ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಸರ್ಗ ಚಂಡಮಾರುತ: ಮಹಾರಾಷ್ಟ್ರ, ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಜೂನ್ 1: ಅಂಫಾನ್ ಚಂಡಮಾರುತದ ಬಳಿಕ ಇದೀಗ ನಿಸರ್ಗ ಚಂಡಮಾರುತದ ಪ್ರಭಾವ ಆರಂಭವಾಗಿದೆ.

Recommended Video

ಜನಗಳಿಗೆ ಇಷ್ಟು ಅವಮಾನ ಮಾಡಿದ್ದೀರಲ್ಲಾ , ನಿಮ್ಮನ್ನು ಅವರು ಸುಮ್ಮನೆ ಬಿಡೋದಿಲ್ಲ ಮೋದಿಯವರೇ | Oneindia Kannada

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ 100 ಮಂದಿಯನ್ನು ಬಲಿ ಪಡೆದುಕೊಂಡ ಬೆನ್ನಲ್ಲೇ ಇದೀಗ ಅರಬ್ಬೀ ಸಮುದ್ರದಲ್ಲಿ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ರೆಡ್ ಅಲರ್ಟ್ ಘೋಷಣೆ ಮಾಡಿದೆ.

ವಾಯಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರದಲ್ಲಿ ಹೈ ಅಲರ್ಟ್ವಾಯಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರದಲ್ಲಿ ಹೈ ಅಲರ್ಟ್

ರಾಜ್ಯದ ಹಲವು ಭಾಗಗಳಲ್ಲಿ ಭಾನುವಾರದಿಂದಲೇ ಮಳೆ ಆರಂಭವಾಗಿದೆ. ಜೂನ್ 1ರ ಸೋಮವಾರದ ವೇಳೆಗೆ ವಾಯುಭಾರ ಕುಸಿತ ತೀವ್ರಗೊಳ್ಳಲಿದೆ. ಜೂನ್‌ 4ರವರೆಗೂ ಮಳೆ, ಬಿರುಗಾಳಿಯ ಆರ್ಭಟ ಮುಂದುವರಿಯಲಿದೆ. ಬಳಿಕ ಸೈಕ್ಲೋನ್‌ ತಗ್ಗಿದರೂ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ ಎಂದು ಇಲಾಖೆ ಹೇಳಿದೆ. ಜೂನ್‌ 1 ರಿಂದ 4 ರವರೆಗೆ ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.

ಅಂಫಾನ್ ಅಟ್ಟಹಾಸ: ತಲೆ ಮೇಲೆ ಕೈ ಹೊತ್ತು ಕುಳಿತ ದೀದಿ!ಅಂಫಾನ್ ಅಟ್ಟಹಾಸ: ತಲೆ ಮೇಲೆ ಕೈ ಹೊತ್ತು ಕುಳಿತ ದೀದಿ!

ಮಹಾರಾಷ್ಟ್ರ, ಕರ್ನಾಟಕದ ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಸರ್ಗ ಚಂಡಮಾರುತದಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಬೆಂಗಳೂರಿನಲ್ಲಿ ಹವಾಮಾನ ಎಂದಿನಂತೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ಅದು ಮುಂದಿನ 36 ತಾಸುಗಳಲ್ಲಿ ಚಂಡಮಾರುತ ಸ್ವರೂಪ ಪಡೆಯುವ ಎಲ್ಲಾ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜೂನ್ 4 ರಂದು ಮಹಾರಾಷ್ಟ್ರ, ಗುಜರಾತ್‌ಗೆ ಚಂಡಮಾರುತ

ಜೂನ್ 4 ರಂದು ಮಹಾರಾಷ್ಟ್ರ, ಗುಜರಾತ್‌ಗೆ ಚಂಡಮಾರುತ

ಜೂನ್.4ರಂದು ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿಗೆ ಈ ಚಂಡಮಾರುತ ಅಪ್ಪಳಿಸುವ ಸಂಭವವಿದೆ. ಅದರ ಪ್ರಬಾವದಿಂದ ಕರಾವಳಿ ಕರ್ನಾಟಕ, ಕೇರಳ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ. ವಾಯುಭಾರ ಕುಸಿತ ಒಂದು ಪ್ರಬಲ ಚಂಡಮಾರುತವಾಗಿ ಬದಲಾಗುವ ಪರಿಸ್ಥಿತಿ ಅನುಕೂಲಕರವಾಗಿದೆ.

ಅಂಫಾನ್ ಚಂಡಮಾರುತ 2.0:ಕೊಲ್ಕತ್ತದಲ್ಲಿ ಮತ್ತೆ ವರುಣನ ಆರ್ಭಟಅಂಫಾನ್ ಚಂಡಮಾರುತ 2.0:ಕೊಲ್ಕತ್ತದಲ್ಲಿ ಮತ್ತೆ ವರುಣನ ಆರ್ಭಟ

ನಿಸರ್ಗ ಹೆಸರಿನ ಚಂಡಮಾರುತ

ನಿಸರ್ಗ ಹೆಸರಿನ ಚಂಡಮಾರುತ

ಒಂದು ವೇಳೆ ಚಂಡಮಾರುತ ಸೃಷ್ಟಿಯಾದರೆ ಅದಕ್ಕೆ ನಿಸರ್ಗ ಎಂಬ ಹೆಸರನ್ನು ಪಡೆದುಕೊಳ್ಳಲಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಎಲ್ಲೆಲ್ಲಿ ಮಳೆಬರುವ ಸಾಧ್ಯತೆ

ಎಲ್ಲೆಲ್ಲಿ ಮಳೆಬರುವ ಸಾಧ್ಯತೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಹಾಗೂ ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

English summary
Lakshadweep may witness a cyclone storm called Nisarga reaching near Maharashtra -Gujarat Coast On wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X