ಡೇಲಿಹಂಟ್ ನಲ್ಲಿ ಮಹಾರಾಷ್ಟ್ರ-ಹರ್ಯಾಣ ಚುನಾವಣೆಯ ಸಮಗ್ರ ಫಲಿತಾಂಶ
ನವದೆಹಲಿ, ಅಕ್ಟೋಬರ್ 21: ಬಹುನಿರೀಕ್ಷಿತ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಅಕ್ಟೋಬರ್ 24 ರಂದು ಪ್ರಕಟವಾಗಲಿದ್ದು, ಕುತೂಹಲ ಕೆರಳಿಸಿದೆ.
ಎರಡು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು 51 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಕ್ಷಣ ಕ್ಷಣದ ಅಪ್ಡೇಟ್ ಗಳನ್ನು ಡೇಲಿ ಹಂಟ್ ಅಕ್ಟೋಬರ್ 24 ರಂದು ನೀಡಲಿದೆ.
ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಗಳ ನಡುವೆ ಎರಡು ಲೋಕಸಭಾ ಕ್ಷೇತ್ರಗಳು ಮತ್ತು 51 ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆದಿದೆ. ಬಿಹಾರದ ಸಮಷ್ಟಿಪುರ್ ಮತ್ತು ಮಹಾರಾಷ್ಟ್ರದ ಸತಾರಾ ಲೋಕಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದೆ.
Recommended Video

ಮಹಾರಾಷ್ಟ್ರ ವಿಧಾನಸಭೆಯಲ್ಲಿ 288 ಸೀಟುಗಳಿದ್ದು, ಮ್ಯಾಜಿಕ್ ನಂಬರ್ 145. ಈ ರಾಜ್ಯದಲ್ಲಿ ಒಟ್ಟು 8,98,39,600 ಮತದಾರರಿದ್ದು, ಅವರಲ್ಲಿ 4,28,43,635 ಮಹಿಳೆಯರು ಮತ್ತು 4,68,75,750 ಪುರುಷ ಮತದಾರರಿದ್ದಾರೆ.
235 ಮಹಿಳೆಯರು ಸೇರಿದಂತೆ 3237 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 95,473 ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 164 ಮತ್ತು ಶಿವಸೇನೆ 126 ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 147 ಮತ್ತು ಎನ್ಸಿಪಿ 121 ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ. ಹರ್ಯಾಣ ವಿಧಾನಸಭೆಯಲ್ಲಿ 90 ಸೀಟುಗಳಿವೆ. ರಾಜ್ಯದಲ್ಲಿ 1.83 ಕೋಟಿ ಮತದಾರರು ಇದ್ದಾರೆ. ಇವರಲ್ಲಿ 83 ಲಕ್ಷ ಮಹಿಳೆಯರು.
ಹರ್ಯಾಣದಲ್ಲಿ 105 ಮಹಿಳೆಯರು ಸೇರಿದಂತೆ 1169 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 19,578 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.
18 ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಫಲಿತಾಂಶ ಅಂದೇ ಪ್ರಕಟವಾಗಲಿದ್ದು, ಉತ್ತರ ಪ್ರದೇಶ-11, ಗುಜರಾತ್-6, ಕೇರಳ ಮತ್ತು ಬಿಹಾರ್ ತಲಾ 5, ಪಂಜಾಬ್ ಮತ್ತು ಅಸ್ಸಾಂ ತಲಾ 4, ಸಿಕ್ಕಿಂ 3, ತಮಿಳುನಾಡು, ರಾಜಸ್ತಾನ ಮತ್ತು ಆಂಧ್ರಪ್ರದೇಶ ತಲಾ 2 ಹಾಗೂ ಒಡಿಶಾ, ತೆಲಂಗಾಣ, ಮಧ್ಯಪ್ರದೇಶ , ಛತ್ತೀಸ್ ಗಢ, ಮೇಘಾಲಯ, ಪುದುಚೇರಿ ಮತ್ತು ಅರುಣಾಚಲ ಪ್ರದೇಶಗಳ ತಲಾ ಒಂದೊಂದು ಸ್ಥಾನಗಳ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21 ಚುನಾವಣೆ ನಡೆಸಲಾಗಿದೆ.
ವಿಧಾನಸಭೆ ಚುನಾವಣೆ ಫಲಿತಾಂಶದ ಲೈವ್ ಅಪ್ಡೇಟ್ಸ್ ಗಳೊಂದಿಗೆ ಫಲಿತಾಂಶದ ವಿಶ್ಲೇಷಣೆ, ಅಂಕಿ-ಸಂಖ್ಯೆ, ಸೋಶಿಯಲ್ ಮೀಡಿಯಾ ಟ್ರೆಂಡಿಂಗ್ ಸೇರಿದಂತೆ ಎಲ್ಲಾ ಕೋನಗಳ ಸುದ್ದಿಯನ್ನೂ 'ಡೇಲಿಹಂಟ್' ನೀಡಲಿದೆ.
-
Virat Kohli: ವಿರಾಟ್ ಕೊಹ್ಲಿಗೆ ಕನ್ನಡ ಬರಲ್ಲ - ನಾರ್ಥಿಗಳು ಯಾಕೆ ಕಲಿಯಬೇಕು: ತುಳು ಬೆಂಬಲಿತರ ಪ್ರಶ್ನೆ, ಕನ್ನಡಿಗರ ಆಕ್ರೋಶ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications