ಕೇಂದ್ರ ಸರಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಕೊಡುಗೆ; ಡಿಎ ಏರಿಕೆ
ನವದೆಹಲಿ, ಫೆಬ್ರವರಿ 19: ಕೇಂದ್ರ ಸರಕಾರಿ ನೌಕರರಿಗೆ ಹಾಗೂ ಪಿಂಚಣಿದಾರರಿಗೆ ಭರ್ಜರಿ ಕೊಡುಗೆ ಸಿಕ್ಕಿದೆ. ಇದರಿಂದ ಒಂದು ಕೋಟಿಗಿಂತ ಹೆಚ್ಚು ಕೇಂದ್ರ ಸರಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಅನುಕೂಲ ಆಗಲಿದೆ. ಅದೇನು ಅನುಕೂಲ ಅತೀರಾ? ಕೇಂದ್ರ ಸಂಪುಟವು 3% ತುಟ್ಟಿ ಭತ್ಯೆ (ಡಿಎ) ಹೆಚ್ಚಳದ ಘೋಷಣೆ ಮಾಡಿದೆ.
ಜನವರಿ 1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಈ ನಿರ್ಧಾರದಿಂದ ಕೇಂದ್ರ ಸರಕಾರದ ಮೇಲೆ 9000 ಕೋಟಿ ರುಪಾಯಿ ಹೆಚ್ಚುವರಿ ಹೊರೆ ಬೀಳಲಿದೆ. ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ.
3% ತುಟ್ಟಿ ಭತ್ಯೆ ಹೆಚ್ಚಳ ಮಾಡಿರುವುದರಿಂದ ಡಿಎ ಹಾಗೂ ತುಟ್ಟಿ ದರ (ಡಿಆರ್) ನಿವೃತ್ತಿಯಾದವರಿಗೆ ಶೇ 12ರಷ್ಟು ತಲುಪಲಿದೆ. ಈ ಬಗ್ಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸಂಪುಟ ಸಭೆಯ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.

ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಏಳನೇ ವೇತನ ಆಯೋಗವು ಶಿಫಾರಸು ಮಾಡಿರುವ ಸೂತ್ರವನ್ನು ಒಪ್ಪಿಕೊಂಡಿರುವ ಆಧಾರದಲ್ಲಿ ಈ ಏರಿಕೆ ಮಾಡಲಾಗಿದೆ.












Click it and Unblock the Notifications