DK Shivakumar: ಕ್ಯಾಬಿನೆಟ್ ಪುನರ್ ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ: ಡಿ ಕೆ ಶಿವಕುಮಾರ್‌ ಏನಂದ್ರು?

ದೆಹಲಿ, ಜನವರಿ 06: ರಾಜ್ಯ ಕಾಂಗ್ರೆಸ್‌ ನಲ್ಲಿ ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ. ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರು ವಿದೇಶಿ ಪ್ರವಾಸದ ಸಂದರ್ಭದಲ್ಲಿ ಶಾಸಕರು ನಡೆಸಿದ ಔತಣಕೂಟ ಅನುಮಾನ ಹುಟ್ಟಿಕೊಳ್ಳುವಂತೆ ಮಾಡಿದೆ. ಈ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಪ್ರತಿಕ್ರಿಯಿಸಿದ್ದಾರೆ.

ದೆಹಲಿಯಲ್ಲಿ ಇಂದು(ಸೋಮವಾರ) ಮಾಧ್ಯಮಗಳ ಜೊತೆಗೆ ಮಾತನಾಡಿ, ಸಚಿವ ಸಂಪುಟ ರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಯಾವ ಚರ್ಚೆಯೂ ನಡೆದಿಲ್ಲ. ಮಾಧ್ಯಮದವರಿಗೆ ಯಾರೋ ತಪ್ಪು ಮಾಹಿತಿ ನೀಡಿ, ನಿಮಗೆ ಬಿಡುವು ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಇದರ ಬಗ್ಗೆ ಮಾತನಾಡುತ್ತಾರೆ ಎಂದು ಡಿಕೆ ಶಿವಕುಮಾರ್‌ ಅವರು ಹೇಳಿದರು.

DCM DK Shivakumar s reaction on the change as KPCC President

ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ. ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ ಎಂದರು.

ಡಿಸಿಎಂ ಡಿ ಕೆ ಶಿವಕುಮಾರ್ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕತೆ ಹದಗೆಡುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, "ನಾವು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಅಗತ್ಯವಾದ ಅನುದಾನ ಮೀಸಲಿಟ್ಟಿದ್ದೇವೆ. ನಮ್ಮ ರಾಜ್ಯದ ಬಜೆಟ್ ಗಾತ್ರ 3.70 ಲಕ್ಷ ಕೋಟಿಗೂ ಹೆಚ್ಚಿದೆ. ಅದರಲ್ಲಿ 56 ಸಾವಿರ ಕೋಟಿ ಈ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ. ಫಲಾನುಭವಿಗಳ ಖಾತೆಗೆ ಹಣ ತಲುಪುವುದು 10-15 ದಿನಗಳು ವಿಳಂಬವಾಗಬಹುದು, ಆದರೆ ನಮ್ಮ ಯೋಜನೆ ನಿಲ್ಲುವುದಿಲ್ಲ. ದೇಶದಲ್ಲಿ ಮಹಾರಾಷ್ಟ್ರ ನಂತರ ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಆರ್ಥಿಕತೆ ಹೊಂದಿರುವ ರಾಜ್ಯ. ನಾವು ದೇಶಕ್ಕೆ ಹೆಚ್ಚು ತೆರಿಗೆ ನೀಡುತ್ತಿದ್ದು, ನಮ್ಮ ರಾಜ್ಯ ಆರ್ಥಿಕವಾಗಿ ಸುಭದ್ರವಾಗಿದೆ" ಎಂದರು.

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, "ಜನರಿಗೆ ಆರ್ಥಿಕ ಶಕ್ತಿ ತುಂಬುವುದು ಅಭಿವೃದ್ಧಿಯಲ್ಲವೇ? ಪ್ರತಿ ಕುಟುಂಬ, ಜನರು ಆರ್ಥಿಕವಾಗಿ ಸುಭದ್ರವಾಗುವುದು ಅಭಿವೃದ್ಧಿಯಲ್ಲವೇ? ವ್ಯಾಪಾರಿಗಳು, ಜನ ಸಾಮಾನ್ಯರ ಬಳಿ ಹಣ ಹರಿದಾಡುತ್ತಿದ್ದು, ಸಂತೋಷವಾಗಿದ್ದಾರೆ. ಇದು ಅಭಿವೃದ್ಧಿಯಲ್ಲವೇ? ಜನರಿಗೆ ವೈಯಕ್ತಿಕವಾಗಿ ಆರ್ಥಿಕ ಬಲ ತುಂಬುವುದು ನಮ್ಮ ಯೋಜನೆಗಳ ಉದ್ದೇಶ. ಜನರು ಶಕ್ತಿಶಾಲಿಯಾದರೆ ಅವರ ಕುಟುಂಬ ಶಕ್ತಿಶಾಲಿಯಾಗುತ್ತದೆ. ಕುಟುಂಬಗಳು ಶಕ್ತಿಶಾಲಿಯಾದರೆ ನಮ್ಮ ರಾಜ್ಯ ಶಕ್ತಿಶಾಲಿಯಾಗುತ್ತದೆ ಎಂದು ತಿಳಿಸಿದರು.

ಬಸ್ ದರ ಏರಿಕೆ ಬಗ್ಗೆ ಕೇಳಿದಾಗ, "ಬಸ್ ಟಿಕೆಟ್ ದರ ಏರಿಕೆ ವಿಚಾರವಾಗಿ ಕೆಲವು ಮಾನದಂಡಗಳಿವೆ. ಇಂಧನ ಬೆಲೆ ಏರಿಕೆಯಾದಾಗ ಟಿಕೆಟ್ ದರ ಕೂಡ ಏರಿಕೆಯಾಗುತ್ತದೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲೇ ನಾವು ಇಂಧನೆ ಬೆಲೆ ಏರಿಕೆಯಾದರೆ ಟಿಕೆಟ್ ದರ ಏರಿಸಲು ತೀರ್ಮಾನಿಸಲಾಗಿತ್ತು. ರಾಜ್ಯ ಸಾರಿಗೆ ಸಂಸ್ಥೆಗಳು ತಮ್ಮದೇ ಸಾಮರ್ಥ್ಯಗಳ ಮೇಲೆ ನಡೆಯುತ್ತಿವೆ" ಎಂದು ಉತ್ತರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+