ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್ಚರ..ಈಶಾನ್ಯ ತೀರಕ್ಕೆ ಅಪ್ಪಳಿಸಲಿದೆ 'ಕೊಮೆನ್'

|
Google Oneindia Kannada News

ಕೋಲ್ಕೊತಾ, ಜು. 30: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಕೊಮೆನ್‌ ಚಂಡಮಾರುತ ಗಂಟೆಗೆ 80-90 ಕಿಮೀ ವೇಗದಲ್ಲಿ ಮುನ್ನುಗ್ಗುತ್ತಿದ್ದು ಬಾಂಗ್ಲಾದೇಶ, ಪಶ್ಚಿಮ ಬಂಗಾಳ, ಒಡಿಶಾ ಭಾಗದಲ್ಲಿ ಭಾರೀ ಮಳೆ ಸುರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗುರುವಾರ ರಾತ್ರಿ ಚಂಡಮಾರುತ ಬಾಂಗ್ಲಾ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ. ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗಲಿದ್ದು ಜನರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯಾದರೆ ದಕ್ಷಿಣ ಬಂಗಾಳದ ಜಿಲ್ಲೆಗಳು ಪ್ರವಾಹಕ್ಕೆ ಸಿಲುಕಲಿವೆ.[ಚಂಡಮಾರುತದ ಹೆಸರಿನ ರಹಸ್ಯ ಹುಡುಕುತ್ತಾ...]

rain

ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಏಳುವ ಸಂಭವವಿದ್ದು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. 21 ರಕ್ಷಣಾ ಪಡೆಗಳನ್ನು ವಿವಿಧೆಡೆ ನಿಯೋಜನೆ ಮಾಡಲಾಗಿದ್ದು ಸುರಕ್ಷತಾ ಕ್ರಮ ತೆಗೆದುಕೊಳ್ಳಲಾಗಿದೆ. ರಾಜಸ್ಥಾನ, ಅಹಮದಾಬಾದ್ ನಲ್ಲೂ ಮಳೆ ಅಬ್ಬರಿಸುತ್ತಿದೆ. ಮಹಾರಾಷ್ಟ್ರ ಮತ್ತು ನವದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ.

ಕರ್ನಾಟಕದ ಹವಾಮಾನವೇನು?
ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲೂ ಕಳೆದ ಕೆಲ ದಿನಗಳಿಂದ ಮಳೆ ಮಾಯವಾಗಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

English summary
Cyclonic storm 'Komen' in the Bay of Bengal, is expected to cross the Bangladesh coast by Thursday afternoon, the India Meteorological Department (IMD) said. The cyclone will cross the Bangladesh coast at a maximum wind speed of 80-90km per hour.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X