Heavy Rain: ಚಂಡಮಾರುತ ಪ್ರಸರಣ: ಈ ಭಾಗಗಳಲ್ಲಿ ಧಾರಾಕಾರ ಮಳೆ! ಜುಲೈ 10ರ ವರೆಗೆ ಮಳೆ ಆರ್ಭಟ

Heavy Rain: ದೇಶದಾದ್ಯಂತ ಮಾನ್ಸೂನ್ ಪ್ರಬಲವಾಗಿದ್ದು ಧಾರಾಕಾರ ಮಳೆಯಾಗುತ್ತಿದೆ. ದೇಶದಾದ್ಯಂತ ಮುಂಗಾರು ಅವಧಿಯಲ್ಲಿ ಈಗಾಗಲೇ ಶೇ 7% ಗಿಂತಲೂ ಹೆಚ್ಚು ಮಳೆಯಾಗಿದೆ. ಉತ್ತರ ಭಾರತ, ಈಶಾನ್ಯ ಹಾಗೂ ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕೇರಳದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು. ಕೇರಳದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ವಾಯುವ್ಯ ಬಂಗಾಳ ಕೊಲ್ಲಿ ಮತ್ತು ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಕಡಿಮೆ ಒತ್ತಡ ಸೃಷ್ಟಿಯಾಗಿದ್ದು, ವಿವಿಧ ರಾಜ್ಯಗಳಲ್ಲಿ ಮಳೆ ಆರ್ಭಟಕ್ಕೆ ಕಾರಣವಾಗಿದೆ. ಈಶಾನ್ಯ ಅರೇಬಿಯನ್ ಸಮುದ್ರದಿಂದ ಬಂಗಾಳಕೊಲ್ಲಿಯವರೆಗೆ ವಾಯುಭಾರ ಕುಸಿತ ಸೃಷ್ಟಿಯಾಗಿದೆ. ಚಂಡಮಾರುತದ ಪ್ರಸರಣದಿಂದಾಗಿ ವ್ಯಾಪಕ ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Cyclone Heavy rain in these parts Rainstorm till July 10

ಇನ್ನು ಈ ಬಾರಿ ದೇಶದಲ್ಲಿ ಮಾನ್ಸೂನ್ ಮಳೆ ಆರ್ಭಟ ಜೋರಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಮಳೆ ಪ್ರಮಾಣ ಹೆಚ್ಚಳವಾಗಿದೆ. ಭಾರತದಲ್ಲಿ ಒಂದು ವಾರದಿಂದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಇದು ಸರಾಸರಿ ಮಳೆಗಿಂತ ಶೇ. 102% ರಷ್ಟು ಹೆಚ್ಚು ಎಂದು ಹೇಳಲಾಗಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಹಾಗೂ ಗುಜರಾತ್ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಹಾಗೂ ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಧಾರಾಕಾರ ಮಳೆ!

ಇನ್ನು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ ಮುಂದುವರಿದಿದೆ. ಕೇರಳ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ಆರ್ಭಟ ಮುಂದುವರಿದೆ. ಜೂನ್ 29 ರವರೆಗೆ ಕರ್ನಾಟಕ, ಆಂಧ್ರಪ್ರದೇಶದ ಕರಾವಳಿ ಹಾಗೂ ತೆಲಂಗಾಣ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಮುನ್ಸೂಚನೆ ನೀಡಿದೆ. ಈ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 60 ಕಿ.ಮೀ. ವೇಗದಲ್ಲಿ ಇರಲಿದೆ ಎಂದು ಹೇಳಲಾಗಿದೆ.

ಮಾನ್ಸೂನ್ ಮಳೆ ಆರ್ಭಟ: ಮಾನ್ಸೂನ್ ಮಳೆ ಆರ್ಭಟ ಮುಂದುವರಿದಿದ್ದು. ದೇಶದಾದ್ಯಂತ ಜುಲೈ 10ರ ವರೆಗೆ ಮಳೆ ಮಳೆ ಅಬ್ಬರ ಮುಂದುವರಿಯಲಿದೆ. ಈ ಅವಧಿಯಲ್ಲಿ ಮಧ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲಿ ಇಂದೂ ಸಹ ಮಳೆ ಆರ್ಭಟ ಜೋರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+