ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಜ್ರಿವಾಲ್ ವಿರುದ್ಧ 10 ಕೋಟಿ ರು ಮಾನನಷ್ಟ ಮೊಕದ್ದಮೆ!

By Mahesh
|
Google Oneindia Kannada News

ನವದೆಹಲಿ, ಡಿ. 21: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರ ವಿರುದ್ಧ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ ಪಟಿಯಾಲ ಹೌಸ್ ಕೋರ್ಟಿನಲ್ಲಿ ಭಾರಿ ಮೊತ್ತದ ಕ್ರಿಮಿನಲ್ ಮೊಕದ್ದಮೆ ಹೂಡಿದ್ದಾರೆ.

ದೆಹಲಿ ಕ್ರಿಕೆಟ್ ಸಂಸ್ಥೆಯ (ಡಿಡಿಸಿಎ) ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವ್ ಅರುಣ್ ಜೇಟ್ಲಿ ಅವರ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಕೆಲ ಆಪ್ ನಾಯಕರು ಆರೋಪಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅರುಣ್ ಜೇಟ್ಲಿ ಅವರು ನಾಗರಿಕ ಮಾನಹಾನಿ ಖಟ್ಲೆ ದಾಖಲಿಸಿ 10 ಕೋಟಿ ರೂಪಾಯಿಗಳ ಪರಿಹಾರ ಕೇಳಿದ್ದಾರೆ.[ಡಿಡಿಸಿಎ ಭ್ರಷ್ಟಾಚಾರ: ವಿಡಿಯೋ ಸಾಕ್ಷ್ಯ ಬಹಿರಂಗ]

DDCA row: Jaitley files defamation suit against Kejriwal in HC,

ತಮ್ಮ ವಿರುದ್ಧ ಮಾಡಲಾಗುತ್ತಿರುವ 'ತಪ್ಪು ಮತ್ತು ಮಾನಹಾನಿಕರ' ಆಪಾದನೆಗಳಿಗಾಗಿ ಕೇಜ್ರಿವಾಲ್ ಮತ್ತು ಇತರ ಆಪ್ ನಾಯಕರ ವಿರುದ್ಧ ತಮ್ಮ ವೈಯಕ್ತಿಕ ನೆಲೆಯಲ್ಲಿ ಪ್ರಕರಣ ದಾಖಲಿಸುವುದಾಗಿ ಜೇಟ್ಲಿ ಭಾನುವಾರ ಪ್ರಕಟಿಸಿದ್ದರು. ಅರವಿಂದ್ ಕೇಜ್ರಿವಾಲ್ ಅಲ್ಲದೆ ರಾಘವ್ ಛಡ್ಡಾ, ಅಶುತೋಷ್, ಸಂಜಯ್ ಸಿಂಗ್ ಹಾಗೂ ದೀಪಕ್ ಬಾಜ್ಪೇಯಿ ಅವರ ವಿರುದ್ಧ ಮೊಕದ್ದಮೆ ದಾಖಲಾಗಿದೆ.

ಈ ಮಧ್ಯೆ ಕೇಜ್ರಿವಾಲ್ ಸರ್ಕಾರ ಕೂಡಾ ತಿರುಗಿಬಿದ್ದಿದ್ದು, ಜೇಟ್ಲಿ ವಿರುದ್ಧ ಡಿಡಿಸಿಎಯಲ್ಲಿ ಫೋರ್ಜರಿ, ಭ್ರಷ್ಟಾಚಾರ, ಸಾರ್ವಜನಿಕ ಹಣದ ಲೂಟಿ ಆರೋಪಗಳಿಗೆ ಸಂಬಂಧಿಸಿದಂತೆ ಜೇಟ್ಲಿ ವಿರುದ್ಧ ಪ್ರಥಮ ಮಾಹಿತಿ ವರದಿ ದಾಖಲಿಸಲಿದೆ. ಮಾಜಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಗೋಪಾಲ ಸುಬ್ರಮಣಿಯಂ ನೇತೃತ್ವದಲ್ಲಿ ಪ್ರಕರಣದ ತನಿಖೆಗೆ ದೆಹಲಿ ಸರ್ಕಾರ ಆದೇಶಿಸಿದೆ.

ದಿಲ್ಲಿ ಮತ್ತು ಜಿಲ್ಲಾ ಕ್ರಿಕೆಟ್‌ ಸಂಸ್ಥೆ (ಡಿಡಿಸಿಎ) ಹಗರಣ ಸಂಬಂಧಿಸಿದಂತೆ ವಿಡಿಯೋ ಸಾಕ್ಷ್ಯವನ್ನು ಮಾಜಿ ಕ್ರಿಕೆಟರ್,ಬಿಜೆಪಿ ಸಂಸದ ಕೀರ್ತಿ ಅಜಾದ್ ಅವರು ಭಾನುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಬಹಿರಂಗ ಪಡಿಸಿದ್ದಾರೆ. ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಡಿಡಿಸಿಎ ಅಧ್ಯಕ್ಷರಾಗಿದ್ದ ಕಾಲದಲ್ಲಿ ಭಾರಿ ಅವ್ಯವಹರ ನಡೆದಿದೆ ಎಂದು ಆರೋಪಿಸಿದ್ದರು.

English summary
Finance Minister Arun Jaitley on Monday filed a defamation case against Delhi Chief Minister Arvind Kejriwal and five other AAP leaders in the Delhi High Court for making false allegations about irregularities in the DDCA.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X