ಬಿಜೆಪಿ ಸಂಸದ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಂಸತ್‌ ತೊರೆಯುವೆ: ಡ್ಯಾನಿಶ್ ಅಲಿ ಎಚ್ಚರಿಕೆ

ನವದೆಹಲಿ, ಸೆಪ್ಟೆಂಬರ್‌ 23: ಲೋಕಸಭೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವ ಬಗ್ಗೆ ಆಲೋಚನೆ ನಡೆಸುತ್ತಿರುವುದಾಗಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಹೇಳಿದ್ದಾರೆ.

ಭಾರತದ ಚಂದ್ರಯಾನ-3 ರ ಯಶಸ್ಸಿನ ಚರ್ಚೆಯ ವೇಳೆ ಮಾತನಾಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಡ್ಯಾನಿಶ್ ಅಲಿ ಅವರನ್ನು ಭಯೋತ್ಪಾದಕ, ಉಗ್ರಗಾಮಿ ಮತ್ತು ಪಿಂಪ್ ಎಂದು ನಿಂದಿಸಿದ್ದರು. ಈ ಕುರಿತು ಶುಕ್ರವಾರ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಮಾತನಾಡಿ, ಬಿಜೆಪಿ ಸಂಸದನ ವಿರುದ್ದ ಕಿಡಿಕಾರಿದ ಡ್ಯಾನಿಶ್‌ ಅಲಿ, ದ್ವೇಷ ಭಾಷಣಗಳನ್ನು ಕೇಳಲು ಜನ ನನ್ನನ್ನು ಆಯ್ಕೆ ಮಾಡಿಲ್ಲ. ಇದನ್ನು ನಾನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಸಂಬಂಧ ನಾನು ಸ್ಪೀಕರ್‌ಗೆ ಪತ್ರ ಬರೆದಿದ್ದೇನೆ. ಈ ಕುರಿತು ಸ್ಪೀಕರ್‌ ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ ಎಂದು ಡ್ಯಾನಿಶ್‌ ಅಲಿ ಹೇಳಿದ್ದಾರೆ.

Danish Ali threatens to quit LS ‘if no action taken’ against Bidhuri

ಇಡೀ ದೇಶವೇ ತಲೆ ತಗ್ಗಿಸುವಂತೆ ಅವರು ಮಾತನಾಡಿದ್ದಾರೆ. ಇದು ದ್ವೇಷದ ಭಾಷಣಕ್ಕಿಂತ ಕಡಿಮೆ ಇಲ್ಲ. ಇದು ಸದನದಲ್ಲಿ ನಡೆದ ದ್ವೇಷದ ಭಾಷಣವಾಗಿದೆ. ಇಷ್ಟು ದಿನ ಸಂಸತ್ತಿನ ಹೊರಗೆ ದ್ವೇಷ ಭಾಷಣಗಳನ್ನು ಮಾಡಲಾಗುತ್ತಿತ್ತು. ಆದರೆ ಈಗ ಬಿಜೆಪಿ ಸಂಸದ ಸದನದೊಳಗೇ ದ್ವೇಷ ಭಾಷಣ ಮಾಡಿದ್ದಾರೆ, ಬಿಜೆಪಿಯವರ ಮಾತು ಹಾಗೂ ನಡೆಯ ನಡುವೆ ವ್ಯತ್ಯಾಸವಿದೆ ಎಂದು ಡ್ಯಾನಿಶ್ ಅಲಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ತೀವ್ರ ವಾಗ್ದಾಳಿ ನಡೆಸಿದ ಡ್ಯಾನಿಶ್‌ ಅಲಿ, ಬಿಜೆಪಿ ಸಂಸದರು ಆರ್‌ ಎಸ್‌ ಎಸ್‌ ಶಾಖೆಗಳಲ್ಲಿ ದ್ವೇಷ ಭಾಷಣಗಳನ್ನು ಕಲಿಯುತ್ತಿದ್ದಾರೆಯೋ ಅಧವಾ ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತದ ಹೊಸ ಪ್ರಯೋಗಾಯದಲ್ಲಿ ಕಲಿಯುತ್ತಿದ್ದಾರೆಯೋ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೇ ರಮೇಶ್‌ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನೀವು ಏನು ಮಾಡುತ್ತೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡ್ಯಾನಿಶ್ ಅಲಿ, ‌ ಸ್ಪೀಕರ್ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ. ಆದರೆ ಕ್ರಮ ಕೈಗೊಳ್ಳದಿದ್ದರೆ, ಭಾರವಾದ ಹೃದಯದಿಂದ ನನ್ನ ಲೋಕಸಭಾ ಸದಸ್ಯತ್ವ ತ್ಯಜಿಸುವ ಬಗ್ಗೆ ಯೋಚಿಸುತ್ತೇನೆ. ಏಕೆಂದರೆ ದ್ವೇಷ ಭಾಷಣಗಳನ್ನು ಕೇಳಲು ಜನ ನನ್ನನ್ನು ಸಂಸತ್ತಿಗೆ ಕಳುಹಿಸಿಲ್ಲ ಎಂದು ಉತ್ತರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+