School Holiday: ಭಾರೀ ಮಳೆ: ಈ ಭಾಗಗಳಲ್ಲಿ ಶಾಲಾ - ಕಾಲೇಜುಗಳಿಗೆ 3 ದಿನ ರಜೆ!
School Holiday: ತಮಿಳುನಾಡಿನಲ್ಲಿ ಈಶಾನ್ಯ ಮುಂಗಾರು ಪ್ರವೇಶ ಹಾಗೂ ಚಂಡಮಾರುತ ಪ್ರಸರಣದಿಂದ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಧಾರಾಕಾರ ಮಳೆ ಆಗುತ್ತಿದೆ. ಈ ವರ್ಷ ಮುಂಗಾರು ಮಳೆ ದೇಶದಾದ್ಯಂತ ಉತ್ತಮವಾಗಿ ಆಗಿದೆ. ಇದೇ ಸಂದರ್ಭದಲ್ಲಿ ಹಿಂಗಾರು ಮಳೆ ಸಹ ಉತ್ತಮವಾಗಿ ಆಗುವ ನಿರೀಕ್ಷೆ ಇದೆ. ಅಲ್ಲದೇ ಇದೀಗ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವೂ ಪರಿಣಾಮ ಬೀರಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಈಶಾನ್ಯ ಮುಂಗಾರು ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ದೇಶದಾದ್ಯಂತ ಅಕ್ಟೋಬರ್ 29ರ ವರೆಗೆ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರ್ನಾಟಕ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇದೀಗ ತಮಿಳುನಾಡಿನ ವಿವಿಧ ಭಾಗದಲ್ಲೂ ಧಾರಾಕಾರ ಮಳೆ ಆಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ತಮಿಳುನಾಡಿನ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚೆನ್ನೈ ಜಿಲ್ಲಾಧಿಕಾರಿ ರಶ್ಮಿಕಾ ಸಿದ್ಧಾರ್ಥ್ ಜಗಡೆ ಅವರು, ಭಾರೀ ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಬುಧವಾರ ಎಲ್ಲಾ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಲಾಗಿದೆ. ತಮಿಳುನಾಡು ಮಾತ್ರವಲ್ಲದೇ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಇನ್ನು ತಮಿಳುನಾಡಿನ ಕಡಲೂರು, ವಿಲ್ಲುಪುರಂ ಮತ್ತು ರಾಣಿಪೇಟೆಯ ಜಿಲ್ಲಾಧಿಕಾರಿಗಳು ಸಹ ತಮ್ಮ ಜಿಲ್ಲೆಗಳ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ತೂತುಕುಡಿಯಲ್ಲಿ ಶಾಲೆಗಳಿಗೆ ಮಾತ್ರ ರಜೆ ಇರಲಿದೆ ಎಂದು ಹೇಳಲಾಗಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪುದುಚೇರಿ ಮತ್ತು ಕಾರೈಕಲ್ ಭಾಗದಲ್ಲೂ ಶಾಲಾ - ಕಾಲೇಜುಗಳಿಗೆ ರಜೆ ನೀಡಲಾಗಿದೆ. ತಮಿಳುನಾಡಿನಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆ.
ಏತನ್ಮಧ್ಯೆ ಚೆನ್ನೈನ ಐಕಾನಿಕ್ ಮರೀನಾ ಸಮುದ್ರ ಪ್ರದೇಶದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈಶಾನ್ಯ ಮಾನ್ಸೂನ್ ಚುರುಕು ಪಡೆದುಕೊಂಡ ಬೆನ್ನಲ್ಲೇ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ. ಮುಂದಿನ ಎರಡು ದಿನಗಳವರೆಗೆ ಸಮುದ್ರದ ಪ್ರಕ್ಷುಬ್ಧ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಎಂ.ಕೆ ಸ್ಟಾಲಿನ್ ಸಭೆ: ಇನ್ನು ತಮಿಳುನಾಡಿನಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ನೀಡಲಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ತಮಿಳುನಾಡಿನಲ್ಲಿ ಭಾರೀ ಮಳೆ ಆಗುತ್ತಿರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿ.ಎಂ ಎಂ.ಕೆ ಸ್ಟಾಲಿನ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.












Click it and Unblock the Notifications