Lok Sabha Election Survey: ಹ್ಯಾಟ್ರಿಕ್ ಹೊಡಿತಾರಾ ನರೇಂದ್ರ ಮೋದಿ.. ಕಾಂಗ್ರೆಸ್ ಕಥೆಯೇನು.. ಏನು ಹೇಳುತ್ತೆ ಸಮೀಕ್ಷೆ?
ನವದೆಹಲಿ, ಏಪ್ರಿಲ್. 13: 2024 ರ ಲೋಕಸಭಾ ಚುನಾವಣೆಗೆ ಇನ್ನು ಹದಿಮೂರು ದಿನಗಳಯ ವಾಕಿಯಿದೆ. ಹೀಗಿರುವಾಗ CSDS-Lokniti ಚುನಾವಣಾ ಪೂರ್ವ ಸಮೀಕ್ಷೆ ಬಿಡುಗಡೆಯಾಗಿದೆ. ಸಮೀಕ್ಷೆ ಫಲಿತಾಂಶದ ಪ್ರಕಾರ, ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (NDA) ಪ್ರತಿಸ್ಪರ್ಧಿ ಇಂಡಿಯಾ ಮೈತ್ರಿಕೂಟಕ್ಕಿಂತ 12 ಶೇಕಡಾವಾರು ಪಾಯಿಂಟ್ ಮುನ್ನಡೆ ಸಾಧಿಸಿದೆ.
ಎನ್‌ಡಿಎಗೆ ಮುಖ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅಲೆ ಹೆಚ್ಚು ಪಾಯಿಂಟ್ ನೀಡುವಲ್ಲಿ ಸಹಕಾರಿಯಾಗಿದೆ. ಆದರೂ ಜನರು ಈ ಚುನಾವಣೆಯಲ್ಲಿ ನಿತ್ಯ ಬದುಕಿಗೆ ಸಂಬಂಧಿಸಿದ ಸಮಸ್ಯೆಗಳು ಪ್ರಮುಖ ಕಾಳಜಿಯ ವಿಷಯಗಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಸಮಾಜದ ವಿಭಾಗಗಳಲ್ಲಿ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಇದು ಕಾಂಗ್ರೆಸ್ ಒಕ್ಕೂಟಕ್ಕೆ ಲಾಭವಾಗಲಿದೆ.

ಲೋಕನೀತಿ-ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯನ್ನು ವರದಿ ಮಾಡಿರುವ ದಿ ಹಿಂದೂ ಪ್ರಕಾರ, ಸಮೀಕ್ಷೆಯಲ್ಲಿ ಪಾಲ್ಗೊಂಡ ಹತ್ತರಲ್ಲಿ ನಾಲ್ವರು ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದು ವರದಿ ಮಾಡಿದೆ.
2024 ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಯಾರಿಗೆ? ಸಮೀಕ್ಷೆಯ ಪ್ರಮುಖಾಂಶಗಳು
1. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯು ವಿರೋಧ ಪಕ್ಷ ಇಂಡಿಯಾ ಬ್ಲಾಕ್‌ಗಿಂತ ಶೇಕಡಾ 12 ರಷ್ಟು ಮುನ್ನಡೆ ಸಾಧಿಸಿದೆ. ಹತ್ತರಲ್ಲಿ ನಾಲ್ಕು ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಕೂಡ ಸ್ವಲ್ಪ ಲಾಭವನ್ನು ಗಳಿಸುವ ನಿರೀಕ್ಷೆಯಿದೆ, ಆದರೆ ಅವು ಗಮನಾರ್ಹ ಪರಿಣಾಮ ಬೀರುವ ಸಾಧ್ಯತೆಯಿಲ್ಲ.

2. ಸಮೀಕ್ಷೆಯಲ್ಲಿ ಭಾಗಿಯಾಗಿರುವವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಬಿಜೆಪಿಯ 10 ವರ್ಷಗಳ ಹಿಂದಿನ ಸರ್ಕಾರದ ಕಾರ್ಯಕ್ಷಮತೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಇದು ಮೋದಿ ಸರ್ಕಾರಕ್ಕೆ ಮತ್ತೊಂದು ಅವಕಾಶವನ್ನು ನೀಡುವ ಬಗ್ಗೆ ಒಲವುನ್ನು ಸೂಚಿಸುತ್ತದೆ ಎಂದು ದಿ ಹಿಂದೂ ವರದಿ ಮಾಡಿದೆ.
3. ಪ್ರಧಾನಿ ನರೇಂದ್ರ ಮೋದಿಯವರ 'ಮೋದಿ ಗ್ಯಾರಂಟಿ' ಮತದಾರರನ್ನು ಸೆಳೆಯುತ್ತಿದೆ. ಇದು ರಾಹುಲ್ ಗಾಂಧಿಯವರ ಭರವಸೆಗಳಿಗಿಂತ ಹೆಚ್ಚು ವ್ಯಾಪಿಸಿಕೊಂಡಿದೆ.
4. ಸಮೀಕ್ಷೆಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದರೂ, 2019 ಕ್ಕೆ ಹೋಲಿಸಿದರೆ ಸರ್ಕಾರದ ಕಾರ್ಯಕ್ಷಮತೆಯ ತೃಪ್ತಿಯಲ್ಲಿ ಗಮನಾರ್ಹ ಕುಸಿತವಿದೆ. ನಗರ ಪ್ರದೇಶಗಳು ಮತ್ತೊಂದು ಅವಧಿಗೆ ಕಡಿಮೆ ಬೆಂಬಲವನ್ನು ತೋರಿಸುತ್ತವೆ.
5. ಈ ಬಾರಿ ಪ್ರಧಾನಿ ಮೋದಿಯವರ ವ್ಯಕ್ತಿತ್ವವು ನಿರ್ಣಾಯಕ ಅಂಶವಾಗಿ ಉಳಿದಿದೆ. ಪ್ರತಿಕ್ರಿಯಿಸಿದವರಲ್ಲಿ ಅರ್ಧದಷ್ಟು ಜನರು ರಾಹುಲ್ ಗಾಂಧಿಯವರಿಗಿಂತ ಪ್ರಧಾನಿಯಾಗಿ ಮೋದಿ ಅವರಿಗೆ ಆದ್ಯತೆ ನೀಡಿದ್ದಾರೆ.
6. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಮೋದಿಯವರ ಅತ್ಯಂತ ಮೆಚ್ಚುಗೆಯ ಕೆಲಸವಾಗಿ ಪರಿಣಮಿಸಿದೆ. ಇದು ಮತದಾರರಲ್ಲಿ, ವಿಶೇಷವಾಗಿ ಎನ್‌ಡಿಎ ಬೆಂಬಲಿಗರಲ್ಲಿ ಬಲವಾಗಿ ಪ್ರತಿಧ್ವನಿಸುತ್ತಿದೆ.
7. ಏರುತ್ತಿರುವ ಬೆಲೆಗಳು ಮತ್ತು ಹೆಚ್ಚುತ್ತಿರುವ ನಿರುದ್ಯೋಗದ ಬಗ್ಗೆ ಮತದಾರರು ಆತಂಕ ಹೊರಹಾಕಿದ್ದಾರೆ. ಇದು ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂತರ ಜನಪ್ರಿಯತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.
6. ಆರ್ಥಿಕ ಸಂಕಷ್ಟದ ಹೊರತಾಗಿಯೂ, ಬಿಜೆಪಿ ತನ್ನ ಮುನ್ನಡೆಯನ್ನು ಕಾಯ್ದುಕೊಂಡಿದೆ. ಆದರೆಮ ಇದು ಮುಂಬರುವ ಚುನಾವಣೆಯಲ್ಲಿ ಮತದಾರರ ಭಾವನೆಗಳು ಮತ್ತು ಆರ್ಥಿಕ ಕಾರ್ಯಕ್ಷಮತೆಯೊಂದಿಗೆ ಮಾತ್ರ ಹೊಂದಿಕೆಯಾಗುತ್ತಿಲ್ಲ ಎಂದು ಸೂಚಿಸುತ್ತದೆ.
8. ಉತ್ತರ ಮತ್ತು ಪಶ್ಚಿಮದಲ್ಲಿ ಬಿಜೆಪಿಯ ಭದ್ರಕೋಟೆಯಿದೆ. ಆದರೆ, ದಕ್ಷಿಣದಲ್ಲಿ ಸೀಮಿತ ಯಶಸ್ಸು ಸಿಗಬಹುದು. ಕಳೆದ ಬಾರಿ ಕರ್ನಾಟಕದಲ್ಲಿ ಭಾರಿ ಗೆಲುವು ಸಾಧಿಸಿದ್ದು, ಈ ಬಾರಿ ಕೆಲವು ಬದಲಾವಣೆಯಾಗಲಿದೆ.
10. ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ನೇರ ಸ್ಪರ್ಧೆ ಬಗ್ಗೆ ಮತದಾರನ ಒಲವಿದೆ. ಆದರೆ ಬಹು-ಕೋನದ ಸ್ಪರ್ಧೆಗಳು ಮತಗಳನ್ನು ವಿಭಜನೆ ಮಾಡಿವೆ. ಲೋಕನೀತಿ-CSDS ಚುನಾವಣಾ ಪೂರ್ವ ಸಮೀಕ್ಷೆ ನಡೆಸಲು 19 ರಾಜ್ಯಗಳಾದ್ಯಂತ 10,019 ಜನರಿಂದ ಪ್ರತಿಕ್ರಿಯೆಗಳನ್ನು ಸಂಗ್ರಹಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications