ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ 6 ಗಂಟೆಗಳಲ್ಲಿ ತೀವ್ರಗೊಳ್ಳಲಿದೆ 'ಅಂಫಾನ್' ಚಂಡಮಾರುತ

|
Google Oneindia Kannada News

ನವದೆಹಲಿ, ಮೇ 18: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಅಂಫಾನ್ ಎಂಬ ಹೆಸರಿನ ಚಂಡ ಮಾರುತ ಸೃಷ್ಟಿಯಾಗಿರುವುದರಿಂದ ಕರಾವಳಿ ಭಾಗದಲ್ಲಿ ಭೀತಿ ಎದುರಾಗಿದೆ.

ಒಡಿಶಾದ ಪಾರದೀಪ್‌ನಿಂದ ದಕ್ಷಿಣಕ್ಕೆ 870 ಕಿ.ಮೀ ದೂರದಲ್ಲಿ ಕಾಣಿಸಿಕೊಂಡಿದ್ದ ತೀವ್ರ ಸ್ವರೂಪದ ಚಂಡಮಾರುತವು ಮುಂದಿನ ಆರು ಗಂಟೆಗಳಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ.

ಮೇ 20ರ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಚಂಡ ಮಾರುತವು ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಸಮುದ್ರ ತೀರದಿಂದ ಭೂಪ್ರದೇಶವನ್ನು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆ ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆ

ಹವಾಮಾನ ಇಲಾಖೆಯ ವಾಡಿಕೆಯಂತೆ ಮಾರ್ಚ್‌ನಿಂದ ಮೇ ವರೆಗೆ ಸುರಿಯುವ ಪೂರ್ವ ಮುಂಗಾರು ಮಳೆ ಉತ್ತಮ ಆರಂಭ ಪಡೆದಿದೆ. ಮಾ.1ರಿಂದ ಮೇ 15ರವರೆಗೆ ಅಂಕಿ ಅಂಶದಂತೆ ದಕ್ಷಿಣಕನ್ನಡದಲ್ಲಿ 113 ಮಿ.ಮೀ ವಾಡಿಕೆ ಮಳೆಯಲ್ಲಿ 139 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ ಶೇ.23ರಷ್ಟು ಹೆಚ್ಚಾಗಿದೆ.

ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ ಮುನ್ಸೂಚನೆ

ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆ ಮುನ್ಸೂಚನೆ

ಅಫಾನ್ ಚಂಡಮಾರುತ ಧಾವಿಸುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ನಿರ್ವಹಿಸಲೆಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾರ್ಯಪಡೆಯು ಒಡಿಶಾಗೆ 10 ಮತ್ತು ಪಶ್ಚಿಮ ಬಂಗಾಳಕ್ಕೆ 7 ತಂಡಗಳನ್ನು ರವಾನಿಸಿದೆ. ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳೊಂದಿಗೆ ಎನ್‌ಡಿಆರ್‌ಎಫ್ ಅಮನ್ವಯ ಸಾಧಿಸಿದ್ದು, ರಕ್ಷಣಾ ಚಟುವಟಿಕೆಗಳನ್ನು ಯೋಜಿಸುತ್ತಿದೆ.

ರಾಜ್ಯದ ಒಳನಾಡಿನಲ್ಲಿ ಸಾಧಾರಣ ಮಳೆ: ಇಂದು ಎಲ್ಲೆಲ್ಲಿ ಮಳೆ ಸಾಧ್ಯತೆ?ರಾಜ್ಯದ ಒಳನಾಡಿನಲ್ಲಿ ಸಾಧಾರಣ ಮಳೆ: ಇಂದು ಎಲ್ಲೆಲ್ಲಿ ಮಳೆ ಸಾಧ್ಯತೆ?

ಒಡಿಶಾದ 12 ಜಿಲ್ಲೆಗಳಿಗೆ ಹೈ ಅಲರ್ಟ್

ಒಡಿಶಾದ 12 ಜಿಲ್ಲೆಗಳಿಗೆ ಹೈ ಅಲರ್ಟ್

ಒಡಿಶಾ ಸರ್ಕಾರ ಶುಕ್ರವಾರದಿಂದಲೇ 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಕೊರೊನಾ ತಡೆಯಲು ಲಾಕ್ ಜಾರಿಯಲ್ಲಿರುವ ಕಾರಣ ಜನರು ಮನೆಯಲ್ಲಿಯೇ ಇದ್ದಾರೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಜಿಲ್ಲಾಡಳಿತ ಪರಿಸ್ಥಿತಿ ಎದುರಿಸಲು ಸಿದ್ಧವಾಗಿ ಇರುವಂತೆ ನಿರ್ದೇಶನ ನೀಡಲಾಗಿದೆ. ಅಂಫಾನ್ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿಯೂ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೋವಿಡ್ - 19 ಹೋರಾಟದಲ್ಲಿ ತೊಡಗಿರುವ ರಾಜ್ಯಗಳು ಹವಾಮಾನ ಇಲಾಖೆ ಮುನ್ಸೂಚನೆಯತ್ತಲೂ ಗಮನಹರಿಸಿವೆ.

ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆ

ಮುಂಗಾರು ವಿಳಂಬ

ಮುಂಗಾರು ವಿಳಂಬ

ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಈ ಬಾರಿಯ ಮುಂಗಾರು ವಿಳಂಬವಾಗಿ ಜೂನ್ 5ಕ್ಕೆ ಕೇರಳ ಕರಾವಳಿ ತೀರವನ್ನು ಪ್ರವೇಶಿಸುವ ಸಾಧ್ಯತೆ ಇದೆ. ಬಳಿಕ ಒಂದೆರೆಡು ದಿನಗಳಲ್ಲಿ ರಾಜ್ಯ ಕರಾವಳಿ ತೀರ ಪ್ರವೇಶಿಸಿ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಗಾಲ ಆರಂಭವಾಗುವ ನಿರೀಕ್ಷೆ ಇದೆ. ಚಂಡಮಾರುತ ಪ್ರಭಾವ ಮೇ ತಿಂಗಳಾಂತ್ಯದವರೆಗೆಇದ್ದರೆ ಮುಂಗಾರು ವಿಳಂಬವಾಗಬಹುದು.

ಅರಬ್ಬಿ ಸಮುದ್ರದಲ್ಲಿ ಟ್ರಫ್ ನಿರ್ಮಾಣ

ಅರಬ್ಬಿ ಸಮುದ್ರದಲ್ಲಿ ಟ್ರಫ್ ನಿರ್ಮಾಣ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಭೀತಿ ಉಂಟಾದರೆ ಇತ್ತ ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡ(ಟ್ರಫ್) ನಿರ್ಮಾಣವಾಗಿದೆ. ಇದೇ ಕಾರಣದಿಂದ ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಒಳನಾಡುಮ ಕರಾವಳಿ ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ.

ಮೇ 14ರಂದು ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ: 1 ವಾರ ರಾಜ್ಯದಲ್ಲಿ ಮಳೆಮೇ 14ರಂದು ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ: 1 ವಾರ ರಾಜ್ಯದಲ್ಲಿ ಮಳೆ

English summary
A cyclone alert has been sounded in West Bengal and Odisha as AMPHAN intensified into an "extremely severe" storm overnight, the weather office said. It is expected to make a landfall in Bengal on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X