ಅರ್ನಾಬ್ ಚಂಡಮಾರುತ ಭೀತಿ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, 9 ಬಂದರುಗಳಲ್ಲಿ ಹೈಅಲರ್ಟ್

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ದಕ್ಷಿಣ ಹಾಗೂ ಪೂರ್ವ ಭಾರತದ ಕರಾವಳಿ ರಾಜ್ಯಗಳಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಈ ಹವಾಮಾನ ವೈಪರೀತ್ಯ ಅರ್ನಾಬ್ ಚಂಡಮಾರುತ ಆಗಿ ಬದಲಾಗಲಿದ್ದು, ಅಕ್ಟೋಬರ್ 28 ರಂದು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು ಹಾಗೂ ಪುದುಚ್ಚೇರಿ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಕ್ಷಣಾ ಪಡೆಗಳನ್ನ ಸಜ್ಜುಗೊಳಿಸಲಾಗಿದೆ.

Cyclone Arnab Threat Schools Shut in Odisha Andhra Braces for Landfall Tamil Nadu on High Alert

ಆಂಧ್ರಪ್ರದೇಶದಲ್ಲಿ ಲ್ಯಾಂಡ್‌ಫಾಲ್

ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು ನೀಡಿರುವ ಮಾಹಿತಿ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಮುಂದಿನ ದಿನಗಳಲ್ಲಿ ತೀವ್ರಗೊಂಡು ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ.

ಅಕ್ಟೋಬರ್ 28ರ ಮುಂಜಾನೆ ಆಂಧ್ರಪ್ರದೇಶದ ಬಾಪಟ್ಲಾ ಮತ್ತು ವಿಶಾಖಪಟ್ಟಣಂ ನಡುವೆ ಈ ಅರ್ನಾಬ್ ಚಂಡಮಾರುತದಿಂದ ಭೂಕುಸಿತದಂತಹ ಘಟನೆಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ.

ಈ ಚಂಡಮಾರುತಕ್ಕೆ ಬಾಂಗ್ಲಾದೇಶವು 'ಅರ್ನಾಬ್' ಎಂದು ಹೆಸರಿಟ್ಟಿದ್ದು, ಬೆಂಗಾಲಿ ಭಾಷೆಯಲ್ಲಿ ಇದರ ಅರ್ಥ 'ಸಾಗರ' ಎಂದಾಗಿದೆ. ಲ್ಯಾಂಡ್‌ಫಾಲ್ ಸಮಯದಲ್ಲಿ ಪ್ರತಿ ಗಂಟೆಗೆ 115 ರಿಂದ 125 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗರಿಷ್ಠ 140 ಕಿ.ಮೀ ವೇಗವನ್ನು ತಲುಪುವ ಸಾಧ್ಯತೆಯಿದೆ.

ಒಡಿಶಾದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಚಂಡಮಾರುತವು ಆಂಧ್ರಪ್ರದೇಶದ ಕರಾವಳಿ ದಾಟಲಿದ್ದರೂ, ಇದರ ಪ್ರಭಾವ ಒಡಿಶಾದ ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳ ಮೇಲಾಗಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಯಾವುದೇ ಸಾವು ನೋವುಗಳಾಗಬಾರದು ಎನ್ನುವ ಗುರಿಯೊಂದಿಗೆ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗಂಜಾಂ, ಗಜಪತಿ, ರಾಯಗಡ, ಕೊರಾಪುಟ್ ಮತ್ತು ಮಲ್ಕನ್‌ಗಿರಿ ಜಿಲ್ಲೆಗಳಲ್ಲಿ ಅಕ್ಟೋಬರ್ 28 ಮತ್ತು 29 ರಂದು ಶಾಲಾ-ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಈ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದ್ದು, 20 ಸೆಂ.ಮೀ.ಗಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯ ವಿಪತ್ತು ಸ್ಪಂದನಾ ಪಡೆಯ (ODRAF) 60 ತಂಡಗಳು, ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ (NDRF) 17 ತಂಡಗಳು ಹಾಗೂ 225 ಅಗ್ನಿಶಾಮಕ ದಳದ ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗಾಗಿ ಸಜ್ಜುಗೊಳಿಸಲಾಗಿದೆ. ಎಲ್ಲಾ ಸರ್ಕಾರಿ ಅಧಿಕಾರಿಗಳ ರಜೆಯನ್ನ ರದ್ದುಗೊಳಿಸಲಾಗಿದ್ದು, ತಕ್ಷಣವೇ ಕೇಂದ್ರ ಕಚೇರಿಗಳಿಗೆ ಮರಳುವಂತೆ ಆದೇಶಿಸಲಾಗಿದೆ.

ಗಂಜಾಂ ಜಿಲ್ಲೆಯೊಂದರಲ್ಲೇ 100 ಚಂಡಮಾರುತ ಆಶ್ರಯ ತಾಣಗಳನ್ನ ಸಿದ್ಧಪಡಿಸಲಾಗಿದ್ದು, ಅಗತ್ಯ ಬಿದ್ದರೆ ಜನರನ್ನು ಸ್ಥಳಾಂತರಿಸಲು 1,000 ತಾತ್ಕಾಲಿಕ ಸ್ಥಳಗಳನ್ನ ಗುರುತಿಸಲಾಗಿದೆ. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳು ಹಾಗೂ ಹಾವು ಕಡಿತದ ಇಂಜೆಕ್ಷನ್‌ಗಳನ್ನ ದಾಸ್ತಾನು ಇಟ್ಟುಕೊಳ್ಳಲು ಸೂಚಿಸಲಾಗಿದೆ.

ತಮಿಳುನಾಡು ಮತ್ತು ಪುದುಚ್ಚೇರಿಯಲ್ಲಿ ಮಳೆ, 9 ಬಂದರುಗಳಲ್ಲಿ ಅಲರ್ಟ್

ಚಂಡಮಾರುತದ ಪ್ರಭಾವದಿಂದಾಗಿ ಈಗಾಗಲೇ ತಮಿಳುನಾಡು ಮತ್ತು ಪುದುಚ್ಚೇರಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪುದುಚ್ಚೇರಿಯ ಕರಾವಳಿ ರಸ್ತೆ, ಕೃಷ್ಣಾ ನಗರ ಸೇರಿದಂತೆ ಹಲವೆಡೆ ನೀರು ನಿಂತು ಜಲಾವೃತಗೊಂಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಚೆನ್ನೈ, ನಾಗಪಟ್ಟಣಂ, ಕಡಲೂರು, ಕಾರೈಕಲ್, ಪಂಬನ್ ಮತ್ತು ತೂತುಕುಡಿ ಸೇರಿದಂತೆ ಒಟ್ಟು 9 ಬಂದರುಗಳಲ್ಲಿ ಚಂಡಮಾರುತ ಮುನ್ಸೂಚನಾ ಸಿಗ್ನಲ್‌ಗಳನ್ನ ಹಾರಿಸಲಾಗಿದೆ.

ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದ್ದು, ಈಗಾಗಲೇ ಆಳ ಸಮುದ್ರದಲ್ಲಿರುವವರು ತಕ್ಷಣವೇ ಕರಾವಳಿಗೆ ಮರಳುವಂತೆ ಸೂಚಿಸಲಾಗಿದೆ. ರೈತರು ತಮ್ಮ ಬೆಳೆಗಳನ್ನು ರಕ್ಷಿಸಿಕೊಳ್ಳಲು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸರ್ಕಾರ ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+