ಆರೆಸ್ಸೆಸ್ ಮಾನನಷ್ಟ ಮೊಕದ್ದಮೆ, ಕೋರ್ಟಿಗೆ ರಾಹುಲ್ ಹಾಜರ್

ಮುಂಬೈ, ಜೂನ್ 12: ಆರ್.ಎಸ್.ಎಸ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಮಹಾರಾಷ್ಟ್ರದ ಭಿವಾಂಡಿ ನ್ಯಾಯಾಲಯದ ಮುಂದೆ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಜರಾದರು.

ಆರ್.ಎಸ್.ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಎಂಬವರು ಅವರ ವಿರುದ್ಧ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣ ಇದಾಗಿದೆ. ಕಳೆದ ತಿಂಗಳೇ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರ ವಕೀಲರು ಖುದ್ದು ಹಾಜರಿಯಿಂದ ವಿನಾಯಿತಿ ಕೋರಿದ್ದರು. ಇದನ್ನು ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಇಂದು ವಿಚಾರಣೆಗೆ ಹಾಜರಾದರು.

ಮಹಾತ್ಮಾ ಗಾಂಧಿ ಹತ್ಯೆ ಹಿಂದೆ ಆರ್.ಎಸ್.ಎಸ್ ಇದೆ ಎನ್ನುವ ಹೇಳಿಕೆಯನ್ನು ರಾಹುಲ್ ಗಾಂಧಿ ಮಾರ್ಚ್ 6, 2014ರಲ್ಲಿ ನೀಡಿದ್ದರು. ಈ ಹೇಳಿಕೆ ಸಂಬಂಧ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲಾಗಿತ್ತು.

Defamation case of RSS against Rahul, Next date of hearing is August 10

ಇಂದು ಭಿವಾಂಡಿ ನ್ಯಾಯಾಲಯ ರಾಹುಲ್ ಗಾಂಧಿ ವಿರುದ್ಧ ಆರೋಪಗಳನ್ನು ದಾಖಲು ಮಾಡಿಳ್ಳಲಾಗಿದೆ. ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಮುಂದಿನ ವಿಚಾರಣೆಯನ್ನು ಇದೇ ಆಗಸ್ಟ್ 10ಕ್ಕೆ ಕೋರ್ಟ್ ಮುಂದೂಡಿದೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ದೂರುದಾರ ರಾಜೇಶ್ ಕುಂಟೆ, "ರಾಹುಲ್ ಗಾಂಧಿ ಮತ್ತು ಅವರ ಜನರಿಗೆ ವಿಶೇಷ ಆತಿಥ್ಯ ನೀಡಲಾಗಿದೆ. ಆದರೆ ದೂರುದಾರನಾಗಿದ್ದೂ ನನಗೆ ನ್ಯಾಯಾಲಯದೊಳಗೆ ಪ್ರವೇಶಿಸಲು ಅವಕಾಶ ನೀಡಿಲ್ಲ. ಪೊಲೀಸರು ತಾರತಮ್ಯ ನಡೆಸಿದ್ದಾರೆ," ಎಂದು ದೂರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+