Cyclone Biparjoy Flights Canceled: ಬಿಪರ್‌ಜಾಯ್ ಚಂಡಮಾರುತದಿಂದಾಗಿ ಮುಂಬೈನಲ್ಲಿ ವಿಮಾನಗಳ ಹಾರಾಟ ರದ್ದು
ಬಿಪರ್‌ಜಾಯ್ ಚಂಡಮಾರುತ ತೀವ್ರಗೊಂಡಿದ್ದು ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ಬಲವಾದ ಗಾಳಿ ಹಾಗೂ ಮಳೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದ ರನ್‌ವೇ 09/27 ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪರಿಣಾಮ ಕೆಲವು ವಿಮಾನಗಳ ವಿಳಂಬವಾಗಿದ್ದು ಇನ್ನೂ ಕೆಲವು ವಿಮಾನಗಳ ಹಾರಾಟ ರದ್ದಾಗಿದೆ. 'ನಮ್ಮ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ, ಏಕೆಂದರೆ ಅಡೆತಡೆಗಳನ್ನು ಕಡಿಮೆ ಮಾಡಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ' ಎಂದು ಏರ್ ಇಂಡಿಯಾ ಟ್ವೀಟ್ ಮಾಡಿದೆ.
ಗುಜರಾತ್ ಕರಾವಳಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸುತ್ತಿದ್ದು ಚಂಡಮಾರುತದ ತೀವ್ರತೆ ಕಾಣಿಸುತ್ತಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಅತ್ಯಂತ ಶಕ್ತಿಯುತವಾಗಿದೆ. ಅಂದಾಜಿನ ಪ್ರಕಾರ ಇದು ಗುಜರಾತ್‌ನ 6 ಜಿಲ್ಲೆಗಳಲ್ಲಿ ವಿನಾಶವನ್ನು ಉಂಟುಮಾಡುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ಇಲ್ಲಿ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.
IMPORTANT INFORMATION:
— Air India (@airindia) June 11, 2023
Inclement weather conditions and the temporary closure of Runway 09/27 at the Mumbai airport, in addition to other consequential factors beyond our control have resulted in delays and cancellation of some of our flights. We regret the inconvenience caused…

ಬಿಪರ್‌ಜೋಯ್ ಚಂಡಮಾರುತದಿಂದಾಗಿ ಗುಜರಾತ್‌ನ ಪೋರಬಂದರ್, ಜಾಮ್‌ನಗರ, ರಾಜ್‌ಕೋಟ್, ಜುನಾಗಡ್, ಕಚ್, ದ್ವಾರಕಾ ಮತ್ತು ಮೋರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಈ ಚಂಡಮಾರುತವು ಗುಜರಾತ್‌ನ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸುವ ಸಮಯದಲ್ಲಿ ಗಂಟೆಗೆ 150 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
#WATCH | Maharashtra: High tide hits Marine Drive in Mumbai; visuals from Gateway of India
— ANI (@ANI) June 11, 2023
According to IMD, light to moderate spells of rain with gusty winds reaching 45-55 kmph very likely to occur at isolated places in the districts of Thane, Raigad, Mumbai, and Palghar. pic.twitter.com/1BzYVljSD4
ಅಪಾಯಕಾರಿ ಸ್ಥಳಗಳಲ್ಲಿ NDRF ಮತ್ತು SDRF ಅನ್ನು ನಿಯೋಜಿಸಲಾಗಿದೆ. ಪ್ರಸ್ತುತ, ಚಂಡಮಾರುತ ಪೋರಬಂದರ್ ಜಿಲ್ಲೆಯಿಂದ ಸುಮಾರು 870 ಕಿಮೀ ನೈಋತ್ಯ ಸ್ಥಾನದಲ್ಲಿ ಸ್ಥಿರವಾಗಿದೆ ಮತ್ತು ವೇಗವಾಗಿ ಚಲಿಸುತ್ತಿದೆ. ಇದರಿಂದಾಗಿ ಗುಜರಾತ್, ಮುಂಬೈ, ಗೋವಾ, ಕರ್ನಾಟಕ, ತಮಿಳುನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಜೂನ್ 15 ರವರೆಗೆ ಕಚ್, ದ್ವಾರಕಾ, ಪೋರಬಂದರ್, ಜಾಮ್‌ನಗರ, ರಾಜ್‌ಕೋಟ್, ಜುನಾಗಢ್ ಮತ್ತು ಮೋರಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಗುಜರಾತಿನ ಸ್ಥಿತಿ ಹೀಗಿದ್ದರೆ, ಮತ್ತೊಂದೆಡೆ ಮುಂಬೈನಲ್ಲೂ ಇದರ ಪರಿಣಾಮ ಗೋಚರಿಸುತ್ತಿದೆ. IMD ಪ್ರಕಾರ, ಥಾಣೆ, ರಾಯಗಢ, ಮುಂಬೈ ಮತ್ತು ಪಾಲ್ಘರ್ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿಯ ವೇಗದೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
ಈ ಚಂಡಮಾರುತ ಅತ್ಯಂತ ಶಕ್ತಿಯುತವಾಗಿದೆ. ಇದರಿಂದಾಗಿ ಪೀಡಿತ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯ ಸಾಧ್ಯತೆಯಿದೆ. ಈ ಕಾರಣಕ್ಕಾಗಿ ಗುಜರಾತ್, ಮುಂಬೈ-ಗೋವಾ, ಕರ್ನಾಟಕ-ಕೇರಳ ಮತ್ತು ಲಕ್ಷದ್ವೀಪದ ಮೀನುಗಾರರಿಗೆ ಜೂನ್ 15 ರವರೆಗೆ ಸಮುದ್ರಕ್ಕೆ ಇಳಿಯದಂತೆ ತಿಳಿಸಲಾಗಿದೆ.
ಕರ್ನಾಟಕದಲ್ಲಿ ಬಿಪರ್‌ಜೋಯ್ ಚಂಡಮಾರುತ
ಬಿಪರ್‌ಜೋಯ್ ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಗಾತ್ರ ದೊಡ್ಡದಾಗುತ್ತಿವೆ. ಇದರಿಂದಾಗಿ ಕರ್ನಾಟಕ ಕರಾವಳಿಯಲ್ಲಿ ಕಡಲ ಕೊರೆತ ಆರಂಭವಾಘಿದೆ. ಅಲೆಗಳು ವೇಗವಾಗಿ ದಡಕ್ಕೆ ಅಪ್ಪಳಿಸುತ್ತಿದ್ದು, ಎರಡೇ ದಿನದಲ್ಲಿ ಐದು ಮೀಟರ್ ಭೂಮಿ ಸಮುದ್ರದ ಪಾಲಾಗಿದೆ. ಮುಂಗಾರು ಆರಂಭದ ಹಂತದಲ್ಲಿಯೇ ಅಲೆಗಳು ತೀವ್ರತೆ ಜಾಸ್ತಿಯಾಗುತ್ತಿರುವ ಕಾರಣ ಮನೆಗಳು ಧರೆಗುರುಳಿವೆ. ಇದಕ್ಕಾಗಿ ಶಾಶ್ವತ ಪರಿಹಾರ ನೀಡಬೇಕು ಎಂದು ಜನ ಆಗ್ರಹಿಸಿದ್ದಾರೆ.
ತೌಕ್ತೆ ಚಂಡಮಾರುತದ ಬಳಿಕ ಇದು ತೀವ್ರ ಸ್ವರೂಪದ ಚಂಡಮಾರುತ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ಕೇರಳದ ಮೂಲಕ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ. ಈಗಾಗಲೇ ಕರಾವಳಿಯಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಇದರ ಬೆನ್ನಲ್ಲೇ ಬಿಪರ್‌ಜೋಯ್ ಚಂಡಮಾರುತವು ಮತ್ತಷಟ್ಉ ಗಂಭೀರ ಸ್ವರೂಪ ಪಡೆಯುತ್ತಿರುವುದು ಆತಂಕ ಮೂಡಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು












Click it and Unblock the Notifications