ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಮೋದಿ ಸರ್ಕಾರ ಅಸ್ತು

|
Google Oneindia Kannada News

ನವದೆಹಲಿ, ಮಾರ್ಚ್ 13: ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸರ್ಕಾರಿ ನೌಕರರಿಗೆ ಶೇ 4ರಷ್ಟು ಡಿಎ ಹೆಚ್ಚಳಕ್ಕೆ ಮೋದಿ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ಈ ಬಾರಿ ಸಂಬಳ ಏರಿಕೆ ಘೋಷಣೆಯಾಗುತ್ತಿಲ್ಲ. ಆದರೆ, ತುಟ್ಟಿಭತ್ಯೆ ಹೆಚ್ಚಳ ಖಾತ್ರಿಯಾಗಿದೆ. ಆಯೋಗದ ಶಿಫಾರಸ್ಸಿನಂತೆ ನೌಕರರಿಗೆ 18,000 ರು ಕನಿಷ್ಠ ವೇತನ ಪ್ರತಿ ತಿಂಗಳಿಗೆ ಸಿಗಲಿದೆ.

ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿತ್ತು. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಇನ್ನೂ ಯಾವುದೇ ಸೂಚನೆ ಇಲ್ಲಿ ತನಕ ಬಂದಿಲ್ಲ. ಈ ಬಗ್ಗೆ ಬಜೆಟ್ ನಲ್ಲಿ ಘೋಷಣೆಯಾಗಿಲ್ಲ.

ಬಜೆಟ್ ಬಿಗ್ ನ್ಯೂಸ್ : ಡಿಎ ಹೆಚ್ಚಳ ಖಚಿತ, ಸಂಬಳ ಏರಿಕೆ ಇಲ್ಲಬಜೆಟ್ ಬಿಗ್ ನ್ಯೂಸ್ : ಡಿಎ ಹೆಚ್ಚಳ ಖಚಿತ, ಸಂಬಳ ಏರಿಕೆ ಇಲ್ಲ

ಕೇಂದ್ರ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆ (Travel Allowance) ಕೂಡಾ ನೀಡಲಾಗುತ್ತಿದೆ. ಟಿಎ ಮೌಲ್ಯ ಸೇರಿಸಿದ ಬಳಿಕ ಸಂಬಳ 810 ರು ನಿಂದ 4,320ರುಗೇರಲಿದೆ. ಒಟ್ಟಾರೆ 720 ರು ನಿಂದ 10,000 ರು ತನಕ ಸಂಬಳ ಏರಿಕೆ ನಿರೀಕ್ಷೆಯಿದೆ.

ಹಣದುಬ್ಬರ ಆಧಾರದ ಮೇಲೆ ಹೆಚ್ಚಳ

ಹಣದುಬ್ಬರ ಆಧಾರದ ಮೇಲೆ ಹೆಚ್ಚಳ

ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ5 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿತ್ತು. ಆದರೆ, ಇದೆಲ್ಲವನ್ನು ಮೀರಿ ಮುಂದಿನ ಅವಧಿ ಜನವರಿ 2020ಕ್ಕೆ ಶೇ 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ.

ಕನಿಷ್ಠ ವೇತನ ಏರಿಕೆಗೆ ಮನವಿ

ಕನಿಷ್ಠ ವೇತನ ಏರಿಕೆಗೆ ಮನವಿ

ಕೇಂದ್ರದ ಕಾರ್ಮಿಕ ಸಚಿವಾಲಯದ ಆಂತರಿಕ ಸಮಿತಿಯು ಜನವರಿಯಲ್ಲಿ ಬಿಡುಗಡೆ ಮಾಡಿದ ವರದಿಯಂತೆ, ಜುಲೈ 2018ರ ಪ್ರಕಾರ ಕನಿಷ್ಠ ವೇತನ 375 ರೂ., ಕನಿಷ್ಠ ಮಾಸಿಕ ವೇತನ 9,750 ರೂ ಹಾಗೂ ನಗರ ಮೂಲದ ಕಾರ್ಮಿಕರಿಗೆ 1,430 ರೂ. ವಸತಿ ಭತ್ಯೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆ ಇನ್ನೂ ಈಡೇರಿಲ್ಲ. ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆದಿದ್ದರೂ ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾಗುವುದಿಲ್ಲ.

ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ

ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ

ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆ ಬೇಡಿಕೆ ಇದ್ದೇ ಇದೆ. ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ

2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ. ಈಗ ತುಟ್ಟಿ ದರ (ಡಿಆರ್) ಈಗ ಶೇ 16ರಷ್ಟಾಗಿದೆ.

ನಗರಗಳ ಆಧಾರದ ಮೇಲೆ ಸಂಬಳ

ನಗರಗಳ ಆಧಾರದ ಮೇಲೆ ಸಂಬಳ

ಕೇಂದ್ರ ಸರ್ಕಾರಿ ನೌಕರರು ತಾವಿರುವ ನಗರಗಳ ಆಧಾರದ ಮೇಲೆ ಶೇ. 45ರವರೆಗೆ ಹೆಚ್ಚಿನ ಸಂಬಳ ಪಡೆಯಲಿದ್ದಾರೆ. 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ,53 ಲಕ್ಷ ಕೇಂದ್ರದ ಪಿಂಚಣಿದಾರರು, ಸೇನಾ ವಲಯದ 14 ಲಕ್ಷ ಸಿಬ್ಬಂದಿಗೆ ಇದರ ಲಾಭಗಳಾಗಲಿದ್ದು, ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 30,748 ಕೋಟಿ ರು. ಹೊರೆ ಬೀಳಲಿದೆ. ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿಯ ಅನುಸಾರ ವೇತನ ಹೆಚ್ಚಳವಾಗಲಿದೆ. ಆದರೆ, ಕನಿಷ್ಟ ವೇತನ ಏರಿಕೆಯಾಗಿಲ್ಲ. ಲೆವೆಲ್ 01 ರಿಂದ ಲೆವೆಲ್ 18ರ ತನಕ ಸಮಾನ ಸ್ತರದಲ್ಲಿ ಅವರ ಸಂಬಳಕ್ಕೆ ತಕ್ಕಂತೆ ಡಿಎ ಹೆಚ್ಚಳ ಮಾಡುತ್ತಾ ಬರಲಾಗಿದೆ.

English summary
Union Cabinet on Friday (March 13, 2020) approves a 4% increase in Dearness Allowance for employees and pensioners of the Central government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X