ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ, ಇಂದು ಮುಹೂರ್ತ ನಿಗದಿ ಸಾಧ್ಯತೆ

Posted By:
Subscribe to Oneindia Kannada
   ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ, ಇಂದು ಮುಹೂರ್ತ ನಿಗದಿ ? |Oneindia Kannada

   ನವದೆಹಲಿ, ನವೆಂಬರ್ 20 : ಗುಜರಾತ್‌ ಚುನಾವಣೆಗೂ ಮುಂಚಿತವಾಗಿ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆಗಳಿವೆ.

   ರಾಹುಲ್‌ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಮುಹೂರ್ತ ನಿಗದಿಪಡಿಸುವುದಕ್ಕಾಗಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಬೆಳಿಗ್ಗೆ 10.30ಕ್ಕೆ ತಮ್ಮ ದೆಹಲಿಯ ನಿವಾಸದಲ್ಲಿ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಕರೆದಿದ್ದಾರೆ.

   ರಾಹುಲ್ ಪಟ್ಟಾಭಿಷೇಕ ತಾತ್ಕಾಲಿಕವಾಗಿ ಮುಂದೂಡಿಕೆ!

   ಕಾಂಗ್ರೆಸ್ ನ ಇತಿಹಾಸದಲ್ಲೇ ಅಧಿಕ ಕಾಲ ಅಧ್ಯಕ್ಷೆಯೆಯಾಗಿ ಮುಂದುವರಿದ ಸೋನಿಯಾ ಗಾಂಧಿಯ ನೇತೃತ್ವದಲ್ಲಿನ ಕೊನೆಯ ಕಾರ್ಯಕಾರಿ ಸಮಿತಿ ಸಭೆ ಇದಾಗಲಿದೆ.

   ಗುಜರಾತ್ ಚುನಾವಣೆ ಬಳಿಕವೇ ರಾಹುಲ್ ಗಾಂಧಿ ಕಾಂಗ್ರೆಸ್ ನ ಅಧ್ಯಕ್ಷರಾಗುವ ಬಗ್ಗೆ ಕಾಂಗ್ರೆಸ್ ನಲ್ಲಿ ಹೇಳಲಾಗಿತ್ತು. ಇದೀಗ ಯುವ ನಾಯಕ ರಾಹುಲ್ ಗಾಂಧಿಯನ್ನು ಅಧ್ಯಕ್ಷ ಸ್ಥಾನಕ್ಕೆ ತರುವ ಮೂಲಕ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕಾರ್ಯಕ್ಕೆ ಕಾಂಗ್ರೆಸ್ ಮುಂದಾಗುತ್ತಿದೆ.

   ರಾಹುಲ್ ಗಾಂಧಿ ಪಟ್ಟಾಭಿಷೇಕಕ್ಕೆ 'ವಿಘ್ನ' ತಂದೊಡ್ಡಿತೇ ಸರ್ವೇ ಫಲಿತಾಂಶ?

   ಈಗಾಗಲೇ ಎರಡ್ಮೂರು ಬಾರಿ ಗುಜರಾತ್ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಶತಾಯಗತಾಯವಾಗಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುಲು ಕಸರತ್ತು ನಡೆಸಿದ್ದಾರೆ.

   ಉಪಾಧ್ಯಕ್ಷ ಸ್ಥಾನಕ್ಕೆ ಆಂಟನಿ

   ಉಪಾಧ್ಯಕ್ಷ ಸ್ಥಾನಕ್ಕೆ ಆಂಟನಿ

   ರಾಹುಲ್ ಗಾಂಧಿ ಅಧ್ಯಕ್ಷರಾದ ಬಳಿಕ ತೆರವಾಗುವ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಎ.ಕೆ ಆಂಟನಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

    ಪಟ್ಟಾಭಿಷೇಕ ತಾತ್ಕಾಲಿಕವಾಗಿ ಮುಂದೂಡಲಾಗುತ್ತು

   ಪಟ್ಟಾಭಿಷೇಕ ತಾತ್ಕಾಲಿಕವಾಗಿ ಮುಂದೂಡಲಾಗುತ್ತು

   ಗುಜರಾತ್ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷರಾಗಿ ನೇಮಕ ಮಾಡುವ ಪ್ರಕ್ರಿಯೆ ನವೆಂಬರ್ ನಲ್ಲಿಯೇ ನಡೆಯಬೇಕಿತ್ತು. ಆದರೆ, ಈಗ ರಾಹುಲ್ ಅವರನ್ನು ಅಧ್ಯಕ್ಷರಾಗಿ ನೇಮಿಸಿದರೆ ಕಾರ್ಯಕರ್ತರ ಗಮನ ಗುಜರಾತ್ ಚುನಾವಣೆಯಿಂದ ಇತ್ತ ಹರಿಯಲಿದೆ ಎನ್ನುವ ಕಾರಣಕ್ಕೆ ಮುಂದೂಡಲಾಗಿತ್ತು.

   ಗುಜರಾತ್ ಚುನಾವಣೆ ಮುನ್ನವೇ ರಾಹುಲ್ ಗೆ ಪಟ್ಟ

   ಗುಜರಾತ್ ಚುನಾವಣೆ ಮುನ್ನವೇ ರಾಹುಲ್ ಗೆ ಪಟ್ಟ

   ಎಐಸಿಸಿಯ ಅಧ್ಯಕ್ಷೆ ಸೋನಿಯ ಗಾಂಧಿ ಅವರಿಗೆ ಪದೇ ಪದೇ ಆರೋಗ್ಯದಲ್ಲಿ ವ್ಯತ್ಯಾಯ ಕಂಡು ಬರುತ್ತಿರುವುದರಿಂದ ಗುಜರಾತ್ ಚುನಾವಣೆ ಮುನ್ನವೇ ರಾಹುಲ್ ಗೆ ಪಟ್ಟಾಭಿಷೇಕವನ್ನು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.

   ಇಂದಿನ ಸಭೆ ನಿರ್ಣಾಯಕ

   ಇಂದಿನ ಸಭೆ ನಿರ್ಣಾಯಕ

   ಇಂದು ನಡೆಯಲಿರುವ ಸಿಡಬ್ಲ್ಯುಸಿ ಸಭೆ ಬಹಳ ಮಹತ್ವದಾಗಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿಗೆ ಅಧ್ಯಕ್ಷಪಟ್ಟ ಕೊಡುವ ಬಗ್ಗೆ ತೀರ್ಮಾನವಾಗಲಿದೆ. ಹಾಗೂ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ಕಾರ್ಯತಂತ್ರ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ. ಡಿಸೆಂಬರ್ 9 ಮತ್ತು 14ರಂದು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 18ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   The much-awaited meeting of the Congress Working Committee (CWC) to approve the schedule of the party presidents election will take place on Monday at Sonia Gandhi's residence.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ