ಜಮ್ಮು & ಕಾಶ್ಮೀರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

Assembly election 2024: ಭಾರತೀಯ ಚುನಾವಣಾ ಆಯೋಗವು ಜಮ್ಮು & ಕಾಶ್ಮೀರ ವಿಧಾನಸಭೆ ಚುನಾಚಣೆಯನ್ನು 90 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ನಡೆಸುವುದಾಗಿ ಘೋಷಣೆ ಮಾಡಿದೆ. ಸೆಪ್ಟೆಂಬರ್‌ 18ರಂದು, ಸೆಪ್ಟೆಂಬರ್‌ 25, ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಸುವುದಾಗಿ ಘೋಷಣೆ ಮಾಡಿದೆ. ಇನ್ನು ಅಕ್ಟೋಬರ್‌ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದೆ.

ಜಮ್ಮು ಕಾಶ್ಮೀರ ರಾಜ್ಯವನ್ನು 2019 ರಲ್ಲಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆ ಮಾಡಿ ಸಂವಿಧಾನದ 370 ವಿಧಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಲಾಗಿತ್ತು. ಆಗಿನಿಂದ ಜಮ್ಮು ಮತ್ತು ಕಾಶ್ಮೀರವು ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯಲ್ಲಿದೆ.

Date announcement for Jammu amp amp Kashmir assembly elections

ಜಮ್ಮು-ಕಾಶ್ಮೀರಾದಲ್ಲಿ ಒಟ್ಟು 87.09 ಲಕ್ಷ ಜನ ಮತದಾರರಿದ್ದರೆ, ಮತಗಟ್ಟೆಗಳ ಸಂಖ್ಯೆ 11,838 ಇವೆ. ಇನ್ನು 3.71 ಲಕ್ಷ ಜನ ಮೊದಲ ಬಾರಿ ಮತದಾನ ಮಾಡುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇನ್ನು ಸೆಪ್ಟಂಬರ್‌ 12ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಿದ್ದು, ಸೆಪ್ಟಂಬರ್‌ 13ರಂದು ನಾಮಪತ್ರದ ಪರೀಶೀಲನೆ ನಡೆಯಲಿದೆ.

87 ಲಕ್ಷಕ್ಕೂ ಹೆಚ್ಚು ಮತದಾರರು ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಅಂತಿಮ ಮತದಾರರ ಪಟ್ಟಿಯನ್ನು ಆಗಸ್ಟ್ 20ರಂದು ಪ್ರಕಟಿಸಲಾಗುವುದು. ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ ಎಂದು ಸಿಇಸಿ ತಿಳಿಸಿದೆ. ಈ ಪೈಕಿ 74 ಸಾಮಾನ್ಯ ಮತ್ತು 16 ಮೀಸಲು ಎಸ್ಟಿ - 9, ಎಸ್ಸಿ - 7 ಇದೆ.

ಇನ್ನು ಜಮ್ಮು & ಕಾಶ್ಮೀರದಲ್ಲಿ 10 ವರ್ಷಗಳ ಬಳಿಕ ವಿಧಾನಸಭಾ ಚುನಾವಣೆ ನುಡೆಯುತ್ತಿದೆ. ಸಂವಿಧಾನ ನೀಡಿದ್ದ 370 ವಿಧಿ ರದ್ಧಾದ ನಂಹತ ಅಲ್ಲಿ ವಿಧಾನಸಭಾ ಚುನಾವಣೆ ನಡೆದಿರಲಿಲ್ಲ. ಕಳೆದ ವರ್ಷ ಲೋಕಸಭಾ ಚುನಾವಣೆ ತುಂಬಾ ಶಾಂತಿಯುತವಾಗಿ ನಡೆದಿತ್ತು.

ಇದೀಗ ಅಲ್ಲಿನ ಜನ ಬದಲಾವಣೆ ಬಯಸುತ್ತಿದ್ದಾರೆ. ಈ ಬಾರಿಯೂ ಅಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರೂ ಉತ್ಸಾಹದಿಂದ ಭಾಗವಹಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಹರಿಯಾಣದಲ್ಲಿ ಚುನಾವಣೆ ಯಾವಾಗ?: ಅಕ್ಟೋಬರ್ 1ರಿಂದ ಹರಿಯಾಣದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4ರಂದು ಫಲಿತಾಂಶ ಹೊರಬೀಳಲಿದೆ ಎಂದು ತಿಳಿಸಿದರು. ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಯು 90 ಸ್ಥಾನಗಳಿಗೆ ನಡೆಯಲಿದೆ, ಅದರಲ್ಲಿ 73 ಸಾಮಾನ್ಯ ಮತ್ತು 17 ಪರಿಶಿಷ್ಟ ಜಾತಿಗಳಿಗೆ (SC) ಮೀಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+