ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು, ಕೇರಳದಲ್ಲಿ ಓಖಿ ಅಬ್ಬರ ಜಾರಿ, ಬೆಂಗಳೂರಲ್ಲೂ ಮಳೆ

By Mahesh
|
Google Oneindia Kannada News

ಬೆಂಗಳೂರು, ಡಿಸೆಂಬರ್ 01: ಓಖಿ ಚಂಡಮಾರುತ ತನ್ನ ಅಬ್ಬರವನ್ನು ಮುಂದುವರೆಸಿದೆ. ತಮಿಳುನಾಡು ಹಾಗೂ ಕೇರಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕರಾವಳಿಗಳಲ್ಲಿ ಬುಧವಾರ ರಾತ್ರಿಯಿಂದಲೇ ಭಾರಿ ಮಳೆಯಾಗಿದೆ. ಓಖಿ ಪ್ರಭಾವದಿಂದ ಬೆಂಗಳೂರು ಹಾಗೂ ಕರ್ನಾಟಕದ ದಕ್ಷಿಣ ಒಳನಾಡು ಭಾಗಗಳಲ್ಲಿ ಶುಕ್ರವಾರ ಬೆಳಗ್ಗೆ ಸಾಧಾರಣ ಮಳೆ ಕಂಡು ಬಂದಿದೆ.

In Pics : ಓಖಿ ಸೋಕಿದ ಊರೆಲ್ಲ ನೀರೋ ನೀರು, ನೆಲ ನೋಡಿದ ಮರಗಳು

ದಕ್ಷಿಣ ತಮಿಳುನಾಡಿನ ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆಯ ನಿರೀಕ್ಷೆ ಇದೆ. ತಂಜಾವೂರು, ಥೇಣಿ, ದಿಂಡಿಗಲ್‌, ನೀಲಗಿರಿ ಮತ್ತು ಕೊಯಮತ್ತೂರುಗಳಲ್ಲಿ ಇನ್ನೂ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದೆ. ಹೈ ಅಲರ್ಟ್ ಘೋಷಿಸಿರುವ ಜಿಲ್ಲೆಗಳಲ್ಲಿ ಇಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Cyclone Ockhi Effect, High alert in TN, Kerala


ಚೆನ್ನೈ ನಗರದಲ್ಲಿಯೂ ಶುಕ್ರವಾರ ಮಳೆ ಸುರಿಯುತ್ತಿದೆ. ಚಂಡಮಾರುತವು ಲಕ್ಷದ್ವೀಪದತ್ತ ಸಾಗುತ್ತಿದೆ. ಶನಿವಾರ ಇದು ಅಲ್ಲಿ ನೆಲಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಓಖಿ ಅಬ್ಬರಲ್ಲಿ ಇಲ್ಲಿ ತನಕ 10ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

'ಓಖಿ ಚಂಡಮಾರುತದ ಪ್ರಭಾವ ತಗ್ಗಿದ ಕೆಲ ದಿನಗಳ ನಂತರ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗಲಿದೆ. ಈಗಾಗಲೇ ವಾಯುಭಾರ ಕುಸಿತದ ಸೂಚನೆಗಳು ಸಿಕ್ಕಿವೆ. ಡಿಸೆಂಬರ್ 5 ರಿಂದ ಮೂರು ದಿನಗಳ ಕಾಲ ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ' ಎಂದು ಸ್ಕೈಮ್ಯಾಟ್ ವರದಿ ನೀಡಿದೆ.

ಬೆಂಗಳೂರು : ನಗರದ ಕೆಲವು ಭಾಗಗಳಲ್ಲಿ ಜೋರು ಗಾಳಿ ಸಹಿತ ತುಂತುರು ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ ರೀತಿ ವಾತಾವರಣ ಮುಂದುವರಿಯುತ್ತದೆ' ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ಹಂಗಾಮಿ ನಿರ್ದೇಶಕ ಸುಂದರ ಎಂ.ಮೇತ್ರಿ ತಿಳಿಸಿದ್ದಾರೆ.

ಕೊಡಗು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತದೆ. ಆದರೆ, ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗುವುದಿಲ್ಲ. ತೇವಾಂಶ ಭರಿತ ಗಾಳಿ ಬೀಸುತ್ತಿರುವುದರಿಂದ ಚಳಿಯ ಅನುಭವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್‌. ಶ್ರೀನಿವಾಸ ರೆಡ್ಡಿ ಹೇಳಿದರು.

English summary
Cyclone Ockhi Effect : Ockhi claims 8 lives high alert issued in Tamil Nadu and Kerala, Light Rains over Bengaluru. Weather reporter predict on and off light rains would continue over Bengaluru for the next 24 hours. However, chances of any moderate or heavy spell are ruled out as of now.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X