Cyclone Biparjoy: ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಹೈ ಅಲರ್ಟ್
ದೆಹಲಿ ಜೂನ್ 10: ಬಿಪರ್‌ಜೋಯ್ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ. ಚಂಡಮಾರುತ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯನ್ನು ಉಂಟುಮಾಡಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ.
ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿಮೀ ದೂರದಲ್ಲಿ ಚಂಡಮಾರುತ ನೆಲೆಸಿದೆ. ಇದರಿಂದ ಗಂಟೆಗೆ 145 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. "ಜೂನ್ 9 ರ ನಂತರ ಚಂಡಮಾರುತ ಬಿಪಾರ್ಜೋಯ್ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮತ್ತಷ್ಟು ತೀವ್ರಗೊಳ್ಳುವ ಮತ್ತು ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ" ಎಂದು IMD ಟ್ವೀಟ್‌ನಲ್ಲಿ ತಿಳಿಸಿದೆ.

ಬಿಪರ್‌ಜೋಯ್ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಎತ್ತರದ ಅಲೆಗಳು ಮತ್ತು ಬಲವಾದ ಗಾಳಿ ಬೀಸಲಿದೆ. ಹೀಗಾಗಿ ಅರೇಬಿಯನ್ ಸಮುದ್ರದ ಕರಾವಳಿಯಲ್ಲಿರುವ ಗುಜರಾತ್‌ನ ವಲ್ಸಾದ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣವಾದ ತಿಥಾಲ್ ಬೀಚ್ ಅನ್ನು ಜೂನ್ 14 ರವರೆಗೆ ಪ್ರವಾಸಿಗರಿಗೆ ಮುಚ್ಚಲಾಗಿದೆ.
"ನಾವು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹೇಳಿದ್ದೇವೆ ಮತ್ತು ಅವರೆಲ್ಲರೂ ಹಿಂತಿರುಗಿದ್ದಾರೆ. ಅಗತ್ಯವಿದ್ದರೆ ಜನರನ್ನು ಸಮುದ್ರ ತೀರದಲ್ಲಿರುವ ಗ್ರಾಮಕ್ಕೆ ಸ್ಥಳಾಂತರಿಸಲಾಗುವುದು. ಅವರಿಗೆ ಆಶ್ರಯವನ್ನು ಮಾಡಲಾಗಿದೆ. ನಾವು ಜೂನ್ 14 ರವರೆಗೆ ಪ್ರವಾಸಿಗರಿಗೆ ತಿಥಾಲ್ ಬೀಚ್ ಅನ್ನು ಮುಚ್ಚಿದ್ದೇವೆ" ಎಂದು ವಲ್ಸಾದ್ ತಹಸೀಲ್ದಾರ್ ಟಿಸಿ ಪಟೇಲ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಗುಜರಾತ್, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ IMD ಸೂಚಿಸಿದೆ. ಕೇರಳದ ಎಂಟು ಜಿಲ್ಲೆಗಳಿಗೆ ಶುಕ್ರವಾರ ಹಳದಿ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತ ಗುಜರಾತ್‌ನ ಕರಾವಳಿ ಪೋರಬಂದರ್ ಜಿಲ್ಲೆಯ ದಕ್ಷಿಣ-ನೈಋತ್ಯಕ್ಕೆ 640 ಕಿಲೋಮೀಟರ್ ದೂರದಲ್ಲಿ ಕೇಂದ್ರೀಕೃತವಾಗಿದೆ. ಹೀಗಾಗಿ ಆಳ ಸಮುದ್ರ ಪ್ರದೇಶಗಳಿಂದ ಮೀನುಗಾರರು ಮರಳುವಂತೆ ತಿಳಿಸಲಾಗಿದೆ.
"ಇದು ಭಾನುವಾರ ಅಥವಾ ಸೋಮವಾರದಂದು ದಕ್ಷಿಣ ಗುಜರಾತ್‌ಗೆ ತಲುಪಬಹುದು. ಪ್ರಸ್ತುತ ಅಲರ್ಟ್ ಮೋಡ್‌ನಲ್ಲಿದ್ದೇವೆ ಮತ್ತು ಪ್ರಧಾನ ಕಚೇರಿಯಿಂದ ಹೊರಹೋಗದಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕರಾವಳಿ ಗ್ರಾಮದ ಜನರು ಎಸ್‌ಡಿಆರ್‌ಎಫ್ (ರಾಜ್ಯ ವಿಪತ್ತು ನಿರ್ವಹಣಾ ಪಡೆ) ತಂಡಗಳನ್ನು ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ ಇರಿಸಲಾಗಿದೆ. ಎಚ್ಚರಿಕೆ ನೀಡಲಾಗಿದೆ. ಅಗತ್ಯವಿದ್ದಲ್ಲಿ ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕಾಗುತ್ತದೆ'' ಎಂದು ಸೂರತ್‌ನ ಕಲೆಕ್ಟರ್ ಬಿಕೆ ವಾಸವ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
"ಚಂಡಮಾರುತದಿಂದಾಗಿ ಜೂನ್ 10, 11 ಮತ್ತು 12 ರಂದು ಗಾಳಿಯ ವೇಗ ಗಂಟೆಗೆ 45 ರಿಂದ 55 ಕಿಮಿ ವೇಗದಲ್ಲಿ ಬೀಸಲಿದೆ. ಈ ವೇಗ ಗಂಟೆಗೆ 65 ಗಡಿಯನ್ನು ಮುಟ್ಟಬಹುದು. ಈ ಚಂಡಮಾರುತ ಗುಜರಾತ್ ಮತ್ತು ಸೌರಾಷ್ಟ್ರ ದಕ್ಷಿಣ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಲಘು ಮಳೆ ಮತ್ತು ಗುಡುಗು ಸಹಿತ ಮಳೆಯನ್ನು ತರುತ್ತದೆ" ಎಂದು ಅಹಮದಾಬಾದ್‌ನಲ್ಲಿರುವ IMD ಯ ಹವಾಮಾನ ಕೇಂದ್ರದ ನಿರ್ದೇಶಕಿ ಮನೋರಮಾ ಮೊಹಂತಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಉಲ್ಲೇಖಿಸಿದೆ.
ಇದರಿಂದ ಉಂಟಾಗುವ ಸಮಸ್ಯೆಗಳನ್ನು ಎದುರಿಸಲು ಆಯಾ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ರಕ್ಷಣೆಗೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಎಚ್ಚರಿಕೆ ನೀಡಲಾಗಿದೆ.
ಚಂಡಮಾರುತಕ್ಕೆ ಬಾಂಗ್ಲಾದೇಶವು ಬಿಪರ್ಜೋಯ್ ಎಂದು ಹೆಸರಿಸಿದೆ. ಈ ಹೆಸರಿನ ಅರ್ಥ ಬಂಗಾಳಿ ಭಾಷೆಯಲ್ಲಿ ವಿಪತ್ತು ಎಂದಿದೆ. ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿ ಸೇರಿದಂತೆ ಉತ್ತರ ಹಿಂದೂ ಮಹಾಸಾಗರದ ಮೇಲೆ ರೂಪುಗೊಳ್ಳುವ ಎಲ್ಲಾ ಉಷ್ಣವಲಯದ ಚಂಡಮಾರುತಗಳಿಗೆ ವಿಶ್ವ ಹವಾಮಾನ ಸಂಸ್ಥೆ (WMO) ಹೆಸರಿಸುತ್ತದೆ.












Click it and Unblock the Notifications