Delhi Assembly Election 2025: 70 ಕ್ಷೇತ್ರಗಳಿಗೆ 1,521 ನಾಮಪತ್ರಗಳು ಸಲ್ಲಿಕೆ
ನವದೆಹಲಿ, ಜನವರಿ 18: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5ರಂದು ಮತದಾನ ನಡೆಯಲಿದೆ. ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. 70 ಕ್ಷೇತ್ರಗಳಿಗೆ 1,521 ನಾಮಪತ್ರಗಳು ಸಲ್ಲಿಕೆಯಾಗಿವೆ. 20/1/2025 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.
ದೆಹಲಿ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಜನವರಿ 17ರ ಶುಕ್ರವಾರ ಕೊನೆಯ ದಿನವಾಗಿತ್ತು. 70 ಕ್ಷೇತ್ರಗಳಿಗೆ 981 ಅಭ್ಯರ್ಥಿಗಳು 1,521 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಜನವರಿ 18ರ ಶನಿವಾರ ನಾಮಪತ್ರಗಳ ಪರಿಶೀಲನೆ ನಡೆಯುತ್ತಿದೆ. ಎಷ್ಟು ನಾಮಪತ್ರ ಅಧಿಕೃತ? ಎಂಬ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

ಎಷ್ಟು ಅಭ್ಯರ್ಥಿಗಳು?; ಚುನಾವಣಾ ಆಯೋಗದ ಮಾಹಿತಿ ಪ್ರಕಾರ 981 ಅಭ್ಯರ್ಥಿಗಳು 1,521 ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರ 680 ನಾಮಪತ್ರ ಸಲ್ಲಿಕೆಯಾಗಿದೆ. ಉತ್ತರ ಜಿಲ್ಲೆಯಲ್ಲಿ ಅತಿ ಹೆಚ್ಚು ಎಂದರೆ 183 ನಾಮಪತ್ರಗಳನ್ನು 108 ಅಭ್ಯರ್ಥಿಗಳಿಂದ ಸ್ವೀಕಾರ ಮಾಡಲಾಗಿದೆ.
ನೈಋತ್ಯ ಜಿಲ್ಲೆಯಲ್ಲಿ 104 ಅಭ್ಯರ್ಥಿಗಳು 170 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಜಿಲ್ಲೆಯಲ್ಲಿ 154 ನಾಮಪತ್ರಗಳನ್ನು 108 ಅಭ್ಯರ್ಥಿಗಳು ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ 85 ಅಭ್ಯರ್ಥಿಗಳು 135 ನಾಮಪತ್ರ, ವಾಯುವ್ಯದಲ್ಲಿ 90 ಅಭ್ಯರ್ಥಿಗಳು 139, ಆಗ್ನೇಯದಲ್ಲಿ 93 ಅಭ್ಯರ್ಥಿಗಳು 140 ನಾಮಪತ್ರ ಸಲ್ಲಿಸಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಎಎಪಿ, ಬಿಜೆಪಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಲ್ಲದೇ ಪಕ್ಷೇತರರು, ಇತರ ರಾಜಕೀಯ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣಕ್ಕಿಳಿದಿದ್ದಾರೆ. ಆದ್ದರಿಂದ 70 ಕ್ಷೇತ್ರಗಳಿಗೆ 1,521 ನಾಮಪತ್ರಗಳು ಸಲ್ಲಿಕೆಯಾಗಿವೆ. ಎಷ್ಟು ನಾಮಪತ್ರ ಕ್ರಮಬದ್ಧ ಎಂದು ಭಾನುವಾರ ತಿಳಿಯಲಿದೆ.
2025ರ ದೆಹಲಿ ಚುನಾವಣೆಗೆ ಮೂರು ಪಕ್ಷಗಳಿಗೆ ಅತ್ಯಂತ ಮಹತ್ವದ್ದು. 2025ರಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ. ರಾಜ್ಯದಲ್ಲಿ 2015, 2020ರಲ್ಲಿ ಜಯಗಳಿಸುವ ಮೂಲಕ ಎಎಪಿ ಸರ್ಕಾರ ರಚನೆ ಮಾಡಿದೆ. ಈ ಬಾರಿಯೂ ಗೆದ್ದು ಹ್ಯಾಟ್ರಿಕ್ ಬಾರಿಸುವ ಉತ್ಸಾಹದಲ್ಲಿ ಸರ್ಕಾರವಿದೆ.
ಆಡಳಿತ ಪಕ್ಷ ಎಎಪಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ ಎಂಬುದು ಬಿಜೆಪಿ, ಕಾಂಗ್ರೆಸ್ ಲೆಕ್ಕಾಚಾರವಾಗಿದೆ. ಆದ್ದರಿಂದ ಅದನ್ನು ಬಳಕೆ ಮಾಡಿಕೊಂಡು ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಹಿಡಿಯಬೇಕು ಎಂದು ಎರಡೂ ಪಕ್ಷಗಳು ತಂತ್ರ ರೂಪಿಸಿವೆ.
ದೆಹಲಿ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಘೋಷಣೆ ಆಗುತ್ತಿದ್ದಂತೆಯೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಇಲ್ಲಿಯ ತನಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ 180 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.
ಹಾಲಿ ದೆಹಲಿ ಮುಖ್ಯಮಂತ್ರಿ ಅತಿಶಿ ಮರ್ಲೆನಾ. ಶೀಲಾ ದೀಕ್ಷಿತ್ ಮತ್ತು ಸುಷ್ಮಾ ಸ್ವರಾಜ್ ನಂತರ ಅತಿಶಿ ದೆಹಲಿಯ 3ನೇ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. 2025ರ ಚುನಾವಣೆಯಲ್ಲಿ ಎಎಪಿ ಪಕ್ಷ ಜಯಗಳಿಸಿದರೆ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅತಿಶಿ ಈಗಾಗಲೇ ಘೋಷಣೆ ಮಾಡಿದ್ದಾರೆ.
ಎಎಪಿ ಪಕ್ಷ ಬಿಜೆಪಿ, ಕಾಂಗ್ರೆಸ್‌ನಿಂದ ಪ್ರಬಲವಾದ ಪೈಪೋಟಿಯನ್ನು ಎದುರಿಸುತ್ತಿದೆ. ಎಎಪಿ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಪ್ರಕರಣ, ಅರವಿಂದ್ ಕೇಜ್ರಿವಾಲ್ ಜೈಲು ವಾಸ ಮುಂತಾದ ಪ್ರಕರಣಗಳು ಎಎಪಿಗೆ ಚುನಾವಣೆಯಲ್ಲಿ ಸವಾಲು ಒಡ್ಡಿವೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications