Cyclone Michaung: ಬೆಂಗ್ಳೂರು ಸೇರಿದಂತೆ ದೇಶದ ಈ ಭಾಗದಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

ಸೋಮವಾರ, ಡಿಸೆಂಬರ್ 11: ಮೈಚಾಂಗ್‌ ಚಂಡಮಾರುತ ಹಿನ್ನೆಲೆ ದೇಶದ ಬಹುತೇಕ ಹಲವು ಭಾಗಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ಅದರಲ್ಲೂ ದಕ್ಷಿಣ ಭಾಗದ ರಾಜ್ಯಗಳಾದ ಕೇರಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ಮೇಲೂ ಈ ಚಂಡಮಾರುತ ಅಪಾರ ಪರಿಣಾಮ ಬೀರಿದ್ದು, ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಹಾಗೆಯೇ ಇನ್ನೂ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಬೆಂಗಳೂರು ಸೇರಿದಂತೆ ದೇಶದ ಈ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಉದ್ಭವವಾದ ಮೈಚಾಂಗ್ ಚಂಡಮಾರುತವು ಬಂದು ಹೋಗಿದ್ದು, ಮೋಡಗಳು ಆಕಡೆಯಿಂದ ಈಕಡೆಗೆ ಸಂಚರಿಸುತ್ತಲೇ ಇವೆ. ಅಲ್ಪಾವಧಿಯ ವಿರಾಮದ ನಂತರ, ದಕ್ಷಿಣ ಭಾರತದ ಹಲವೆಡೆ ಮಳೆ ಮುಂದುವರೆಯಲಿದೆ. ಅದರಲ್ಲೂ ಡಿಸೆಂಬರ್‌ 12ರಿಂದ ಮುಂದಿನ ಎರಡು ದಿನಗಳ ಕಾಲ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Cyclone michaung: Heavy rainfall forecast for next 2 days in these Parts of india

ಈ ಚಂಡಮಾರುತದ ಪ್ರಭಾವದಿಂದ ಮುಂದಿನ ಎರಡು ದಿನಗಳಲ್ಲಿ ಕೇರಳದ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ ಎನ್ನುವ ಮಾಹಿತಿಯನ್ನು ನೀಡಿದೆ.

ವಿಶೇಷವಾಗಿ ತಮಿಳುನಾಡಿನ ಕೊಯಮತ್ತೂರು, ನೀಲಗಿರಿ, ರಾಮನಾಥಪುರಂ, ತಿರುನಲ್ವೇಲಿ, ತೂತುಕುಡಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅದೇ ರೀತಿ, ಕೇರಳದಲ್ಲಿ ತಿರುವನಂತಪುರಂ, ಎರ್ನಾಕುಲಂ, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಚೆನ್ನೈ ಮತ್ತು ಬೆಂಗಳೂರಿನಂತಹ ಇತರ ಪ್ರಮುಖ ನಗರಗಳಲ್ಲಿ ಲಘು ಮಳೆಯಾಗಲಿದೆ ಎಂದು ತಿಳಿಸಿದೆ.

ಈ ತಿಂಗಳಿನಿಂದ ಇಲ್ಲಿಯವರೆಗೆ ದಕ್ಷಿಣ ರಾಜ್ಯಗಳು ಅತಿವೃಷ್ಟಿಯನ್ನು ಅನುಭವಿಸುತ್ತಿವೆ. ಡಿಸೆಂಬರ್ 1 ಮತ್ತು 10ರ ನಡುವೆ ತಮಿಳುನಾಡು (52.7 ಮಿಮೀ), ಕೇರಳ (44.5 ಮಿಮೀ) ಮತ್ತು ಕರ್ನಾಟಕ (5.2 ಮಿಮೀ) ಕ್ರಮವಾಗಿ 29%, 183% ಮತ್ತು 57%ನಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+