Cyclone Dana: ಈ ಭಾಗಗಳಲ್ಲಿ ಬಿರುಗಾಳಿ ಮಳೆ ಮುನ್ಸೂಚನೆ
Cyclone Dana: ಡಾನಾ ಚಂಡಮಾರುತ ಕ್ಷಣ ಕ್ಷಣಕ್ಕೂ ತೀವ್ರತೆ ಪಡೆದುಕೊಳ್ಳುತ್ತಿದೆ. ಇದು ಇದೀಗ ದೇಶದ ಹಲವು ರಾಜ್ಯಗಳ ಮೇಲೆ ಪ್ರಭಾವ ಬೀರಿದ ಹಿನ್ನೆಲೆ ಭಾರೀ ಮಳೆಯಾಗುವ ಮನ್ಸೂಚನೆಯಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಹಲವು ಭಾಗಗಳಿಗೆ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.
ಮುಂಗಾರು ಬಳಿಕ ಇದೀಗ ದೇಶದ ಹಲವು ಭಾಗಗಳಲ್ಲಿ ಮತ್ತೆ ಮಳೆರಾಯ ತನ್ನ ಆರ್ಭಟವನ್ನು ಶುರು ಮಾಡಿದ್ದಾನೆ. ಕಾರಣ ಇದೀಗ ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಡಾನಾ ಚಂಡ ಮಾರುತ ಆಗಿದೆ. ಡಾನಾ ಚಂಡಮಾರುತವು ಇಂದು (ಅಕ್ಟೋಬರ್ 25) ಒಡಿಶಾದ ಕರಾವಳಿ ಮೇಲೆ ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ. ಬಳಿಕ ಪಶ್ಚಿಮ ಬಂಗಾಳ ತಲುಪುವ ಸಾಧ್ಯತೆಯಿದೆ. ಅಲ್ಲದೆ, ಕರ್ನಾಟಕ ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಡಾನ ಚಂಡಮಾರುತದ ಪರಿಣಾಮ ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ, ಬಿಹಾರ, ಛತ್ತೀಸ್ ಗಢ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ, ಈ ಭಾಗಗಳಲ್ಲಿ ಗಾಳಿಯ ವೇಗವು ಗಂಟೆಗೆ 120 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ ಎನ್ನುವ ಎಚ್ಚರಿಕೆ ಸಂದೇಶ ರವಾನಿಸಿದೆ.
ಇಂದು ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ ಭಾರತೀಯ ಕೋಸ್ಟ್ ಗಾರ್ಡ್ ಕಟ್ಟೆಚ್ಚರ ವಹಿಸಿದೆ ಮತ್ತು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ನಿಯೋಜಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications