ಕೊನೆಗೂ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುವ ದಿನ ಬಂತು
ನವದೆಹಲಿ, ನವೆಂಬರ್ 20: ಕಾಂಗ್ರೆಸ್ ಅಧ್ಯಕ್ಷರನ್ನಾಗಿ ರಾಹುಲ್ ಗಾಂಧಿಯವರನ್ನು ನೇಮಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.
ಇಂದು ನವದೆಹಲಿ 10 ಜನಪಥ್ ನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ಡಿಸೆಂಬರ್ 1ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಡಿಸೆಂಬರ್ 4 ಕೊನೆಯ ದಿನವಾಗಿದ್ದು, 16ರಂದು ಮತದಾನ ನಡೆಯಲಿದೆ. ಡಿಸೆಂಬರ್ 19ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ನಾಮಪತ್ರ ಸಲ್ಲಿಸಲು ಡಿಸೆಂಬರ್ 4 ಕೊನೆಯ ದಿನವಾಗಿದ್ದು ಒಂದೊಮ್ಮೆ ರಾಹುಲ್ ಗಾಂಧಿ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದಿದ್ದಲ್ಲಿ, ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.
ಬಹುತೇಕ ರಾಹುಲ್ ಗಾಂಧಿ ಒಬ್ಬರೇ ನಾಮಪತ್ರ ಸಲ್ಲಿಸಲಿದ್ದು ಡಿಸೆಂಬರ್ 4ರಂದು ರಾಹುಲ್ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ.
ಡಿಸೆಂಬರ್ 31ರ ಒಳಗೆ ಪಕ್ಷದ ಎಲ್ಲಾ ಹುದ್ದೆಗಳಿಗೂ ಚುನಾವಣೆ ನಡೆಸಿ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಬೇಕಾಗಿದ್ದು ಅದಕ್ಕೂ ಮೊದಲು ಎಲ್ಲಾ ಪ್ರಕ್ರಿಯೆಗಳು ಮುಗಿಯಬೇಕಾಗಿದೆ.












Click it and Unblock the Notifications