ದೆಹಲಿ ವಿಧಾನಸಭೆ ಚುನಾವಣೆ-2025: ಡೈಲಿಹಂಟ್‌ನಲ್ಲಿ ನಿಖರ ಫಲಿತಾಂಶ
ದೆಹಲಿ ವಿಧಾನಸಭೆ ಚುನಾವಣೆ-2025ರ ಫಲಿತಾಂಶ ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ. 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 5ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಶೇ 60ರಷ್ಟು ಮತದಾನವಾಗಿದೆ. 699 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಫೆಬ್ರವರಿ 8ರ ಶನಿವಾರ ಮತ ಎಣಿಕೆ ನಡೆಯಲಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36.
ದೆಹಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಶನಿವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 11 ಗಂಟೆ ವೇಳಗೆ ಯಾರು ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ನಡೆಸಲಿದ್ದಾರೆ? ಎಂಬುದು ತಿಳಿಯಲಿದೆ. ಸಂಜೆಯ ವೇಳಗೆ ಯಾರಿಗೆ ಎಷ್ಟು ಸೀಟು ಸಿಕ್ಕಿತು? ಎಂದು ಸ್ಪಷ್ಟ ಚಿತ್ರಣ ಸಿಗಲಿದೆ.

2015, 2020ರ ಚುನಾವಣೆಯಲ್ಲಿ ಗೆದ್ದು ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿದ್ದ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 2025ರಲ್ಲಿಯೂ ಗೆದ್ದು ಹ್ಯಾಟ್ರಿಕ್ ಬಾರಿಸುವ ಉತ್ಸಾಹದಲ್ಲಿದೆ. ಆದರೆ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಸರಳ ಬಹುಮತ ಪಡೆಯಲಿದೆ ಎಂದು ಅಂದಾಜಿಸಿದ್ದು, ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಯಲ್ಲಿ ಎದುರಾಳಿಗಳು. 2024ರ ಲೋಕಸಭೆ ಚುನಾವಣೆಯಲ್ಲಿ ಎಎಪಿ ಮತ್ತು ಕಾಂಗ್ರೆಸ್ 'ಇಂಡಿಯಾ' ಮೈತ್ರಿಕೂಟದಲ್ಲಿದ್ದವು. ಆದರೆ ದೆಹಲಿ ಚುನಾವಣೆಯನ್ನು ಎರಡೂ ಪಕ್ಷಗಳು ಏಕಾಂಗಿಯಾಗಿ ಎದುರಿಸಿವೆ. ಬಿಜೆಪಿ 68 ಸೀಟುಗಳಲ್ಲಿ ಕಣಕ್ಕಿಳಿದಿದ್ದು, ಎರಡು ಸೀಟುಗಳನ್ನು ಜೆಡಿಯುಗೆ ಬಿಟ್ಟುಕೊಟ್ಟಿದೆ.
ಬಿಜೆಪಿ, ಕಾಂಗ್ರೆಸ್ ಪ್ರಕಾರ ದೆಹಲಿಯಲ್ಲಿ ಆಡಳಿತ ವಿರೋಧಿ ಅಲೆ ಇದೆ. ಆದ್ದರಿಂದ ಜನರು ಈ ಬಾರಿ ರಾಷ್ಟ್ರೀಯ ಪಕ್ಷವನ್ನು ಬೆಂಬಲಿಸಲಿದ್ದಾರೆ. 27 ವರ್ಷಗಳಿಂದ ದೆಹಲಿಯಲ್ಲಿ ಬಿಜೆಪಿ ಅಧಿಕಾರವನ್ನು ಪಡೆದಿಲ್ಲ, 12 ವರ್ಷಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿಲ್ಲ. ಕಳೆದ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ 1 ಸೀಟು ಗೆಲ್ಲಲು ಸಹ ವಿಫಲವಾಗಿದೆ.
ಚುನಾವಣಾ ಫಲಿತಾಂಶ ಎಂದರೆ ಕೇವಲ ಅಂಕಿ ಸಂಖ್ಯೆಗಳ ಲೆಕ್ಕವಲ್ಲ, ಅದರಲ್ಲಿ ರಾಜಕೀಯ ವಿಶ್ಲೇಷಣೆ, ರಾಜಕೀಯ ಪಕ್ಷಗಳ ಮುಂದಿನ ನಡೆ, ರಾಜಕೀಯ ನಾಯಕರ ಭವಿಷ್ಯ, ಪಕ್ಷಗಳ ಮುಂದಿನ ಕಾರ್ಯತಂತ್ರ ಅಡಗಿರುತ್ತದೆ. ಆದ್ದರಿಂದ ಫಲಿತಾಂಶವನ್ನು ಆಳವಾಗಿ ವಿಶ್ಲೇಷಣೆ ಮಾಡಬೇಕಿದೆ.
ಶನಿವಾರ ಬೆಳಗ್ಗೆ ದೆಹಲಿ ಚುನಾವಣೆ-2025ರ ಫಲಿತಾಂಶವನ್ನು ಡೈಲಿ ಹಂಟ್ ಲೈವ್ ಆಗಿ ನೀಡಲಿದೆ. ಕೇವಲ ಯಾರಿಗೆ ಎಷ್ಟು ಸೀಟು ಎಂಬ ಮಾಹಿತಿ ನೀಡುವುದಿಲ್ಲ. ಹಿಂದಿನ ಚುನಾವಣೆ ಅಂಕಿ ಸಂಖ್ಯೆಗಳು, ವಿಶ್ಲೇಷಣೆಗಳನ್ನು ಸಾಮಾನ್ಯ ಜನರಿಗೂ ಸರಳವಾಗಿ ಅರ್ಥವಾಗುವಂತೆ ನೀಡಲಾಗುತ್ತದೆ.
ಚುನಾವಣಾ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿದ್ದಂತೆ ಫಲಿತಾಂಶದ ವಿಶ್ಲೇಷಣೆಯನ್ನು ರಾಜಕೀಯ ತಜ್ಞರ ಮೂಲಕ ನೀಡಲಾಗುತ್ತದೆ. ಶನಿವಾರ ದೆಹಲಿ ವಿಧಾನಸಭೆ ಚುನಾವಣೆ-2025ರ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಡೈಲಿ ಹಂಟ್ ಅನ್ನು ಫಾಲೋ ಮಾಡಿ.












Click it and Unblock the Notifications