Delhi assembly : ಆಕ್ಸಿಜನ್ ಸಿಲಿಂಡರ್‌ನೊಂದಿಗೆ ವಿಧಾನಸಭೆ ಪ್ರವೇಶಿಸಿದ ಬಿಜೆಪಿ ಶಾಸಕರು !
ನವದೆಹಲಿ,ಜನವರಿ16: ರಾಷ್ಟ್ರ ರಾಜಧಾನಿಯಲ್ಲಿ ತೀವ್ರವಾಗಿರುವ ವಾಯುಮಾಲಿನ್ಯ ಸಮಸ್ಯೆಯನ್ನು ಅಣಕಿಸುವ ನಿಟ್ಟಿನಲ್ಲಿ ಬಿಜೆಪಿಯ ಶಾಸಕರು ಆಕ್ಸಿಜನ್ ಸಿಲೆಂಡರ್‌ಗಳನ್ನು ಕೈಯಲ್ಲಿ ಹಿಡಿದು ವಿಧಾನಸಭೆಯ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸುವ ಮೂಲಕ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದರು.
ಸೋಮವಾರದಿಂದ ಮೂರು ದಿನಗಳವರೆಗೆ ವಿಧಾನಸಭೆ ಅಧಿವೇಶನ ಜರುಗಲಿದೆ. ಅಧಿವೇಶನದ ಮೊದಲ ದಿನ ದಿನವೇ ಆಡಳಿತ ಪಕ್ಷದ ವಿರುದ್ದ ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ಅವರೊಂದಿಗೆ ಪ್ರತಿಪಕ್ಷದ ನಾಯಕ ರಾಮವೀರ್ ಸಿಂಗ್ ಬಿಡ್ಗುರಿ, ಓಪಿ ಶರ್ಮಾ ಮತ್ತು ಅಭಯ್ ವರ್ಮಾ ಆಮ್ಲಜನಕದ ಸಿಲಿಂಡರ್ ಮತ್ತು ಆಮ್ಲಜನಕದ ಮಾಸ್ಕ್‌ಗಳನ್ನು ಧರಿಸಿಕೊಂಡು ಅಧಿವೇಶನಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ರಾಮ್‌ವೀರ್ ಸಿಂಗ್ ಬಿಧುರಿ ಅವರು ದೆಹಲಿಯನ್ನು ಗ್ಯಾಸ್ ಚೇಂಬರ್ ಎಂದು ಕರೆದಿದ್ದು, ವಾಯು ಮಾಲಿನ್ಯದಿಂದ ಜನರು ಕ್ಯಾನ್ಸರ್ ಮತ್ತು ಶ್ವಾಸಕೋಶದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಮಾಲಿನ್ಯದಿಂದಾಗಿ ದೆಹಲಿಯ ಆಸ್ಪತ್ರೆಗಳಲ್ಲಿ ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಎಎಪಿ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದರು.
With a gas cylinder in tow, I would raise the voice of Delhi’s 2 crore people who have been forced to live in a gas chamber, in the Delhi assembly.
— Vijender Gupta (@Gupta_vijender) January 16, 2023
The AAP government must come clean on what they have done to make Delhi pollution free.#MakeDelhiPollutionFree pic.twitter.com/b8cR3emro2
ಈ ಕುರಿತು ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ ಅವರು ಟ್ವಿಟ್ ಮಾಡಿದ್ದಾರೆ. ದೆಹಲಿಯಲ್ಲಿ ವಾಸಿಸುತ್ತಿರುವ ಎರಡು ಕೋಟಿ ಜನರಿಗೆ ಉಸಿರಾಡಲು ಶುದ್ಧವಾದ ಗಾಳಿ ಇಲ್ಲದಂತಾಗಿದೆ. ಕೃತಕವಾದ ಆಮ್ಲಜನಕದ ಸಿಲೆಂಡರ್ ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ. ದೆಹಲಿಯನ್ನು ಮಾಲಿನ್ಯ ಮುಕ್ತಗೊಳಿಸುವಲ್ಲಿ ಆಪ್ ಸರ್ಕಾರ ಸಂಪೂರ್ಣ ವಿಫಲವಾಗಿದೆ.ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಟ್ವಿಟ್ ಮಾಡಿದ್ದಾರೆ.

ಆಮ್ಲಜನಕ ಸಿಲಿಂಡರ್‌ಗಳೊಂದಿಗೆ ಶಾಸಕರು ವಿಧಾನಸೌಧದ ಒಳಗೆ ಪ್ರವೇಶಿಸಿದಾಗ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಆಕ್ಷೇಪ ವ್ಯಕ್ತಪಡಿಸಿದರು. ಆಕ್ಸಿಜನ್ ಸಿಲಿಂಡರ್‌ಗಳನ್ನು ಸದನದಿಂದ ಹೊರಗೆ ತೆಗೆದುಕೊಂಡು ಹೋಗುವಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಿದರು. ಆದರೇ ಬಿಜೆಪಿಯ ನಾಯಕರು ಸ್ಪೀಕರ್ ಅವರ ಆದೇಶವನ್ನು ನಿರಾಕರಿಸಿದರು. ನಂತರದಲ್ಲಿ ಬಿಜೆಪಿ ಶಾಸಕರಿಗೆ ಉಸಿರಾಡಲು ಆಮ್ಲಜನಕ ಸಿಲೆಂಡರ್ ಅವಶ್ಯಕವಿದೆ ಎಂಬ ವೈದ್ಯಕೀಯ ಪ್ರಮಾಣಪತ್ರ ನೀಡುವಂತೆ ಸೂಚಿಸಿದರು.
ಸೋಮವಾರದಂದು ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ (AQI) 337 ಆಗಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿನ ವಾಯು ಗುಣಮಟ್ಟ ನಿರ್ವಹಣಾ ಆಯೋಗವು ಜನವರಿ 15 ರಂದು ತನ್ನ ಸಭೆಯನ್ನು ಆಯೋಜಿಸಿತ್ತು. ಸಭೆಯಲ್ಲಿ ಜಿಆರ್‌ಎಪಿ ಯ ಹಂತ III ರ ಅಡಿಯಲ್ಲಿ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ. ಇದರ ಪ್ರಕಾರ ರಾಜಧಾನಿಯ ಪ್ರಮುಖ ಪ್ರದೇಶಗಳಲ್ಲಿ ಅಗತ್ಯವಲ್ಲದ ಎಲ್ಲ ನಿರ್ಮಾಣ ಕಾಮಗಾರಿಗಳು ಮತ್ತು ಕಟ್ಟಡ ನೆಲಸಮ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications