ಪರಿಚ್ಛೇದ 370 ರದ್ದಾದ ಬಳಿಕ ಲಡಾಖ್‌ಗೆ ರಾಜನಾಥ್ ಸಿಂಗ್ ಮೊದಲ ಭೇಟಿ

ಲೆಹ್, ಆಗಸ್ಟ್ 29: ಜಮ್ಮು ಕಾಶ್ಮೀರದಲ್ಲಿ ಸಂವಿಧಾನದ ವಿಧಿ 370 ರದ್ದಾದ ಬಳಿಕ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಮೊದಲ ಬಾರಿಗೆ ಲಡಾಖ್‌ಗೆ ಭೇಟಿ ನೀಡಿದ್ದಾರೆ.

ವಿಧಿ 370 ರದ್ದಾದ ಬಳಿಕ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಲಾಗಿತ್ತು. ಹಾಗೆಯೇ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲಾಗಿತ್ತು.

ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿ ರಚನೆಯಾದ ನಂತರ ಕೇಂದ್ರ ಸರ್ಕಾರದ ಹಿರಿಯ ಸಚಿವರ ಮೊದಲ ಭೇಟಿ ಇದಾಗಿದೆ.

Defence Minister Rajnath Singh Visited Ladakh

ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಎತ್ತರದ ಪ್ರದೇಶಗಳಲ್ಲಿ ಬೆಳೆಯಲು ಸೂಕ್ತವಾದ ಬೆಳೆಗಳು ಮತ್ತು ಧಾನ್ಯಗಳನ್ನು ಪ್ರದರ್ಶಿಸುವ ವಿಜ್ಞಾನ್ ಮೇಳವನ್ನು ಸಿಂಗ್ ಉದ್ಘಾಟಿಸಲಿದ್ದಾರೆ. ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಹೈ ಆಲ್ಟಿಟ್ಯೂಡ್ ರಿಸರ್ಚ್‌ನಲ್ಲಿ ಈ ಮೇಳವನ್ನು ಆಯೋಜಿಸಲಾಗುತ್ತಿದೆ.

ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಹೈ ಆಲ್ಟಿಟ್ಯೂಡ್ ರಿಸರ್ಚ್ (DIHAR) ಆಯೋಜಿಸಿರುವ '26 ನೇ ಲಡಾಖಿ ಕಿಸಾನ್ ಜವಾನ್ ವಿಜಯಾನ್ ಮೇಳ 'ಉದ್ಘಾಟನಾ ಪಾಲ್ಗೊಂಡಿದ್ದಾರೆ.

ಲಡಾಖ್‌ ಭೇಟಿ ಸಮಯದಲ್ಲಿ ರಾಜನಾಥ್ ಸಿಂಗ್ ಈ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸುತ್ತಾರೆ ಮತ್ತು ಸ್ಥಳೀಯರು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಂವಹನ ನಡೆಸಿದ್ದಾರೆ.

ಲಡಾಖ್ ಅನ್ನು ಜಮ್ಮು ಮತ್ತು ಕಾಶ್ಮೀರದಿಂದ ವಿಭಜಿಸಿ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿರುವ ಸರ್ಕಾರದ ನಿರ್ಧಾರದಿಂದ ಲಡಾಖ್‌ಗೆ ಹೇಗೆ ಸಹಾಯವಾಗಲಿದೆ ಎಂಬ ಬಗ್ಗೆ ಅವರು ಚರ್ಚೆ ನಡೆಸಿದ್ದಾರೆ.

ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿನ ಪರಿಸ್ಥಿತಿಯ ಬಗ್ಗೆ ಸಚಿವರು ಈ ಪ್ರದೇಶದ ರಕ್ಷಣಾ ಮತ್ತು ಮಿಲಿಟರಿ ಅಧಿಕಾರಿಗಳೊಂದಿಗೆ ಸಂವಾದ ನಡೆಸಬಹುದು ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+