ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಶೀಲ್ಡ್, ಕೋವ್ಯಾಕ್ಸಿನ್ ಕೊರೊನಾ ಲಸಿಕೆ ತುರ್ತು ಬಳಕೆಗೆ ಗ್ರೀನ್ ಸಿಗ್ನಲ್

|
Google Oneindia Kannada News

ನವದೆಹಲಿ, ಜನವರಿ 03: ಕೊವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಕೊರೊನಾ ಲಸಿಕೆ ತುರ್ತು ಬಳಕೆಗೆ ಡಿಜಿಸಿಐ ಅನುಮತಿ ನೀಡಿದೆ.

ಡಿಸಿಜಿಐ ಅಧ್ಯಕ್ಷ ಸೋಮಾನಿ ಅವರು ಇಂದು ಪತತ್ರಿಕಾಗೋಷ್ಠ ಕರೆದಿದ್ದು, ಈ ಸಂದರ್ಭದಲ್ಲಿ ಆಕ್ಸ್‌ಫರ್ಡ್-ಆಸ್ಟ್ರಾಜೆನೆಕಾ ಹಾಗೂ ಭಾರತ್ ಬಯೋಟೆಕ್ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆಯೇ ಕೊವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಬಳಕೆ ಮಾಡಲು ಅಡ್ಡಿಯಿಲ್ಲ ಎಂದು ಎಕ್ಸ್‌ಪರ್ಟ್ ಕಮಿಟಿಯು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಶಿಫಾರಸು ಮಾಡಿತ್ತು.

DCGI Granted Permission For Restricted Use Of Covishield And Covaxin Vaccine In Emergency Situation

ಫೈಜರ್ ಮತ್ತು ಬಯೋಎನ್‌ಟೆಕ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೊವಿಶೀಲ್ಡ್ ಲಸಿಕೆ ಬಳಸಲು ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡುತ್ತಿದ್ದಂತೆ ಇದೇ ವಾರದಲ್ಲಿ ಮೂರು ಬಾರಿ ಸಭೆ ನಡೆಸಿದ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್‌ ನ ಸಬ್ಜೆಕ್ಟ್ ಎಕ್ಸಫರ್ಟ್ ಕಮಿಟಿಯು ಈಗ ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಬಳಕೆ ಮಾಡಲು ಅಡ್ಡಿಯಿಲ್ಲ ಎಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಹೇಳಿತ್ತು.

ಈ ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಗಳನ್ನು ಪಡೆದ ಬಳಿಕ ಆಗುವ ಪರಿಣಾಮ ಹಾಗೂ ಸುರಕ್ಷತೆ ಬಗ್ಗೆ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಎನ್‌ಟೆಕ್ ಸಂಸ್ಥೆಗಳಿಂದ ಸಬ್ಜೆಕ್ಟ್ ಎಕ್ಸಫರ್ಟ್ ಕಮಿಟಿ ಹೆಚ್ಚುವರಿ ಮಾಹಿತಿ‌ ಕೇಳಿತ್ತು.

ಸಬ್ಜಕ್ಟ್ ಎಕ್ಸಫರ್ಟ್ ಕಮಿಟಿ ತಜ್ಞರ ಎದುರು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳು ಮಾಹಿತಿ ಸಲ್ಲಿಸಿ ಪ್ರಸೆಂಟೇಷನ್ ನೀಡಿದ್ದವು‌. ಮಾಹಿತಿಗಳು ಮತ್ತು ಪ್ರಸೆಂಟೇಷನ್ ತೃಪ್ತಿಕರವಾದ ಹಿನ್ನಲೆಯಲ್ಲಿ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್‌ ಇಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಕ್ಕೆ ಶಿಫಾರಸು ಮಾಡಿತ್ತು.

English summary
Vaccines of Serum Institute of India and Bharat Biotech are granted permission for restricted use in emergency situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X