Delhi air pollution: ನಾಳೆಯಿಂದ ದೆಹಲಿಯಲ್ಲಿ ಶಾಲೆಗಳಿಗೆ ಚಳಿಗಾಲದ ರಜೆ ಘೋಷಣೆ!
ದೆಹಲಿ ನವೆಂಬರ್ 8: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅಪಾಯಕಾರಿ ಮಟ್ಟವನ್ನು ದಾಟಿದೆ. ಆರು ದಿನಗಳಿಂದ ನಗರದಲ್ಲಿ ವಿಷಕಾರಿ ಹೊಗೆ ಆವರಿಸಿದ್ದು ಇದನ್ನು ತಗ್ಗಿಸಲು ದೆಹಲಿ ಸರ್ಕಾರ ನಿರಂತರವಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದರ ಅಡಿಯಲ್ಲಿ ಬುಧವಾರ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು ಎಲ್ಲಾ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಶಾಲೆಗಳಲ್ಲಿ ಮಕ್ಕಳಿಗೆ ನವೆಂಬರ್ 9 ರಿಂದ ನವೆಂಬರ್ 18 ರವರೆಗೆ ಚಳಿಗಾಲದ ರಜೆ ಘೋಷಿಸಿಲಾಗಿದೆ. ಈ ಅವಧಿಯಲ್ಲಿ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಕಟ್ಟುನಿಟ್ಟಿನ ಆದೇಶವನ್ನು ದೆಹಲಿ ಶಿಕ್ಷಣ ಇಲಾಖೆ ನೀಡಿದೆ.

ವಾಸ್ತವವಾಗಿ ದೆಹಲಿ ಮತ್ತು ಅದರ ಸುತ್ತಮುತ್ತಲಿನ ನಗರಗಳಲ್ಲಿನ ಗಾಳಿಯ ಗುಣಮಟ್ಟವು ಬುಧವಾರ ಬೆಳಿಗ್ಗೆ ಮತ್ತೆ ತೀವ್ರ ವರ್ಗಕ್ಕೆ ತಲುಪಿದೆ. ಮಂಗಳವಾರ ಸಂಜೆ 4 ಗಂಟೆಗೆ ನಗರದ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 395ರಿಂದ 421ಕ್ಕೆ ಕುಸಿದಿತ್ತು.
ವರದಿಯೊಂದರ ಪ್ರಕಾರ ಆರೋಗ್ಯ ಸಮಸ್ಯೆಗಳನ್ನು ಪ್ರಚೋದಿಸುವ ಸಾಮರ್ಥ್ಯವಿರುವ ಸೂಕ್ಷ್ಮ ಕಣವಾದ PM2.5 ರ ಸಾಂದ್ರತೆಯು (60 ಮೈಕ್ರೋಗ್ರಾಂ) ರಾಜಧಾನಿಯಲ್ಲಿ ಏಳರಿಂದ ಎಂಟು ಪಟ್ಟು ಹೆಚ್ಚಾಗಿದೆ.
ದೆಹಲಿಯ ಸುತ್ತಮುತ್ತಲಿನ ನಗರಗಳಲ್ಲಿನ ಗಾಳಿಯ ಗುಣಮಟ್ಟವನ್ನು ಅಪಾಯಕಾರಿ ಎಂದು ವಿವರಿಸಲಾಗಿದೆ. ನೆರೆಯ ನಗರಗಳಾದ ಗಾಜಿಯಾಬಾದ್‌ನಲ್ಲಿ ಎಕ್ಯೂಐ 382, ಗುರುಗ್ರಾಮ್ 370, ನೋಯ್ಡಾ 348, ಗ್ರೇಟರ್ ನೋಯ್ಡಾ 474 ಮತ್ತು ಫರಿದಾಬಾದ್ 396 ರಷ್ಟಿದೆ.
ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
ದಿಲ್ಲಿ, ಪಂಜಾಬ್, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸರಕಾರಗಳಿಗೆ ಹುಲ್ಲು ಸುಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಅಲ್ಲದೆ ಇದನ್ನು ಜಾರಿಗೊಳಿಸುವಂತೆ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ನ್ಯಾಯಾಲಯ ಸೂಚಿಸಿದೆ. ಅದನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿದೆ. ವಾರಾಂತ್ಯದಲ್ಲಿ ಪಂಜಾಬ್‌ಗೆ ಹೋಗುತ್ತಿದ್ದಾಗ ರಸ್ತೆಯ ಇಕ್ಕೆಲಗಳಲ್ಲಿ ಭಾರಿ ಪ್ರಮಾಣದಲ್ಲಿ ಹುಲ್ಲು ಸುಡುತ್ತಿರುವುದನ್ನು ನಾನು ನೋಡಿದ್ದೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದಾರೆ. ಹೀಗಾಗಿ ಹುಲ್ಲು ಸುಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಕೋರ್ಟ್ ಆದೇಶ ನೀಡಿದೆ.
ಈ ರೀತಿಯ ಭತ್ತವನ್ನು ಈ ಅವಧಿಯಲ್ಲಿ ಬೆಳೆಯಬೇಕೇ ಎಂದು ಗಂಭೀರವಾದ ಅವಲೋಕನ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. "15 ವರ್ಷಗಳ ಹಿಂದೆ ಈ ಪ್ರಮಾಣದ ಬೆಳೆ ಬೆಳೆಯದ ಕಾರಣ ಈ ಸಮಸ್ಯೆ ಉದ್ಭವಿಸಲಿಲ್ಲ" ಈ ರಿತಿ ಬೆಳೆ ಬೆಳೆಯುವುದು, ಪಂಜಾಬ್‌ನ ನೀರಿನ ಮಟ್ಟವನ್ನು ನಾಶಪಡಿಸಿದೆ ಮತ್ತು ದೆಹಲಿಯ ಸುತ್ತಮುತ್ತಲಿನ ಹವಾಮಾನವು ಅದರ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.












Click it and Unblock the Notifications