Cyclone Remal: ಮೇ 27ರವರೆಗೂ ದೇಶದ ಈ ಭಾಗಗಳಲ್ಲಿ ಸುರಿಯಲಿದೆ ರಣಮಳೆ
Cyclone Remal Alert: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಹೊಸ ಚಂಡಮಾರುತ "ರೆಮಲ್" ಪ್ರಭಾವ ಭಾರತದ ಹಲವು ರಾಜ್ಯಗಳ ಮೇಲೆ ಬೀರಿದೆ. ಅಲ್ಲದೆ, ಇದರ ಪ್ರಭಾವದಿಂದ ದೇಶದ ಈ ಭಾಗಗಳಲ್ಲಿ ಮೇ 27ರವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಂಪೂರ್ಣ ಮಾಹಿತಿ ಇಲ್ಲಿದ ಗಮನಿಸಿ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತವು ತೀವ್ರ ಸ್ವರೂಪ ಪಡೆದು ಚಂಡಮಾರುತವಾಗಿ ಮಾರ್ಪಟ್ಟಿದೆ. ಈ ಹಿನ್ನೆಲೆ ಮೇ 26ರ ಮಧ್ಯರಾತ್ರಿಯ ಸುಮಾರಿಗೆ ಪಶ್ಚಿಮ ಬಂಗಾಳದ ಸಾಗರ್ ದ್ವೀಪ ಮತ್ತು ಬಾಂಗ್ಲಾದೇಶದ ಖೆಪುಪಾರಾ ನಡುವೆ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈಗಾಗಲೇ ಪಶ್ಚಿಮ ಮಧ್ಯ ಮತ್ತು ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದು ಚಂಡಮಾರುತವಾಗಿ ಮಾರ್ಪಟ್ಟಿದೆ. ಇದು ಬಾಂಗ್ಲಾದೇಶ ಮತ್ತು ಪಕ್ಕದ ಕರಾವಳಿಯನ್ನು ತಲುಪುವ ಸಾಧ್ಯತೆಯಿದೆ. ಇನ್ನು ಮೇ 26ರ ಸಂಜೆಯ ವೇಳೆಗೆ ಪಶ್ಚಿಮ ಬಂಗಾಳದಲ್ಲಿ ಚಂಡಮಾರುತ ತೀವ್ರತೆ ಪಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
Depression over East central BoB intensified to Deep Depression over same region about 380km S SE of Sagar Islands(WB) 490km S of Khepupara(Bangladesh). To intensify into a cyclonic storm by 25 evening and cross between Bangladesh and WB coasts around 26 midnight as SCS. pic.twitter.com/xhow79TzcR
— India Meteorological Department (@Indiametdept) May 25, 2024
ಈ ಚಂಡಮಾರುತಕ್ಕೆ "ರೆಮಲ್" ಎಂದು ಹೆಸರಿಸಲಾಗಿದ್ದು, ಇದು ಅರೇಬಿಕ್ ಭಾಷೆಯಲ್ಲಿ 'ಮರಳು' ಎಂದರ್ಥವಾಗುತ್ತದೆ. ಪೂರ್ವ ಮುಂಗಾರು ಋತುವಿನಲ್ಲಿ ಬಂಗಾಳಕೊಲ್ಲಿಯಲ್ಲಿ ಇದು ಮೊದಲ ಚಂಡಮಾರುತವಾಗಿದೆ.
ಇನ್ನು ಇದೀಗ ಪಶ್ಚಿಮ ಬಂಗಾಳದ ಕ್ಯಾನಿಂಗ್‌ನಿಂದ ದಕ್ಷಿಣಕ್ಕೆ 380 ಕಿಲೋ ಮೀಟರ್ ದೂರದಲ್ಲಿರುವ ಇದು ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯನ್ನುಂಟು ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದೆ.
ಇದು ಉತ್ತರರಿಂದ ಈಶಾನ್ಯಕ್ಕೆ ವ್ಯಾಪಿಸುವ ಸಾಧ್ಯತೆಯಿದೆ. ಮೇ 25ರಂದು ಪೂರ್ವ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನಿಕ್ ಚಂಡಮಾರುತವಾಗಿ ತೀವ್ರಗೊಳ್ಳುತ್ತದೆ. ಬಳಿಕ ಉತ್ತರದ ಕಡೆಗೆ ಚಲಿಸುತ್ತದೆ. ಉತ್ತರಾಭಿಮುಖವಾಗಿ ಚಲಿಸುವುದನ್ನು ಮುಂದುವರೆಸಿದ್ದು, ಇದು ಮೇ 26ರ ಮಧ್ಯರಾತ್ರಿಯ ಸುಮಾರಿಗೆ ಸಾಗರ್ ದ್ವೀಪ ಮತ್ತು ಖೆಪುಪಾರಾ ನಡುವೆ, ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮೇ 24ರ ಸಂಜೆಯಿಂದ ಉತ್ತರ ಬಂಗಾಳ ಕೊಲ್ಲಿಯಲ್ಲಿ ಸಮುದ್ರದ ಅಲೆಗಳು ತೀವ್ರಗೊಂಡಿವೆ. ಇನ್ನು ಮೇ 25ರಿಂದ 27ರ ಬೆಳಗ್ಗೆವರೆಗೆ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಇದರ ಪ್ರಭಾವ ಮತ್ತಷ್ಟು ಹೆಚ್ಚಾಗಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇಂದು (ಮೇ 25) ಸಂಜೆಯಿಂದ ಒಡಿಶಾ ಕರಾವಳಿಯಲ್ಲಿ ಸಮುದ್ರದ ಅಲೆಗಳು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.
"ರೆಮಲ್" ಚಂಡಮಾರುತ ಹಿನ್ನೆಲೆ, ಮೀನುಗಾರರಿಗೆ ಮೇ 27ರವರೆಗೆ ಸಮುದ್ರದ ತೀರಗಳಿಗೆ ಇಳಿಯದಂತೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇದೇ ವೇಳೆ ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಚಂಡಮಾರುತದ ಹಿನ್ನೆಲೆ, ಒಡಿಶಾದಲ್ಲಿ ಮೇ 25ರಿಂದ ರಾಜ್ಯದ ಉತ್ತರ ಮತ್ತು ದಕ್ಷಿಣ ಭಾಗಗಳಲ್ಲಿ ಹಗುರದಿಂದ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಮೇ 26ರಂದು ಬಾಲಸೋರ್, ಭದ್ರಕ್ ಮತ್ತು ಕೇಂದ್ರಪಾರಾ ಮತ್ತು ಮೇ 27ರಂದು ಬಾಲಸೋರ್, ಭದ್ರಕ್ ಮತ್ತು ಮಯೂರ್‌ಭಂಜ್‌ಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಪೂರ್ವಸಿದ್ಧತಾ ಕ್ರಮಗಳನ್ನು ಕೈಗೊಳ್ಳುವಂತೆ ಒಡಿಶಾ ಸರ್ಕಾರ ನಾಲ್ಕು ಜಿಲ್ಲೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications