ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಆತ್ಮಹತ್ಯೆ ಮಾಡಿಕೊಂಡ ಯೋಧ
ಶ್ರೀನಗರ, ಜನವರಿ 06: ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಯೋಧರೊಬ್ಬರು ಕ್ಷುಲ್ಲಕ ಕಾರಣಕ್ಕೆ ಸಹೋದ್ಯೋಗಿಗಳ ಮೇಲೆ ಪಿಸ್ತೂಲ್ನಿಂದ ಗುಂಡು ಹಾರಿಸಿ, ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀನಗರದಲ್ಲಿ ನಡೆದಿದೆ.
ಶ್ರೀನಗರದ ಪಂತ್ಚೌಕ್ಕ್ಯಾಂಪ್ ನಲ್ಲಿ ಯೋಧ ಮುಖೇಶ್ ಭಾವುಕ್ ಅವರು ತಮ್ಮ ಇಬ್ಬರು ಸಹೋದ್ಯೋಗಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದಾರೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಮುಖೇಶ್ಅವರು ತಮ್ಮ ಸರ್ವೀಸ್ ರಿವಾಲ್ವರ್ ನಿಂದ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಬಾತ್ರೂಂಗೆ ತೆರಳಿ, ಅದೇ ರಿವಾಲ್ವರ್ ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿಆರ್ ಪಿಎಫ್ 29 ಬೆಟಾಲಿಯನ್ ನ ಪಂಥಾ ಚೌಕ್ ನಲ್ಲಿ ಗಾಯಗೊಂಡಿದ್ದ ಇಬ್ಬರು ಯೋಧರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಈ ಘಟನೆ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ.












Click it and Unblock the Notifications