ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜವಾದ್ ಚಂಡಮಾರುತ: ಆಂಧ್ರ ಪ್ರದೇಶ, ಒಡಿಶಾ ಕರಾವಳಿಯಲ್ಲಿ ಸ್ಥಳಾಂತರ ಕಾರ್ಯ

|
Google Oneindia Kannada News

ನವದೆಹಲಿ, ಡಿಸೆಂಬರ್ 4: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಜವಾದ್ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದೆ. ಜವಾದ್ ಚಂಡಮಾರುತ ಭಾನುವಾರ ಮಧ್ಯಾಹ್ನದ ವೇಳೆಗೆ ಒಡಿಶಾದ ಪುರಿಗೆ ಲುಪುವ ನಿರೀಕ್ಷೆಯಿದೆ.

ಜವಾದ್ ಚಂಡಮಾರುತದಿಂದ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿ ಜಿಲ್ಲೆಗಳಲ್ಲಿ ಸ್ಥಳಾಂತರಿಸುವಿಕೆ ಕಾರ್ಯವನ್ನು ಶುರು ಮಾಡಲಾಗಿದೆ. ಆಂಧ್ರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ತಮಿಳುನಾಡು, ಅಂಡಮಾನ ಮತ್ತು ನಿಕೋಬಾರ್ ಪ್ರದೇಶದಲ್ಲಿ ಒಟ್ಟು 64 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF)ಯ ಸಿಬ್ಬಂದಿ ನಿಯೋಜಿಸಲಾಗಿದೆ.

ಡಿಸೆಂಬರ್ 8ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಡಿಸೆಂಬರ್ 8ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ

ಜವಾದ್ ಚಂಡಮಾರುತವು ಶನಿವಾರ ಬೆಳಗ್ಗೆ ಒಡಿಶಾ ಮತ್ತು ಆಂಧ್ರಪ್ರದೇಶದ ಉತ್ತರ ಕರಾವಳಿಗೆ ತಲುಪಲಿದೆ. ನಂತರ ಕರಾವಳಿಯುದ್ದಕ್ಕೂ ಚಲಿಸಿ ಮಧ್ಯಾಹ್ನದ ಹೊತ್ತಿಗೆ ಪುರಿಯ ತೀರವನ್ನು ಮುಟ್ಟುಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಜವಾದ್ ಚಂಡ ಮಾರುತ ಮತ್ತು ಸ್ಥಳಾಂತರಿಸುವ ಪ್ರಕ್ರಿಯೆ ಕುರಿತು ಒಂದು ವರದಿ ಇಲ್ಲಿದೆ ಓದಿ.

Cyclone Jawad: Odisha, Andhra Pradesh begun evacuations as the cyclone is likely to bring heavy rains


ಜವಾದ್ ಚಂಡಮಾರುತಕ್ಕೆ ಸಂಬಂಧ ಪ್ರಮುಖ ಅಂಶಗಳು:

* ಜವಾದ್ ಚಂಡಮಾರುತ ಎದುರಿಸಲು ಕೈಗೊಳ್ಳಲಾಗುತ್ತಿರುವ ಸಿದ್ಧತೆಗಳ ಕುರಿತು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಪರಿಶೀಲಿಸಿದರು. ಯಾವುದೇ ರೀತಿ ಆಸ್ತಿ ಪಾಸ್ತಿ ಹಾಗೂ ಪ್ರಾಣಹಾನಿ ಆಗದಂತೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

* ಚಂಡಮಾರುತದಿಂದ ಅಪ್ಪಳಿಸುವ ನಿರೀಕ್ಷೆಯಿರುವ ಪ್ರದೇಶಗಳಲ್ಲಿ 64 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF)ಗಳನ್ನು ನಿಯೋಜಿಸಲಾಗುತ್ತಿದೆ.

* ಆಂಧ್ರಪ್ರದೇಶದ ಶ್ರೀಕಾಕುಳಂ, ವಿಜಯನಗರ ಮತ್ತು ವಿಶಾಖಪಟ್ಟಣಂ ಜಿಲ್ಲೆಗಳಿಗೆ ಶನಿವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಒಡಿಶಾದ ಮೂರು ಜಿಲ್ಲೆಗಳಾದ ಗಜಪತಿ, ಗಂಜಾಂ, ಪುರಿ ಮತ್ತು ಜಗತ್‌ಸಿಂಗ್‌ಪುರದಲ್ಲೂ ಇದೇ ರೀತಿಯ ಎಚ್ಚರಿಕೆ ನೀಡಲಾಗಿದೆ.

* ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಗುರುವಾರ ಲಘುವಾಗಿ ಸಾಧಾರಣ ಮಳೆಗೆ ಸಾಕ್ಷಿಯಾಗಬಹುದು ಮತ್ತು ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರಾವಳಿ ಆಂಧ್ರಪ್ರದೇಶದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

* ಶುಕ್ರವಾರದಿಂದ ವಾರಾಂತ್ಯದವರೆಗೆ ಆಂಧ್ರಪ್ರದೇಶ, ಒಡಿಶಾದಿಂದ ಗಂಗಾನದಿ ಪಶ್ಚಿಮ ಬಂಗಾಳದವರೆಗೆ ಕರಾವಳಿಯಾದ್ಯಂತ ಒಟ್ಟು 150-200 ಮಿಮೀ ಮಳೆಯ ಪ್ರಮಾಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ತಪಾಮಾನ ಮತ್ತಷ್ಟು ಇಳಿಕೆಯಾಗಲಿದೆ.

* ಹವಾಮಾನ ಮುನ್ಸೂಚನೆಯಿಂದಾಗಿ ವಾಲ್ಟೇರ್ ವಿಭಾಗ ಮತ್ತು ಈಸ್ಟ್ ಕೋಸ್ಟ್ ರೈಲ್ವೇ ಮೂಲಕ ಚಲಿಸುವ 95 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ.

* ಜವಾದ್ ಚಂಡಮಾರುತದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಪುರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಶಾಸ್ತ್ರೀಯ ನೃತ್ಯ ಉತ್ಸವ, ಕೋನಾರ್ಕ್ ಉತ್ಸವ ಮತ್ತು ಮರಳು ಕಲಾ ಕಾರ್ಯಕ್ರಮ, ಅಂತರರಾಷ್ಟ್ರೀಯ ಮರಳು ಕಲಾ ಉತ್ಸವವನ್ನು ರದ್ದುಗೊಳಿಸಲಾಗಿದೆ.

* ಚಂಡಮಾರುತಕ್ಕೆ ಜವಾದ್ ಚಂಡಮಾರುತದ ಹೆಸರನ್ನು ಸೌದಿ ಅರೇಬಿಯಾ ಪ್ರಸ್ತಾಪಿಸಿದೆ.

* ಜನರ ನೆರವಿಗಾಗಿ ವಿಪತ್ತು ನಿರ್ವಹಣಾ ಕೇಂದ್ರಗಳನ್ನು ತೆರೆಯಲಾಗಿದೆ. ವಿಪತ್ತು ನಿರ್ವಹಣೆಯ ಸಮಯದಲ್ಲಿ ಪ್ರಯಾಣಿಕರಿಗೆ ಮಾರ್ಗದರ್ಶನ ನೀಡಲು ಮತ್ತು ಸಹಾಯ ಮಾಡಲು ಪೀಡಿತ ಪ್ರದೇಶದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ಸಹ ಸ್ಥಾಪಿಸಲಾಗಿದೆ.

* ಆಂಧ್ರಪ್ರದೇಶದ ಮೂರು ಜಿಲ್ಲೆಗಳಿಂದ 54,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ರಕ್ಷಣಾ ತಂಡವು ಶ್ರೀಕಾಕುಳಂ ಜಿಲ್ಲೆಯಿಂದ 15,755 ಜನರನ್ನು, ವಿಜಯನಗರದಿಂದ 1,700 ಮತ್ತು ವಿಶಾಖಪಟ್ಟಣದಿಂದ 36,553 ಜನರನ್ನು ಸ್ಥಳಾಂತರಿಸಿದೆ.

* ಒಡಿಶಾದ 19 ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

English summary
Cyclone Jawad: Odisha, Andhra Pradesh begun evacuations as the cyclone is likely to bring heavy rains.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X