ಭಾರತದ ಕಥೆ: 9 ತಿಂಗಳಿನಲ್ಲೇ ಕೊರೊನಾವೈರಸ್ ಹೊಸ ದಾಖಲೆ?

ನವದೆಹಲಿ, ಫೆಬ್ರವರಿ.07: ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಹೊಸ ದಾಖಲೆಯಾಗಿದೆ. 9 ತಿಂಗಳ ನಂತರದಲ್ಲಿ ಮೊದಲ ಬಾರಿಗೆ 24 ಗಂಟೆಗಳಲ್ಲಿ ಮೃತಪಟ್ಟವರ ಸಂಖ್ಯೆ 80ಕ್ಕಿಂತ ಕಡಿಮೆಯಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿಗೆ 78 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,54,996ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ 12059 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕೊರೊನಾವೈರಸ್ ಸೋಂಕಿನಿಂದ ಗುಣಮುಖರಾದ ಸಂಖ್ಯೆಯು ಹೊಸ ಸೋಂಕಿತ ಪ್ರಕರಣಗಳ ಮಧ್ಯೆ ಅಷ್ಟಾಗಿ ವ್ಯತ್ಯಾಸವಿಲ್ಲ. ಒಂದು ದಿನದಲ್ಲಿ 11805 ಮಂದಿ ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,05,22,601 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

 Daily Deaths Less Than 80 In The Last 24 Hours, Lowest In 9 Months

ಭಾರತದಲ್ಲಿ 1,48,766 ಸಕ್ರಿಯ ಪ್ರಕರಣ:

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,08,26,363ಕ್ಕೆ ಏರಿಕೆಯಾಗಿದೆ. 1,48,766 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 57,75,322 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+