ರ ತನಕ ಪರೀಕ್ಷೆ
ಕೇಂದ್ರೀಯ ಸಶಸ್ತ್ರ ಪಡೆಗಳ ಪರೀಕ್ಷೆಗಳು ಈಗಾಗಲೇ ಫೆಬ್ರವರಿ 10ರಿಂದಲೇ ಆರಂಭವಾಗಿವೆ. ಮಾರ್ಚ್ 7ರವರೆಗೆ ದೇಶವ್ಯಾಪಿ 128 ನಗರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ದೇಶಾದ್ಯಂತ ಒಟ್ಟು ಸುಮಾರು 48 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಪ್ರಾದೇಶಿಕ ಭಾಷೆಗಳಲ್ಲೂ ನೇಮಕಾತಿ ಪರೀಕ್ಷೆ ನಡೆಸುವ ಸಂಬಂಧ 2023ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಆ ನಿರ್ಧಾರ ಈಗ ಜಾರಿಗೆ ಬಂದಿದೆ.
ಭಾನುವಾರಿ ಈ ಕುರಿತು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ. ಗೃಹ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಕೇಂದ್ರೀಯ ಸಶಸ್ತ್ರ ಪಡೆಗಳ ಕಾನ್ಸ್‌ಟೇಬಲ್ ಹುದ್ದೆಗೆ ಈ ಭಾರಿ ಇಂಗ್ಲೀಷ್ ಹಾಗು ಹಿಂದಿ ಹೊರತಾಗಿ 13 ಸ್ಥಳೀಯ ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.

ಐತಿಹಾಸಿಕ ನಿರ್ಧಾರದಿಂದ ಅಭ್ಯರ್ಥಿಗಳಲ್ಲಿ ಸಂತಸ
ಕೇಂದ್ರೀಯ ಸಶಸ್ತ್ರ ಪಡೆಗಳ ನೇಮಕಾತಿಯಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಒತ್ತು ನೀಡುವ ಜತೆಗೆ ಸ್ಥಳೀಯರ ನೇಮಕಾತಿ ಹೆಚ್ಚಿಸಲು ಇದು ಅನುಕೂಲವಾಗಲಿದೆ. ಇದೊಂದು ಐತಿಹಾಸಿಕ ನಿರ್ಧಾರ ಅಂತಲೂ ಭಾವಿಸಲಾಗುತ್ತಿದೆ. ಗೃಹ ಸಚಿವಾಲಯ ತೆಗೆದುಕೊಂಡು ಈ ಮಹತ್ವದ ನಿರ್ಧಾರದಿಂದ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ ಲಭಿಸಿದಂತಾಗಿದೆ.
ಯಾವ 13 ಭಾಷೆಗಳಲ್ಲಿ ಪರೀಕ್ಷೆ ನಡೆಯುತ್ತವೆ?
ಸಶಸ್ತ್ರ ಪಡೆಗಳ ಪರೀಕ್ಷೆಗಳು ಹಿಂದಿ, ಇಂಗ್ಲಿಷ್ ಭಾಷೆ ಹೊರತಾಗಿ, ಕನ್ನಡ ಜತೆಗೆ ಅಸ್ಸಾಮಿ, ಬಂಗಾಳಿ, ಗುಜರಾತಿ, ಮಲಯಾಳಂ, ಮರಾಠಿ, ತೆಲುಗು, ಉರ್ದು, ಓಡಿಯಾ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಬರೆಯಬಹುದಾಗಿದೆ. ಈ ಸಂಬಂಧ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಕೈಗೊಂಡ ನಿರ್ಧಾರದ ಪರವಾಗಿ ಕೇಂದ್ರ ಗೃಹ ಸಚಿವಾಲಯವು ಸ್ಟಾಫ್ ಸೆಲೆಕ್ಷನ್ ಕಮಿಟಿ ಜತೆಗೆ ಒಪ್ಪಂದ ಮಾಡಿಕೊಂಡಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಲಕ್ಷಾಂತರ ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಈ ಪರೀಕ್ಷೆಗೆ ಸಂಬಂಧಿಸಿದಂತೆ, ಈಗ ಗೃಹ ಸಚಿವಾಲಯ ಮತ್ತು ಸಿಬ್ಬಂದಿ ಆಯ್ಕೆ ಆಯೋಗವು ಹಿಂದಿ ಮತ್ತು ಇಂಗ್ಲಿಷ್ ಹೊರತುಪಡಿಸಿ ಮೇಲಿನ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಸಹಿ ಹಾಕಿದೆ. ಹೀಗಾಗಿಯೇ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಈಗ 2024ರಲ್ಲಿ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.












Click it and Unblock the Notifications