ನಿಂದನೆಗೆ ಒಳಗಾದ ದಾನಿಶ್ ಅಲಿ ವಿರುದ್ಧವೇ ಬಿಜೆಪಿ ಆರೋಪ : ಬಿಜೆಪಿ ಸುಳ್ಳು ಹೇಳುತ್ತಿದೆ ಎಂದ ಅಲಿ
ಲೋಕಸಭೆಯಲ್ಲಿ ಬಿಎಸ್‌ಪಿ ಸಂಸದ ದಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಿಸಿ ಅವಮಾನಿಸಿದ್ದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಬಿಜೆಪಿ ದಾನಿಶ್ ಅಲಿ ವಿರುದ್ಧವೇ ಆರೋಪ ಮಾಡಿದೆ.
ರಮೇಶ್ ಬಿಧುರಿ ಅವರನ್ನು ದಾನಿಶ್ ಅಲಿ ಪ್ರಚೋಸಿದರು ಎಂದು ಬಿಜೆಪಿ ಆರೋಪಿಸಿದ್ದು, ಇದಕ್ಕೆ ಪ್ರತಿಕ್ರಿಯಿಸುವ ಭರದಲ್ಲಿ ಬಿಧುರಿ ಅಂತಹ ಪದಗಳನ್ನು ಬಳಸಿದ್ದಾರೆ ಎಂದು ಹೇಳಿದೆ.

ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಬಿಎಸ್‌ಪಿ ಸಂಸದ ದಾನಿಶ್ ಅಲಿ, ತನ್ನ ವಿರುದ್ಧ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದು ಹೇಳಿದ್ದಾರೆ. ತಾನು ಯಾರನ್ನು ಪ್ರಚೋದಣೆ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಆರೋಪ ಏನು?
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರನ್ನು ಪ್ರಚೋದಿಸುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಹೇಳಿದೆ. ನಿಶಿಕಾಂತ್ ದುಬೆ ಅವರು ಆರೋಪಿಸಿದಂತೆ, ಅವರು ನಿಂದನೀಯ ಪದಗಳನ್ನು ದಾಖಲೆಯಿಂದ ಅಳಿಸಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ದಾನಿಶ್ ಅಲಿ ಹೇಳಿದರು.
ಗುರುವಾರ ಲೋಕಸಭೆಯಲ್ಲಿ ಚಂದ್ರಯಾನ-3 ಮಿಷನ್‌ನ ಯಶಸ್ಸಿನ ಚರ್ಚೆಯ ಸಂದರ್ಭದಲ್ಲಿ, ಬಿಧುರಿ ಅವರು ಬಿಎಸ್‌ಪಿ ಸಂಸದರ ವಿರುದ್ಧ ಆಕ್ಷೇಪಾರ್ಹ ಮತ್ತು ಕೋಮುವಾದಿ ಪದಗಳ ಸರಮಾಲೆಯನ್ನು ಬಳಸಿದ್ದು, ಸಾಮಾಜಿಕ ಮಾಧ್ಯಮದಲ್ಲಿ ರಾಜಕಾರಣಿಗಳು ಮತ್ತು ಜನರಿಂದ ವ್ಯಾಪಕ ಖಂಡನೆಗೆ ಕಾರಣವಾಯಿತು.
ಶುಕ್ರವಾರ, ಬಿಜೆಪಿಯು ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್ ನೀಡಿತ್ತು ಮತ್ತು ಅವರ ನಡವಳಿಕೆಯನ್ನು ವಿವರಿಸುವಂತೆ ಕೇಳಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕೂಡ ರಮೇಶ್ ಬಿಧುರಿ ಅವರಿಗೆ ಎಚ್ಚರಿಕೆ ನೀಡಿದ್ದು, ಈ ರೀತಿ ವರ್ತನೆ ಮರುಕಳಿಸದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.












Click it and Unblock the Notifications