ಮಹಾರಾಷ್ಟ್ರದ ನಾಂದೇಡ್ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ 31ಕ್ಕೆ ಏರಿಕೆ
ಮುಂಬೈ, ಅಕ್ಟೋಬರ್ 03: ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಏಳು ರೋಗಿಗಳು ಸಾವನ್ನಪ್ಪಿದ್ದರು. ಈ ಸಾವಿನ ಸಂಖ್ಯೆ ಕ್ರಮೇಣ 24 ರಿಂದ 31 ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 1 ರವರೆಗಿನ 24 ಗಂಟೆಗಳ ಅವಧಿಯಲ್ಲಿ 12 ಶಿಶುಗಳು ಸೇರಿದಂತೆ ಹಿಂದಿನ 24 ಸಾವು ಮಂದಿ ಸಾವನ್ನಪ್ಪಿದ್ದಾರೆ. ವೈದ್ಯಕೀಯ ಸಂಪನ್ಮೂಲಗಳು ಆರೋಗ್ಯ ಸಿಬ್ಬಂದಿ ಕೊರತೆ, ಹಾಗೂ ಅಧಿಕಾರಿಗಳ ಅಸಮರ್ಪಕತೆ ಕಾರಣ ರಾಜ್ಯ ಸರ್ಕಾರವು ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಿದೆ.

ಸೋಮವಾರ ರಾತ್ರಿ ಮೃತ ಏಳು ಮಂದಿಯಲ್ಲಿ ನಾಲ್ಕು ನವಜಾತ ಶಿಶುಗಳು ಸೇರಿವೆ. ಇದರೊಂದಿಗೆ ಒಟ್ಟು ಶಿಶು ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ನಾಂದೇಡ್ ಜಿಲ್ಲಾ ಮಾಹಿತಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, "ಶಂಕರರಾವ್ ಚವ್ಹಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 1 ರವರೆಗಿನ ಅವಧಿಯಲ್ಲಿ ಒಟ್ಟು ಸಾವುಗಳು 24. ಅಕ್ಟೋಬರ್ 1 ರಿಂದ 2 ರ ಅವಧಿಯಲ್ಲಿ ಒಟ್ಟು ನವಜಾತು ಶಿಶುಗಳ ಸಾವು 7 ಆಗಿತ್ತು" ಎಂದು ತಿಳಿಸಿದೆ.
ಆದರೆ ಈ ಬಗ್ಗೆ ಡಾ. ಶಂಕರ್ ರಾವ್ ಚವಾಣ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಂಗಾಮಿ ಡೀನ್ ಡಾ. ಎಸ್.ಆರ್. ವಾಕೋಡೆ ಅವರು ಹೇಳಿಕೆ ನೀಡಲು ನಿರಾಕರಿಸಿದರು. ಮಹಾರಾಷ್ಟ್ರ ವೈದ್ಯಕೀಯ ಶಿಕ್ಷಣ ಸಚಿವ ಹಸನ್ ಮುಶ್ರೀಫ್ ಅವರು ಸಂಜೆ ಮಾಧ್ಯಮಗಳಿಗೆ ಮಾಹಿತಿ ನೀಡಲಿದ್ದಾರೆ. ಮುಶ್ರಿಫ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡುವ ಮೊದಲು ಆಸ್ಪತ್ರೆ ಮತ್ತು ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.
ಆಸ್ಪತ್ರೆಯಲ್ಲಿ ಸದ್ಯಕ್ಕೆ 60ಕ್ಕೂ ಹೆಚ್ಚು ರೋಗಿಗಳು ವಿವಿಧ ಕಾರಣಗಳಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಗೆ ಹೊಣೆಗಾರರನ್ನು ಸರ್ಕಾರವೇ ನಿರ್ಧರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ನಾಂದೇಡ್‌ನ ಶಾಸಕ ಅಶೋಕ್ ಚವಾಣ್ ಆಗ್ರಹಿಸಿದ್ದಾರೆ.












Click it and Unblock the Notifications