Get Updates
Get notified of breaking news, exclusive insights, and must-see stories!

Delhi Assembly Election 2025: ಡಿಸಿಎಂ ಏಕನಾಥ ಶಿಂಧೆ ಮಹತ್ವದ ಘೋಷಣೆ

ನವದೆಹಲಿ, ಜನವರಿ 22: ದೆಹಲಿ ವಿಧಾನಸಭೆ ಚುನಾವಣೆ-2025ರ ಕಣ ಅಂತಿಗೊಂಡಿದೆ. 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ. 70 ಕ್ಷೇತ್ರದ ಚುನಾವಣಾ ಕಣದಲ್ಲಿ 699 ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಎಎಪಿ, ಕಾಂಗ್ರೆಸ್ ಪ್ರಮುಖ ಎದುರಾಳಿಗಳು. ಎನ್‌ಡಿಎ ಮೈತ್ರಿಕೂಟ ಮಿತ್ರಪಕ್ಷ ಜೆಡಿಯುಗೆ ಬಿಜೆಪಿ 2 ಸೀಟುಗಳನ್ನು ಬಿಟ್ಟುಕೊಟ್ಟಿದೆ. 'ಇಂಡಿಯಾ' ಮೈತ್ರಿಕೂಟದ ಭಾಗವಾಗಿದ್ದರೂ ಎಎಪಿ, ಕಾಂಗ್ರೆಸ್ ಪ್ರತ್ಯೇಕವಾಗಿ ಚುನಾವಣೆಯನ್ನು ಎದುರಿಸುತ್ತಿವೆ.

Delhi Assembly Elections 2025 Eknath Shinde Announces Support For All Delhi BJP Candidates

ಆಮ್ ಆದ್ಮಿ ಪಕ್ಷದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ ಎಂದು ಬಿಜೆಪಿ, ಕಾಂಗ್ರೆಸ್ ಹೇಳುತ್ತಿವೆ. ಆದ್ದರಿಂದ ಚುನಾವಣೆಯಲ್ಲಿ ಗೆದ್ದು ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಹಿಡಿಯಬೇಕು ಎಂದು ತಂತ್ರ ರೂಪಿಸಿ ಚುನಾವಣಾ ಪ್ರಚಾರವನ್ನು ನಡೆಸುತ್ತಿದೆ. ಎನ್‌ಡಿಎ ಮಿತ್ರಪಕ್ಷಗಳು ಬಿಜೆಪಿ ಬೆಂಬಲಿಸಿವೆ.

ಏಕನಾಥ ಶಿಂಧೆ ಘೋಷಣೆ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ ಶಿಂಧೆ ದೆಹಲಿ ಚುನಾವಣೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಹೇಳಿದ್ದಾರೆ. ಶಿವಸೇನೆಯಲ್ಲಿ ಎರಡು ಬಣವಿದೆ. ಉದ್ಧವ್ ಠಾಕ್ರೆ ಮತ್ತು ಏಕನಾಥ ಶಿಂಧೆ. ಮಹಾರಾಷ್ಟ್ರದ 'ಮಹಾಯತಿ' ಮೈತ್ರಿಕೂಟದಲ್ಲಿ ಏಕನಾಥ ಶಿಂಧೆ ಇದ್ದು, ಅವರು ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿದ್ದಾರೆ.

ದೆಹಲಿಯ 70 ಸೀಟುಗಳ ಪೈಕಿ 68 ಸೀಟುಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಎರಡು ಕ್ಷೇತ್ರಗಳನ್ನು ಪಕ್ಷ ಜೆಡಿಯುಗೆ ಬಿಟ್ಟುಕೊಟ್ಟಿದೆ. 2020ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 8 ಸೀಟುಗಳಲ್ಲಿ ಜಯಗಳಿಸಿತ್ತು. ಈ ಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯಬೇಕು ಎಂದು ಬಿಜೆಪಿ ಬಯಸಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಅಧಿಕಾರ ಪಡೆದ ನಂತರ ಬಿಜೆಪಿ ನೇತೃತ್ವದ ಎನ್‌ಡಿಎ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಹಿಡಿಯುವ ಉತ್ಸಾಹದಲ್ಲಿದೆ. ಬಿಜೆಪಿ ಕಲ್ಕಾಜಿ ಕ್ಷೇತ್ರದಲ್ಲಿ ದೆಹಲಿ ಸಿಎಂ ಅತಿಶಿ ವಿರುದ್ಧ ರಮೇಶ್ ಬಿಧೂರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಅರವಿಂದ ಕೇಜ್ರಿವಾಲ್ ವಿರುದ್ಧ ನವದೆಹಲಿ ಕ್ಷೇತ್ರದಲ್ಲಿ ಬಿಜೆಪಿ ಪರ್ವೇಶ್ ವರ್ಮಾ ಕಣಕ್ಕಿಳಿಸಿದೆ, ಇವರು ಮಾಜಿ ಸಿಎಂ ಸಾಹಿಬ್ ಸಿಂಗ್ ವರ್ಮಾ ಪುತ್ರ.

ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಎರಡು ಪ್ರಣಾಳಿಕೆ ಬಿಡುಗಡೆ ಮಾಡಿದೆ. 2ನೇ ಪ್ರಣಾಳಿಕೆಯಲ್ಲಿ ಪಕ್ಷ ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಒಂದು ಬಾರಿ 15 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ ಎಂದು ಭರವಸೆ ಕೊಟ್ಟಿದೆ. ಅಲ್ಲದೇ ಕೆಜಿ ಯಿಂದ ಪಿಜಿ ತನಕ ಉಚಿತ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಹೇಳಿದೆ.

ಕಳೆದ ವಾರ ಬಿಜೆಪಿ ದೆಹಲಿ ಚುನಾವಣೆಗೆ ಮೊದಲ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಮಹಿಳೆಯನ್ನು ಗುರಿಯಾಗಿಸಿಕೊಂಡು ಹಲವು ಭರವಸೆ ನೀಡಿತ್ತು. 2500 ರೂ. ಮಾಸಿಕ ಹಣಕಾಸಿನ ನೆರವು ನೀಡಲಾಗುತ್ತದೆ ಎಂದು ಭರವಸೆ ಕೊಟ್ಟಿತ್ತು. 500 ರೂ.ಗಳಿಗೆ ಎಲ್‌ಪಿಜಿ ಸಿಲಿಂಡರ್, ಗರ್ಭಿಣಿ ಮಹಿಳಯರಿಗೆ 21,000 ರೂ. ಆರ್ಥಿಕ ನೆರವು ಘೋಷಣೆ ಮಾಡಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+