ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸಿಜಿಐ ಬೃಹತ್ ಹೆಜ್ಜೆ; ವಿದೇಶಿ ಲಸಿಕೆಗಳ ಬಳಕೆಗೆ ಹಸಿರು ನಿಶಾನೆ

|
Google Oneindia Kannada News

ನವದೆಹಲಿ, ಜೂನ್ 02: ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನವನ್ನು ತ್ವರಿತಗೊಳಿಸಲು ಇದೀಗ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ- ಡಿಸಿಜಿಐ ದೊಡ್ಡ ಹೆಜ್ಜೆಯಿಟ್ಟಿದೆ. ಭಾರತದಲ್ಲಿ ವಿದೇಶಿ ಕೊರೊನಾ ಲಸಿಕೆಗಳ ನಿರ್ಬಂಧಿತ ಬಳಕೆಗೆ ಹಸಿರು ನಿಶಾನೆ ತೋರಿದೆ. ಯುಎಸ್‌ಎಫ್‌ಡಿಎ ಹಾಗೂ ಇನ್ನಿತರ ದೇಶಗಳಲ್ಲಿ ಅನುಮೋದನೆ ಪಡೆದಿರುವ ವಿದೇಶಿ ಲಸಿಕೆಗಳಿಗೆ ಅನುಮತಿ ನೀಡಿರುವುದಾಗಿ ತಿಳಿದುಬಂದಿದೆ.

ಫೈಜರ್ ಹಾಗೂ ಮಾಡರ್ನಾದಂಥ ಲಸಿಕೆಗಳ ಬಳಕೆಗೆ ದೇಶದಲ್ಲಿ ಅನುಮತಿ ನೀಡಿದ್ದು, ಭಾರತದಲ್ಲಿ ಈಚೆಗೆ ಕೊರೊನಾ ಲಸಿಕೆಗಳಿಗೆ ಕೊರತೆ ಎದುರಾದ ಬೆನ್ನಲ್ಲೇ ಡಿಸಿಜಿಐ ಈ ನಿರ್ಧಾರ ಪ್ರಕಟಿಸಿದೆ.

ಕೊರೊನಾ ಸೋಂಕು; ZRC-3308 ಪ್ರಯೋಗಕ್ಕೆ ಅನುಮತಿ ಕೋರಿದ ಝೈಡಸ್ಕೊರೊನಾ ಸೋಂಕು; ZRC-3308 ಪ್ರಯೋಗಕ್ಕೆ ಅನುಮತಿ ಕೋರಿದ ಝೈಡಸ್

ಯುಎಸ್‌ಎಫ್‌ಡಿಎ, ಇಎಂಎ, ಯುಕೆ ಎಂಎಚ್‌ಆರ್‌ಎ, ಪಿಎಂಡಿಎ ಜಪಾನ್ ಅನುಮೋದನೆ ನೀಡಿದ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ತುರ್ತು ಬಳಕೆ ಪಟ್ಟಿಯಲ್ಲಿ ಉಲ್ಲೇಖಿಸಿದ ವಿದೇಶಿ ಕೊರೊನಾ ಲಸಿಕೆಗಳನ್ನು ತುರ್ತು ಹಾಗೂ ನಿರ್ಬಂಧಿತ ಬಳಕೆ ಮಾಡಲು ತೀರ್ಮಾನಿಸಲಾಗಿದೆ. ಲಕ್ಷಾಂತರ ಮಂದಿ ಈಗಾಗಲೇ ಈ ಲಸಿಕೆಗಳನ್ನು ಪಡೆದುಕೊಂಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

 DCGI Decides To Rollout Foreign Vaccines In India

ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳು ಕೂಡ ಕೊರೊನಾ ಸೋಂಕಿನ ವಿರುದ್ಧ ತುರ್ತು ಬಳಕೆಗೆ ಸ್ಥಳೀಯವಾಗಿ ಹಲವು ಹಂತದ ಪರೀಕ್ಷೆಗಳಿಗೆ ಒಳಪಟ್ಟಿದ್ದವು.

ಸದ್ಯಕ್ಕೆ ಭಾರತದಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಫುಟ್ನಿಕ್ ವಿ ಲಸಿಕೆಗಳನ್ನು ನೀಡಲಾಗುತ್ತಿದೆ. 130 ದಿನಗಳಲ್ಲಿ 20 ಕೋಟಿಗೂ ಹೆಚ್ಚಿನ ಲಸಿಕೆಯನ್ನು ಭಾರತ ನೀಡಿದ್ದು, ಅಮೆರಿಕ ನಂತರ ಹೆಚ್ಚು ಲಸಿಕೆ ನೀಡಿದ ದೇಶ ಭಾರತ ಎನಿಸಿಕೊಂಡಿದೆ. ಮೇ ತಿಂಗಳವರೆಗೂ 45 ವರ್ಷಕ್ಕೂ ಮೇಲ್ಪಟ್ಟ 34% ಜನಸಂಖ್ಯೆಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. 60 ಹಾಗೂ 60ಕ್ಕೂ ಹೆಚ್ಚು ವಯಸ್ಸಿನ 42% ಜನಸಂಖ್ಯೆಗೆ ಮೊದಲ ಡೋಸ್ ಲಸಿಕೆ ನೀಡಿರುವುದಾಗಿ ತಿಳಿದುಬಂದಿದೆ.

English summary
Drug controller general of india has decided to rollout foreign vaccines like pfizer, moderna in india
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X