• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ತೌಕ್ತೆ; ಪರಿಹಾರ ಕಾರ್ಯಕ್ಕೆ 24 ಎನ್‌ಡಿಆರ್‌ಎಫ್ ತಂಡ ಸಿದ್ಧ

|

ನವದೆಹಲಿ, ಮೇ 14; ಕೋವಿಡ್ ಭೀತಿಯ ನಡುವೆ ವಿವಿಧ ರಾಜ್ಯಗಳಲ್ಲಿ ತೌಕ್ತೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ತುರ್ತು ಸಂದರ್ಭದಲ್ಲಿ ಕಾರ್ಯಾಚರಣೆಗೆ 24ಎನ್‌ಡಿಆರ್‌ಎಫ್ ಪಡೆಗಳನ್ನು ಸಿದ್ಧಗೊಳಿಸಲಾಗಿದೆ.

ಕೇರಳ, ಕರ್ನಾಟಕ, ತಮಿಳುನಾಡು, ಗುಜರಾಜ್ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿವಿಧ ಜಿಲ್ಲೆಗಳಲ್ಲಿ ತೌಕ್ತೆ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಚಂಡಮಾರುತ, ರಾಜ್ಯದಲ್ಲಿ ಅತ್ಯಧಿಕ ಮಳೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಚಂಡಮಾರುತ, ರಾಜ್ಯದಲ್ಲಿ ಅತ್ಯಧಿಕ ಮಳೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಎನ್‌ಡಿಆರ್‌ಎಫ್‌ ಡಿಜಿ ಎಸ್. ಎನ್. ಪ್ರಧಾನ್ ಈ ಕುರಿತು ಮಾಹಿತಿ ನೀಡಿದ್ದಾರೆ. "ಹವಾಮಾನ ಇಲಾಖೆ ಶುಕ್ರವಾರದಿಂದ ಲಕ್ಷದ್ವೀಪ, ಕೇರಳ, ಮಾಹೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ರಕ್ಷಣಾ ಕಾರ್ಯಕ್ಕಾಗಿ ತಂಡಗಳನ್ನು ರಚನೆ ಮಾಡಲಾಗಿದೆ" ಎಂದು ಹೇಳಿದ್ದಾರೆ.

ಕರಾವಳಿ ಕರ್ನಾಟಕಕ್ಕೆ ಚಂಡಮಾರುತ ಭೀತಿ; ಗಾಳಿಯ ವೇಗ ಗಂಟೆಗೆ 65 ಕಿ.ಮೀಕರಾವಳಿ ಕರ್ನಾಟಕಕ್ಕೆ ಚಂಡಮಾರುತ ಭೀತಿ; ಗಾಳಿಯ ವೇಗ ಗಂಟೆಗೆ 65 ಕಿ.ಮೀ

ಕರ್ನಾಟಕದ ದಕ್ಷಿಣ ಒಳನಾಡು, ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಶನಿವಾರ ಹರ್ಯಾಣ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ರಾಜ್ಯಗಳಲ್ಲಿಯೂ ಮಳೆಯಾಗುವ ನಿರೀಕ್ಷೆ ಇದೆ.

ಭಾರತದ ಪಶ್ಚಿಮ ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ ಭಾರತದ ಪಶ್ಚಿಮ ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ

ಶನಿವಾರದಿಂದ ಭಾರೀ ಗಾಳಿ, ಗುಡುಗು, ಸಿಡಿಲಿನಿಂದ ಕೂಡಿದ ಮಳೆ ಜಾರ್ಖಂಡ್‌, ಸಿಕ್ಕಿಂ, ಗುಜರಾತ್, ಗೋವಾ, ಆಂಧ್ರ ಪ್ರದೇಶದ ಕರಾವಳಿ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕೇರಳ ಮುಂತಾದ ಕಡೆ ಸುರಿಯಲಿದೆ ಎಂದು ಈಗಾಗಲೇ ಎಚ್ಚರಿಕೆ ನೀಡಲಾಗಿದೆ.

ಮೇ 16ರಂದು ಗುಜರಾತ್‌ನ ಕೆಲವು ಪ್ರದೇಶ, ಮಹಾರಾಷ್ಟ್ರ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕೇರಳ ಲಕ್ಷದ್ವೀಪ, ಗೋವಾ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮೇ 17ರಂದು ಗುಜರಾತ್‌ ಕರಾವಳಿ, ತೆಲಂಗಾಣ, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡು, ಕೇರಳ ಮತ್ತು ಲಕ್ಷದ್ವೀಪದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುವ ಸೂಚನೆ ಇದೆ.

ಮೇ 18ರಂದು ಗೋವಾರದ ಕೊಂಕಣ ಪ್ರದೇಶ, ಸೌರಾಷ್ಟ್ರ, ಕೇರಳ ಮತ್ತು ಮಾಹೆಯಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಈಗಗಲೇ ಯಾವ-ಯಾವ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

English summary
24 National Disaster Response Force (NDRF) team has deployed in view of cyclone Tauktae warning. IMD warned heavy rain in Kerala, Karnataka, Tamil Nadu, Gujarat and Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X