Delhi Election 2025 Result: ದೆಹಲಿಯಲ್ಲಿ ಐತಿಹಾಸಿಕ ಜಯ, ಬಿಜೆಪಿ ಕಛೇರಿಗೆ ಮೋದಿ

ನವದೆಹಲಿ, ಫೆಬ್ರವರಿ 08: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಪ್ರಕಟವಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ 46 ಸೀಟುಗಳಲ್ಲಿ ಮುನ್ನಡೆಯನ್ನು ಪಡೆದುಕೊಂಡಿದೆ. ರಾಜ್ಯದ ಆಡಳಿತ ಪಕ್ಷ ಎಎಪಿಗೆ ಚುನಾವಣೆಯಲ್ಲಿ ಮುಖಭಂಗವಾಗಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ಬಿಜೆಪಿ 27 ವರ್ಷಗಳ ಬಳಿಕ ರಾಜ್ಯದಲ್ಲಿ ಅಧಿಕಾರ ನಡೆಸಲು ತಯಾರಿ ನಡೆಸಿದೆ.

ದೆಹಲಿಯ 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 5ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಶನಿವಾರ ಬೆಳಗ್ಗೆ ಮತ ಎಣಿಕೆ ಆರಂಭವಾಯಿತು. ಮೊದಲ ಸುತ್ತಿನಿಂದಲೂ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿತು. ಎಎಪಿ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಿರೀಕ್ಷೆ ಮಾಡಲಾಗಿತ್ತು, ಆದರೆ ಬಿಜೆಪಿ ಭಾರೀ ಮುನ್ನಡೆ ಪಡೆಯಿತು.

Delhi Assembly Elections 2025 PM Narendra Modi To Visit Central BJP Office 7 Pm

12.34ರ ಮಾಹಿತಿಯಂತೆ ಬಿಜೆಪಿ 47, ಎಎಪಿ 23 ಸೀಟುಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಕಾಂಗ್ರೆಸ್ ರಾಜ್ಯದಲ್ಲಿ ಸತತ ಮೂರು ಚುನಾವಣೆಯಲ್ಲಿ ಶೂನ್ಯ ಸ್ಥಾನಗಳಿಸುವ ಮೂಲಕ ಹ್ಯಾಟ್ರಿಕ್ ಬಾರಿಸಿದೆ. ದೆಹಲಿಯಲ್ಲಿ ಮೋದಿ ಮ್ಯಾಜಿಕ್ ಬಿಜೆಪಿಗೆ ವರವಾಗಿದ್ದು, ಪಕ್ಷ ಅಧಿಕಾರ ಹಿಡಿಯಲಿದೆ.

ಬಿಜೆಪಿ ಕಛೇರಿಗೆ ಮೋದಿ: "ಈ ಬಾರಿಯ ದೆಹಲಿ ಚುನಾವಣೆಯಲ್ಲಿ ಎಎಪಿ ದೋಣಿ ಯಮುನಾ ನದಿಯಲ್ಲಿ ಮುಳುಗಿ ಹೋಗಲಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ರಾಷ್ಟ್ರ ರಾಜಧಾನಿ ದೆಹಲಿಯ ಜನರು ಬಿಜೆಪಿ ಬೆಂಬಲಿಸಿದ್ದು, ಎಎಪಿಗೆ ಮುಖಭಂಗವಾಗಿದೆ.

ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಘೋಷಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಜೆ 7 ಗಂಟೆಗೆ ಬಿಜೆಪಿ ಕೇಂದ್ರ ಕಛೇರಿಗೆ ಭೇಟಿ ನೀಡಲಿದ್ದಾರೆ. ಕಾರ್ಯಕರ್ತರ ಜೊತೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಾಣುವುದು ಮಾತ್ರವಲ್ಲ ಘಟಾನುಘಟಿ ನಾಯಕರು ಸೋಲು ಕಂಡಿದ್ದಾರೆ. ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಚುನಾವಣೆಯಲ್ಲಿ ಸೋತಿದ್ದಾರೆ. ದೆಹಲಿ ಸಿಎಂ ಅತಿಶಿ ಕಲ್ಕಾಜಿ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.

2015, 2020ರ ಚುನಾವಣೆಯಲ್ಲಿ ದೆಹಲಿಯಲ್ಲಿ ಗೆದ್ದು ಅಧಿಕಾರ ಹಿಡಿದಿದ್ದ ಎಎಪಿ 2025ರಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿತ್ತು. ಭ್ರಷ್ಟಾಚಾರದ ಆರೋಪಗಳು, ಅರವಿಂದ ಕೇಜ್ರಿವಾಲ್ ಸೇರಿದಂತೆ ಪ್ರಮುಖ ನಾಯಕರು ಜೈಲು ಸೇರಿದ್ದು, ಎಎಪಿಗೆ ಭಾರೀ ಹೊಡೆತ ನೀಡಿದೆ.

ಎಎಪಿ ರಾಜ್ಯದ ಜನರು ಈ ಬಾರಿಯ ಚುನಾವಣೆಯಲ್ಲಿಯೂ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಅಂದಾಜಿಸಿದ್ದರು. 2012ರಲ್ಲಿ ಸ್ಥಾಪನೆಯಾದ ಪಕ್ಷವಾದ ಎಎಪಿ 2015, 2020ರಲ್ಲಿ ಜಯಗಳಿಸುವ ಮೂಲಕ ದೆಹಲಿಯಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಹಿನ್ನಡೆ ಉಂಟು ಮಾಡಿತ್ತು. ಆದರೆ 2024ರ ಲೋಕಸಭೆ ಚುನಾವಣೆಯ ಬಳಿಕ ರಾಷ್ಟ್ರರಾಜಧಾನಿಯಲ್ಲಿ ಅಧಿಕಾರ ಹಿಡಿಯಲೇಬೇಕು ಎಂದು ಬಿಜೆಪಿ ತಂತ್ರವನ್ನು ರೂಪಿಸಿತ್ತು.

ಎಎಪಿ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಿರೀಕ್ಷೆ ಮಾಡಲಾಗಿತ್ತು. ಆದರೆ ಚುನಾವಣೆಯಲ್ಲಿ ಸೋಲುವ ಮೂಲಕ ಎಎಪಿ ಅಧಿಕಾರದಲ್ಲಿದ್ದ 2 ರಾಜ್ಯಗಳ ಪೈಕಿ ಒಂದು ರಾಜ್ಯವನ್ನು ಕಳೆದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+