ಸರ್ಕಾರಿ ನೌಕರರಿಗೆ ಶೇ2ರಷ್ಟು ತುಟ್ಟಿ ಭತ್ಯೆ ಏರಿಕೆ ಸಾಧ್ಯತೆ!
ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡುವ ಸುಳಿವು ಸಿಕ್ಕಿದೆ. ಜನವರಿ 1ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಸಾಧ್ಯತೆ ಕಂಡು ಬಂದಿದೆ. ಶೇ. 2 ರಿಂದ 4 ರಷ್ಟು ಏರಿಕೆ ಮಾಡುವ ಸಾಧ್ಯತೆಯಿದೆ.
ನವದೆಹಲಿ, ಮಾರ್ಚ್ 05: ಕೇಂದ್ರ ಸರ್ಕಾರವು ತುಟ್ಟಿ ಭತ್ಯೆಯನ್ನು ಶೇ. 2 ರಿಂದ 4 ರಷ್ಟು ಏರಿಕೆ ಮಾಡಲು ಚಿಂತಿಸುತ್ತಿದ್ದು, ಈ ಕುರಿತು ಮುಂದಿನ ತಿಂಗಳು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.
ತುಟ್ಟಿ ಭತ್ಯೆ ಹೆಚ್ಚಳವಾದರೆ 50 ಲಕ್ಷ ಸರ್ಕಾರಿ ನೌಕರರು ಮತ್ತು 58 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಕೇಂದ್ರ ಸರ್ಕಾರ ತುಟ್ಟಿ ಭತ್ಯೆಯನ್ನು ಶೇ. 2 ರಷ್ಟು ಏರಿಕೆ ಮಾಡಲು ಸಿದ್ಧತೆ ನಡೆಸಿದೆ. ಈ ವರ್ಷದ ಜನವರಿ 1 ರಿಂದ ತುಟ್ಟಿ ಭತ್ಯೆ ಹೆಚ್ಚಳ ಅನ್ವಯವಾಗಲಿದೆ.

ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಗಮನಿಸಿದರೆ ತುಟ್ಟಿ ಭತ್ಯೆ ಏರಿಕೆಯಿಂದ ಕಾರ್ಮಿಕರು ಸಂತುಷ್ಟರಾಗುವುದಿಲ್ಲ ಎಂದು ಕೇಂದ್ರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಕೆ.ಎನ್.ಕುಟ್ಟಿ ಅವರು ಪಿಟಿಐಗೆ ತಿಳಿಸಿದರು.
2016ರ ಜುಲೈ 1 ರಿಂದ ತುಟ್ಟಿ ಭತ್ಯೆಯನ್ನು ಶೇ. 2 ರಷ್ಟು ಹೆಚ್ಚಳ ಮಾಡಲಾಗಿತ್ತು. ಈ ವರ್ಷ ಸಹ ಅಷ್ಟೇ ಪ್ರಮಾಣದಲ್ಲಿ ಏರಿಕೆ ಮಾಡುತ್ತಿದೆ ಎಂದು ಕುಟ್ಟಿ ಮಾಹಿತಿ ನೀಡಿದ್ದಾರೆ.
ತುಟ್ಟಿ ಭತ್ಯೆ(dearness allowance): ತುಟ್ಟಿ ಭತ್ಯೆಯನ್ನು 12 ತಿಂಗಳಿನ ಗ್ರಾಹಕ ಬೆಲೆ ಸೂಚ್ಯಂಕದ ಆಧಾರದ ಮೇರೆಗೆ ನಿಗದಿಪಡಿಸಲಾಗುತ್ತದೆ. ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕವಾಗಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications