Cyclonic Circulation: ಚಂಡಮಾರುತ ಹಿನ್ನೆಲೆ- ದೇಶದ ಈ ರಾಜ್ಯಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ
ಕೇರಳದಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ಪ್ರದೇಶವು ಪ್ರಸ್ತುತ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಆಗುತ್ತಿರುವ ಚಂಡಮಾರುತದ ಪ್ರಭಾವಕ್ಕೆ ಒಳಗಾಗಿದೆ ಎಂದು ಐಎಂಡಿ ಹೇಳಿದೆ.
ದಕ್ಷಿಣ ತಮಿಳುನಾಡಿನಲ್ಲಿ ಮತ್ತೊಂದು ಚಂಡಮಾರುತವು ರೂಪುಗೊಳ್ಳುತ್ತದೆ. ಇದರ ಪರಿಣಾಮ ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ.

ಭಾನುವಾರ ಮತ್ತು ಸೋಮವಾರದಂದು ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 30 ರ ವರೆಗೆ ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಅಲರ್ಟ್ ಮುಂದುವರಿಯಲಿದೆ.
ಹೆಚ್ಚುವರಿಯಾಗಿ, ಮುಂದಿನ ಮೂರು ಗಂಟೆಗಳಲ್ಲಿ ಪತ್ತನಂತಿಟ್ಟ, ಆಲಪ್ಪುಳ ಮತ್ತು ಎರ್ನಾಕುಲಂ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೊತೆಗೆ ಗಂಟೆಗೆ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುತ್ತದೆ ಎಂದು ಇಲಾಖೆ ತಿಳಿಸಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಕೇರಳ, ತಮಿಳುನಾಡು, ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ.
ಇತ್ತೀಚಿನ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಹೌರಾ ಮತ್ತು ಹೂಗ್ಲಿಯಂತಹ ಪಶ್ಚಿಮ ಬಂಗಾಳದ ಪ್ರಮುಖ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಐಎಂಡಿ ಪ್ರಕಾರ, ಅಕ್ಟೋಬರ್ 23 ಮತ್ತು 24 ರಂದು ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 24 ರಂದು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗಲಿದೆ.
ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ದಟ್ಟವಾಗುವ ಲಕ್ಷಣಗಳಿವೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಬುಧವಾರದ ವರೆಗೆ ಒಡಿಶಾ ಕರಾವಳಿಯಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಬಂಗಾಳ ಕೊಲ್ಲಿಗೆ ತೆರಳದಂತೆ ಹಮಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications