C Voter Survey: ಪ್ರಿಯಾಂಕಾ ಗಾಂಧಿಯೇ ವಿಪಕ್ಷಗಳ ಅತ್ಯುತ್ತಮ ಪ್ರಧಾನಿ ಅಭ್ಯರ್ಥಿ!
ನವದೆಹಲಿ, ಜುಲೈ 18: ಲೋಕಸಭಾ ಚುನಾವಣೆಗೆ ಈಗಾಗಲೇ ರಣಕಹಳೆ ಮೊಳಗಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ಸೋಲಿಸಲು ಈಗಾಗಲೇ 26 ಪ್ರತಿಪಕ್ಷಗಳು ಒಂದಾಗಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಹಲವು ತಂತ್ರಗಾರಿಕೆಯನ್ನ ರೂಪಿಸಿದೆ.
ಇತ್ತ ಸಿವೋಟರ್ ಸಮೀಕ್ಷೆ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ, ಪ್ರಿಯಾಂಕಾ ಗಾಂಧಿ ವಾದ್ರಾ ಅವರೇ ವಿಪಕ್ಷ ಅತ್ಯುತ್ತಮ ಪ್ರಧಾನಿ ಅಭ್ಯರ್ಥಿ ಸಮೀಕ್ಷೆ ಮೂಲಕ ತಿಳಿಸಿದೆ.

ದೇಶದಲ್ಲಿ ಬದಲಾಗುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ಸಾರ್ವಜನಿಕ ಅಭಿಪ್ರಾಯವನ್ನು ಸಂಗ್ರಹಿಸಲು 4,029 ಮಾದರಿಗಳೊಂದಿಗೆ ಸಿವೋಟರ್ ನಡೆಸಿದ ವಿಶೇಷ ಸಮೀಕ್ಷೆಯನ್ನ ನಡೆಸಿದ್ದು, ಈ ವಿಚಾರ ಬಹಿರಂಗವಾಗಿದೆ.
ಇನ್ನೂ ಸಿ ವೋಟರ್ ಸಮೀಕ್ಷೆಯ ಪ್ರಕಾರ, ಒಂದು ವೇಳೆ ರಾಹುಲ್ ಗಾಂಧಿ ಅವರ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡದಿದ್ದರೆ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಒಟ್ಟಾರೆ ಮೂರನೇ ಒಂದು ಭಾಗದಷ್ಟು ಜನ ಪ್ರಿಯಾಂಕಾ ಗಾಂಧಿಯನ್ನು ಆಯ್ಕೆ ಮಾಡಿದ್ದಾರೆ.
ಇನ್ನೂ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನಂತರ ಎಎಪಿ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಅವರು ಶೇಕಡಾ 13.9 ರಷ್ಟು ಮತಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಜೆಡಿಯು ನಾಯಕ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶೇಕಡಾ 13.6 ರಷ್ಟು ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನೂ ಶೇ.10.4ರಷ್ಟು ಮಂದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ಸಂಸ್ಥಾಪಕಿ ಮಮತಾ ಬ್ಯಾನರ್ಜಿ ಮೊದಲ ಆಯ್ಕೆಯಾಗಿದ್ದಾರೆ. ಶೇ.30 ರಷ್ಟು ಜನ ಈ ವಿಷಯದ ಬಗ್ಗೆ ತಮಗೆ ಗೊತ್ತಿಲ್ಲ ಅಥವಾ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
2024 ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಯಾರೆಂಬುದರ ಬಗ್ಗೆ ಭಿನ್ನಾಭಿಪ್ರಾಯಗಳಿದ್ದರೂ, ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ರಾಹುಲ್ ಗಾಂಧಿಯೇ ಪ್ರಧಾನಿ ಅಭ್ಯರ್ಥಿ ಎಂಬ ವಿಶ್ವಾಸದಲ್ಲಿದ್ದಾರೆ. ಇದು ರಾಹುಲ್ ಗಾಂಧಿ ದೇಶಾದ್ಯಂತ ನಡೆಸಿದ ಭಾರತ್ ಜೋಡೋ ಯಾತ್ರೆಯ ಯಶಸ್ಸಿಗೆ ಕಾರಣವಾಗಿದೆ ಎನ್ನಲಾಗಿದೆ.












Click it and Unblock the Notifications