Cyclone Montha: ಮೋಂಥಾ ಚಂಡಮಾರುತ ಹಿನ್ನೆಲೆ ಈ ಭಾಗಗಳಿಗೆ ಜಲಪ್ರಳಯದ ಮುನ್ಸೂಚನೆ

Cyclone Montha: ಈಗಾಗಲೇ ಬಂಗಾಳಕೊಲ್ಲಿಯಲ್ಲಿ 'ಶಕ್ತಿ ಚಂಡಮಾರುತ' ಸೃಷ್ಟಿ ಹಿನ್ನೆಲೆ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಜಲಪ್ರಳಯ ಸಂಭವಿಸಿ ಜನರು ತತ್ತರಿಸಿ ಹೋಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹೊಸ ಸೈಕ್ಲೋನ್‌ ರೂಪುಗೊಂಡಿದ್ದು, ಈ ಭಾಗಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ 'ಮೋಂಥಾ' ಚಂಡಮಾರುತ ಹಿನ್ನೆಲೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಶುಕ್ರವಾರ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ತಮಿಳುನಾಡಿನ ಚೆನ್ನೈ ನಗರ ಮತ್ತು ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿರುವ ಬಗ್ಗೆ ವರದಿಯಾಗಿದೆ.

Cyclone Montha to Intensify Over Bay of Bengal Heavy Rain Predicted in Tamil Nadu Andhra Karnataka

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ, ಅಕ್ಟೋಬರ್ 27ರಂದು ಚೆನ್ನೈ, ತಿರುವಲ್ಲೂರು ಮತ್ತು ರಾಣಿಪೇಟೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಭಾಗಗಳಲ್ಲಿ 12-20 ಸೆಂ.ಮೀ. ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಈ ಚಂಡಮಾರುವು ಅಕ್ಟೋಬರ್ 27ರಂದು ತೀವ್ರಗೊಳ್ಳುವ ಸಾಧ್ಯತೆಯಿದೆ. ಈ ಚಂಡಮಾರುತಕ್ಕೆ 'ಮೋಂಥಾ' ಎಂದು ಹೆಸರಿಡಲಾಗಿದೆ. ಈ ಹೆಸರನ್ನು ಥೈಲ್ಯಾಂಡ್ ನೀಡಿದ್ದು, ಅದರ ಅರ್ಥ "ಪರಿಮಳಯುಕ್ತ ಹೂವು" ಅಥವಾ "ಸುಂದರ ಹೂವು" ಎಂದಾಗಿದೆ.

ಬ್ಲಾಗರ್‌ಗಳು ಚಂಡಮಾರುತವು ಆಂಧ್ರಪ್ರದೇಶದ ಕಡೆಗೆ ಸಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಅಕ್ಟೋಬರ್ 25ರಂದು ಕುಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು ಮತ್ತು ಪುದುಚೇರಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ 26ರ ಭಾನುವಾರ ಮಳೆ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ರಾಣಿಪೇಟೆ ಪ್ರದೇಶಗಳಿಗೆ ವಿಸ್ತರಿಸಬಹುದು ಎಂದು ತಿಳಿಸಿದೆ.

ಅಕ್ಟೋಬರ್ 27ರಂದು ಚೆಂಗಲ್ಪೇಟೆ, ಕಾಂಚೀಪುರಂ ಮತ್ತು ವೆಲ್ಲೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು. ಮರುದಿನ ಅಂದರೆ ಅಕ್ಟೋಬರ್ 28ರಂದು ಚೆನ್ನೈಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಆದರೆ ತಿರುವಳ್ಳೂರು ಮತ್ತು ರಾಣಿಪೇಟೆ ಪ್ರದೇಶಗಳಲ್ಲಿ ಮಾತ್ರ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 25ರ ಶನಿವಾರದಂದು ಚೆನ್ನೈ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ.

ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಇನ್ನೂ ಇಂದು ಶನಿವಾರದಿಂದ ಕೂಡ ಮತ್ತೆ ಹಲವೆಡೆ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೀಗ ಸದ್ಯ ಅಂಡಮಾನ್ ಕರಾವಳಿಯ ಬಳಿ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಚಂಡಮಾರುತವಾಗಿ ಮಾರ್ಪಟ್ಟಿದೆ. ಈ ಹೊಸ ಚಂಡಮಾರುತಕ್ಕೆ "ಮೋಥಾ" ಎಂದು ಹೆಸರಿಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಇದು ಅಕ್ಟೋಬರ್ 27ರ ಸೋಮವಾರ ಬೆಳಗ್ಗೆ ಚಂಡಮಾರುತವಾಗಿ ತೀವ್ರಗೊಳ್ಳಬಹುದು. ಅಲ್ಲದೆ, ಮುಂದಿನ ದಿನಗಳಲ್ಲಿ ತಮಿಳುನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುವ ಚಂಡಮಾರುತದಿಂದಾಗಿ ಮುಂದಿನ ಎರಡು ದಿನ ಒಡಿಶಾ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಚಂಡಮಾರುತದ ಪ್ರಭಾವ ಕರ್ನಾಟಕ ರಾಜ್ಯದ ಕೆಲ ಜಿಲ್ಲೆಗಳ ಮೇಲೂ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಚಳಿಯ ವಾಯತಾವರಣದ ನಡುವೆಯ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ರಾಷ್ಟ್ರ ರಾಜಧಾನಿ ಹವಾಮಾನ: ಇದರ ಮಧ್ಯೆ ರಾಷ್ಟ್ರ ರಾಜಧಾನಿ ನವದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯದ ಹೆಚ್ಚಾಗುತ್ತಲಿದ್ದು, ಮುಂದಿನ ದಿನಗಳಲ್ಲಿ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+