Cyclone Michaung: ಭಾರೀ ಮಳೆ ಹಿನ್ನೆಲೆ ಈ ಭಾಗದಲ್ಲಿ ಡಿಸೆಂಬರ್‌ 7ರವರೆಗೆ 144 ರೈಲುಗಳ ಸೇವೆ ರದ್ದು

ಮೈಚಾಂಗ್‌ ಚಂಡಮಾರುತದ ಪ್ರಭಾವದಿಂದ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಈ ಹಿನ್ನೆಲೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಅಬ್ಬರದ ಮಳೆಯಾಗುತ್ತಲೇ ಇದೆ. ಇನ್ನು ತಿರುವಲ್ಲೂರು ಮತ್ತು ಚೆನ್ನೈ ಜನರು ಡಿಸೆಂಬರ್‌ 4 ಮತ್ತು 5ರಂದು ಮನೆಯ ಒಳಗೇ ಇರುವಂತೆ ಐಎಂಡಿ ತಿಳಿಸಿದೆ. ಹಾಗೂ ಡಿಸೆಂಬರ್‌ 7ರವರೆಗೆ ಸುಮಾರು 144 ರೈಲುಗಳ ಸೇವೆ ರದ್ದಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಪರಿಣಾಮ ಚೆನ್ನೈನ ಹಲವು ಭಾಗಗಳಲ್ಲಿ ಡಿಸೆಂಬರ್‌ 5ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ ತಮಿಳುನಾಡು ಚಂಡಮಾರುತವನ್ನು ಎದುರಿಸಲು ಸನ್ನದ್ಧವಾಗಿದೆ. ಹಾಗೆಯೇ ಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ ಜಿಲ್ಲಾಡಳಿತಗಳು ಇಂದು (ಡಿಸೆಂಬರ್‌ 04) ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ. ಬೀಚ್‌ಗಳಿಗೆ ಜನರು ಹೋಗಬಾರದು ಅಂತಲೂ ಗ್ರೇಟರ್‌ ಚೆನ್ನೈ ಪೊಲೀಸರು ಸೂಚನೆ ನೀಡಿದ್ದಾರೆ.

Cyclone Michaung: 144 trains service canceled till December 7 in these parts of India

ಬಂಗಾಳಕೊಲ್ಲಿಯಲ್ಲಿ ಡಿಸೆಂಬರ್‌ 3ರ ವೇಳೆಗೆ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ಇದು ಡಿಸೆಂಬರ್‌ 4ರಂದು ಆಂಧ್ರಪ್ರದೇಶ, ತಮಿಳುನಾಡು ಕರಾವಳಿಗೆ ಅಪ್ಪಳಿಸಿಸಲಿದೆ. ಇದರ ಪ್ರಭಾವ 16 ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಬಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರ ಈ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಈ ಚಂಡಮಾರುತಕ್ಕೆ ಮ್ಯಾನ್ಮರ್‌ ಸಲಹೆಯಂತೆ ಮಿಂಚಿಂಗ್‌ ಎಂದು ಹೆಸರಿಡಲಾಗಿದೆ.

ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ಅರಿಯಲೂರು, ಪೆರಂಬಲೂರು, ಕಲ್ಲಕುರಿಚ್ಚಿ, ವೆಲ್ಲೂರು, ತಿರುಪತ್ತೂರು, ಧರ್ಮಪುರಿ, ಕೃಷ್ಣಗಿರಿ ಸೇಲಂ, ನಾಮಕ್ಕಲ್‌ ಜಿಲ್ಲೆಗಳಲ್ಲಿ ಗುಡುಗು ಸಹಿತ ಸುನಾಮಿ ಮಳೆ ಸುರಿಯುವ ಸಾಧ್ಯತೆಯುದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

4 ದಿನ ಭಾರೀ ಮಳೆ ಮುನ್ಸೂಚನೆ

ಈಗಾಗಲೇ ಕಳೆದ ಒಂದು ವಾರದದಿಂದಲೂ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಬಿಟ್ಟುಬಿಡದೇ ಭಾರೀ ಮಳೆಯಾಗುತ್ತಿದೆ. ಮೈಚಾಂಗ್ ಚಂಡಮಾರುತ ಹಿನ್ನೆಲೆ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮ ತಮಿಳುನಾಡು, ಕೇರಳ ಸೇರಿದಂತೆ ಹಲವು ರಾಜ್ಯಗಳ ಮೇಲೂ ಬೀರಿದೆ. ಅಲ್ಲದೆ ಇಂದಿನಿಂದಲೂ ಡಿಸೆಂಬರ್‌ 4ರವರೆಗೂ ಈ ಚಂಡಮಾರುತದ ಪ್ರಭಾವ ತೀವ್ರತೆ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕಳೆದ 6 ಗಂಟೆಗಳಲ್ಲಿ 9 ಕಿ.ಮೀ ವೇಗದಲ್ಲಿ ಪಶ್ಚಿಮ-ವಾಯುವ್ಯದತ್ತ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಚಂಡಮಾರುತವು ಚೆನ್ನೈನ ಪೂರ್ವ-ಆಗ್ನೇಯಕ್ಕೆ 630 ಕಿ.ಮೀಟರ್‌, ನೆಲ್ಲೂರಿನಿಂದ ಆಗ್ನೇಯಕ್ಕೆ 740 ಕಿಲೋ ಮೀಟರ್‌, ಬಾಪಟ್ಲಾದಿಂದ 810 ಕಿ.ಮೀ. ಆಗ್ನೇಯ ಮತ್ತು ಮಚಲಿಪಟ್ನಂನಿಂದ ದಕ್ಷಿಣ-ಆಗ್ನೇಯಕ್ಕೆ 800 ಕಿಲೋ ಮೀಟರ್‌ ಇರಲಿದೆ. ಇನ್ನು ಮುಂದಿನ 12 ಗಂಟೆಗಳಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ. ಮತ್ತು ಡಿಸೆಂಬರ್ 3ರ ವೇಳೆಗೆ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಸೈಕ್ಲೋನಿಕ್‌ ಚಂಡಮಾರುತ 'ಮೈಚಾಂಗ್' ಆಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಚಂಡಮಾರುತವು ಡಿಸೆಂಬರ್ 4ರ ಮುಂಜಾನೆಯ ಹೊತ್ತಿಗೆ ದಕ್ಷಿಣ ಆಂಧ್ರಪ್ರದೇಶದ ಸಮೀಪ ಮತ್ತು ಉತ್ತರ ತಮಿಳುನಾಡು ಕರಾವಳಿಯನ್ನು ತಲುಪುತ್ತದೆ ಎಂದು ಮುನ್ಸೂಚನೆ ಇದೆ. ಇದು ಉತ್ತರದ ಕಡೆಗೆ ಚಲಿಸುವ ನಿರೀಕ್ಷೆಯಿದೆ. ಈಗಾಗಲೇ ಇದು ದಕ್ಷಿಣ ಆಂಧ್ರಪ್ರದೇಶ ಕರಾವಳಿಗೆ ಹತ್ತಿರದಲ್ಲಿದೆ. ಡಿಸೆಂಬರ್ 5ರ ಮುಂಜಾನೆ ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ಭೂಕುಸಿತವಾಗುವ ನಿರೀಕ್ಷೆಯಿದೆ. ಈ ವೇಳೆ ಸೈಕ್ಲೋನಿಕ್ ಚಂಡಮಾರುತದ ಪ್ರಭಾವದಿಂದ ಗಾಳಿಯ ವೇಗವು ಗಂಟೆಗೆ 80-90 ಕಿ.ಮೀಟರ್‌ ಇರಲಿದ್ದು, ಗರಿಷ್ಠ ಗಾಳಿಯ ವೇಗವು ಗಾಳಿಯು 100 ಕಿ.ಮೀಟರ್‌ವರೆಗೂ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶುಕ್ರವಾರ 12 ಜಿಲ್ಲಾಡಳಿತ ಮುಖ್ಯಸ್ಥರೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಮುಂದಿನ 2-3 ದಿನಗಳಲ್ಲಿ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯನ್ನು ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಕುರಿತು ಸ್ಟಾಲಿನ್ ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಿದರು. ಮುಂಬರುವ ಚಂಡಮಾರುತಕ್ಕೆ ಗುರಿಯಾಗುವ ಪ್ರದೇಶಗಳಿಂದ ನಿವಾಸಿಗಳನ್ನು ಸ್ಥಳಾಂತರಿಸುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಂಗಾಳ ಕೊಲ್ಲಿಯಲ್ಲಿ ಸನ್ನಿಹಿತವಾಗಿರುವ 'ಮೈಚಾಂಗ್' ಚಂಡಮಾರುತ ಹಿನ್ನೆಲೆ, ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ನೇತೃತ್ವದ ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿಯು (ಎನ್‌ಸಿಎಂಸಿ) ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+