Cyclone Montha: ಇಂದು ಅಪ್ಪಳಿಸುತ್ತೆ ಮೊಂಥಾ ಸೈಕ್ಲೋನ್! 65 ರೈಲು, ವಿಮಾನ ಸೇವೆಗಳು ರದ್ದು
Cyclone Montha Updates: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಸೈಕ್ಲೋನ್ ಮೊಂಥಾ (Cyclone MONTHA) ಅವಾಂತರ ಸೃಷ್ಟಿಸುತ್ತಿದೆ. ಇಂದು ಮಂಗಳವಾರ (ಅಕ್ಟೋಬರ್ 28) ಸಂಜೆ ಅಥವಾ ರಾತ್ರಿ ಕಾಕಿನಾಡದ ಸುತ್ತಮುತ್ತಲಿನ ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಳಿಂಗಪಟ್ಟಣಂ ನಡುವೆ ಮೊಂಥಾ ಅಪ್ಪಳಿಸಲಿದೆ. ಗರಿಷ್ಠ ಗಾಳಿಯ ವೇಗ ಗಂಟೆಗೆ 90-100 ಕಿ.ಮೀ. ವೇಗದಲ್ಲಿ ಗಂಟೆಗೆ 110 ಕಿ.ಮೀ. ವೇಗದಲ್ಲಿ ಬೀಸಲಿದೆ. ಈ ಕಾರಣದಿಂದ ಆಂಧ್ರಪ್ರದೇಶದಾದ್ಯಂತ 65 ಕ್ಕೂ ಹೆಚ್ಚು ಪ್ಯಾಸೆಂಜರ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಸೇವೆ ಮತ್ತು ವಿಮಾಣ ಸೇವೆಗಳನ್ನು ರದ್ದುಗೊಳಿಸಲಾಗಿದೆ.
ಬಿರುಗಾಳಿ ಮಳೆ ಪ್ರಯುಕ್ತ ಭಾರತೀಯ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ. ಕೆಲವೆಡೆ ಭೂಕುಸಿತ ಸಂಭವಿಸಿದೆ ಎಂದು ವರದಿ ಆಗಿದೆ. ಆಂಧ್ರ ಕರಾವಳಿ ಭಾಗ ಸಮೀಪಿಸುತ್ತಿರುವ ಚಂಡಮಾರುತ ಪ್ರಭಾವದಿಂದಾಗಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ 16 ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಈ ಭಾಗದ ಶಾಲಾ ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದೆ. ಚಂಡಮಾರುತ ಯಾವ ಪ್ರದೇಶಕ್ಕೆ ಬಂದು ಅಪ್ಪಳಿಸಲಿದೇ ಎಂಬುದನ್ನು ಅರಿತ ಸರ್ಕಾರ ಅಲ್ಲಿನ ನಿವಾಸಿಗಳನ್ನು ನಿರ್ಮಿಸಿದ ಪುನರ್ವಸತಿ ಕೇಂದ್ರಗಳಿಗೆ ಸಿಎಂ ಚಂದ್ರಬಾಬು ನಾಯ್ಡು ಸೂಚನೆ ಮೇರೆಗೆ ಸ್ಥಳಾಂತರಿಸುತ್ತಿದೆ.

ಚಂಡಮಾರುತ ಮುನ್ಸೂಚನೆ ನೋಡಿಕೊಂಡು ಕಾಕಿನಾಡ ಮತ್ತು ಕೊನಸೀಮಾ ಪ್ರದೇಶದಲ್ಲಿ ಸುಮಾರು 10,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 126 ಗರ್ಭಿಣಿಯರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. "ರೆಡ್ ಅಲರ್ಟ್" ಘೋಷಿಸಲಾದ ಎಂಟು ದಕ್ಷಿಣ ಜಿಲ್ಲೆಗಳಲ್ಲಿ ಒಡಿಶಾ ಸರ್ಕಾರವು ನೆರವಿಗೆ ಧಾವಿಸಿದೆ. ಬೇರೆಡೆ ಸ್ಥಳಾಂತರ ಮಾಡಲು ಮುಂದಾಗಿದೆ. ಭಾರೀ ಮಳೆ ಮಾತ್ರವಲ್ಲದೇ ಬಿರುಗಾಳಿಯ ವೇಗ ಸಹ ಹೆಚ್ಚಾಗಲಿದೆ. ಇದು ಜನಸಾಮಾನ್ಯರ ಜೀವನ ಅಸ್ತವ್ಯಸ್ಥ ಮಾಡಿದೆ. ಪೂರ್ವ ಕರಾವಳಿ ರೈಲ್ವೆ ವಾಲ್ಟೇರ್ ಪ್ರದೇಶ ಮತ್ತು ಸಂಬಂಧಿತ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುವ ಹಲವಾರು ಕೋಚಿಂಗ್ ರೈಲುಗಳ ರದ್ದತಿ, ಮಾರ್ಗ ಬದಲಾವಣೆ ಮತ್ತು ಅಲ್ಪಾವಧಿಯ ಮುಕ್ತಾಯವನ್ನು ಘೋಷಿಸಿದೆ. ಸುಮಾರು 32 ರೈಲುಗಳನ್ನು ರದ್ದುಪಡಿಸಲಾಗಿದೆ.
65 ರೈಲುಗಳು ರದ್ದು, ವಿಮಾನ ಸೇವೆ ಮೇಲೂ ಪ್ರಭಾವ
ಇಂದು ಚಂಡಮಾರುತದ ಕಾರಣದಿಂದಾಗಿ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಮಧ್ಯ ರೈಲ್ವೆ (SCR) ಅಕ್ಟೋಬರ್ 27 ಮತ್ತು 28 ರ ನಡುವೆ ಪ್ರಯಾಣಿಕರು ತೀರಾ ಅಗತ್ಯವಿದ್ದರೆ ಮಾತ್ರ ಪ್ರಯಾಣಿಸುವಂತೆ ಸೂಚಿಸಿದೆ. ಪ್ಯಾಸೆಂಜರ್ ಹಾಗೂ ಎಕ್ಸ್‌ಪ್ರೆಸ್ ಸೇರಿ ಒಟ್ಟು 65 ರೈಲುಗಳು ರದ್ದುಗೊಳಿಸಲಾಗಿದೆ. ಇದರಿಂದಾಗಿ ವಿಜಯವಾಡ, ರಾಜಮಂಡ್ರಿ, ಕಾಕಿನಾಡ, ವಿಶಾಖಪಟ್ಟಣ ಮತ್ತು ಭೀಮಾವರಂ ಮೂಲಕ ಪ್ರಮುಖ ಮಾರ್ಗಗಳಲ್ಲಿ ರೈಲು ಸಂಚಾರ ವ್ಯತ್ಯಯವಾಗಲಿದೆ.
ಹವಾಮಾನ ಪರಿಸ್ಥಿತಿಗಳು ಸುಧಾರಿಸಿದ ನಂತರ ಸಂಪೂರ್ಣ ಸುರಕ್ಷತೆ, ಮುನ್ಸೂಚನೆ ನೋಡಿಕೊಂಡು ಪುನಃ ರೈಲುಗಳ ಮರು ಹೊಂದಿಸಲಾಗುತ್ತದೆ. ಪೂರ್ವ ಕರಾವಳಿ ರೈಲ್ವೆ ಒಡಿಶಾ-ಆಂಧ್ರ ಕಾರಿಡಾರ್‌ನಾದ್ಯಂತ ಅನೇಕ ರೈಲು ಸೇವೆಗಳು ಮುಂದಿನ ಆದೇಶವರೆಗೆ ಸ್ಥಗಿತಗೊಂಡಿವೆ ಎಂದು ರೈಲ್ವೆ ಇಲಾಖೆ ಮೂಲಗಳು ಮಾಹಿತಿ ನೀಡಿವೆ.
ವಿಮಾನಗಳ ಹಾರಾಟ ಸ್ಥಗಿತ, ರೆಡ್ ಅಲರ್ಟ್
ಈ ಮೊಂಥಾ ಚಂಡಮಾರುತದ ಅಬ್ಬರವು ವಿಮಾನ ಕಾರ್ಯಾಚರಣೆ ಮೇಲು ದುಷ್ಪರಿಣಾಮ ಬೀರಿದೆ. ಬಿರುಗಾಳಿ ಮಳೆ ಮುನ್ಸೂಚನೆ ಕಾರಣಕ್ಕೆ ವಿಮಾನ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಅಕ್ಟೋಬರ್ 28 ರಂದು ವಿಶಾಖಪಟ್ಟಣ ವಿಮಾನ ನಿಲ್ದಾಣದಲ್ಲಿ ನಿಗದಿಯಾಗಿದ್ದ ಎಲ್ಲಾ ಇಂಡಿಗೊ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆಗಳು ರದ್ದುಗೊಂಡಿವೆ. ವಿಮಾನ ನಿಲ್ದಾಣಕ್ಕೆ ತೆರಳುವ ಮೊದಲು ವಿಮಾನದ ಸ್ಥಿತಿಯನ್ನು ಪರಿಶೀಲಿಸಿ ತೆರಳುವಂತೆ ಏರ್‌ಪೋರ್ಟ್ ಆಡಳಿತ ಮಂಡಳಿ ಪ್ರಯಾಣಿಕರಿಗೆ ಮಹತ್ವದ ಸೂಚನೆ ನೀಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications