Delhi Election 2025 Result: ದೆಹಲಿ ಮುಖ್ಯಮಂತ್ರಿ ಅತಿಶಿ ರಾಜೀನಾಮೆ
ನವದೆಹಲಿ, ಫೆಬ್ರವರಿ 09: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ ಆಡಳಿತ ಪಕ್ಷವಾಗಿದ್ದ ಎಎಪಿ ಸೋಲು ಕಂಡಿದೆ. ಬಿಜೆಪಿ 48 ಸೀಟುಗಳಲ್ಲಿ ಗೆಲುವು ಸಾಧಿಸಿದ್ದು, ಪೂರ್ಣ ಬಹುಮತದ ಸರ್ಕಾರವನ್ನು ರಚನೆ ಮಾಡಲಿದೆ. 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿ ಅಧಿಕಾರ ಬಿಜೆಪಿಗೆ ಸಿಕ್ಕಿದ್ದು, ಮುಖ್ಯಮಂತ್ರಿ ಯಾರು? ಎಂಬುದು ಇನ್ನೂ ಸಹ ಅಂತಿಮವಾಗಿಲ್ಲ.
ಶನಿವಾರ ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಘೋಷಣೆಯಾಗಿದೆ. 70 ಸದಸ್ಯ ಬದಲ ವಿಧಾನಸಭೆಯಲ್ಲಿ ಬಿಜೆಪಿ 48, ಎಎಪಿ 22 ಸ್ಥಾನಗಳಲ್ಲಿ ಜಯಗಳಿಸಿವೆ. ಚುನಾವಣೆಯಲ್ಲಿ ಎಎಪಿ ಸೋಲುಕಂಡ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ರಾಜೀನಾಮೆ ಸಲ್ಲಿಸಿದ್ದಾರೆ. 2024ರ ಸೆಪ್ಟೆಂಬರ್ 21ರಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.

ಭಾನುವಾರ ಮುಖ್ಯಮಂತ್ರಿ ಅತಿಶಿ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಎಎಪಿಯ ಆಡಳಿತ ಅಂತ್ಯವಾಗಿದೆ. ಸದ್ಯ ದೇಶದಲ್ಲಿ ಪಂಜಾಬ್ ರಾಜ್ಯದಲ್ಲಿ ಮಾತ್ರ ಎಎಪಿ ಅಧಿಕಾರದಲ್ಲಿದೆ.
ಅತಿಶಿ ಗೆಲುವು: ದೆಹಲಿ ಚುನಾವಣೆಯಲ್ಲಿ ಎಎಪಿ ಸೋಲು ಕಂಡಿದೆ. 2015, 2020ರಲ್ಲಿ ಗೆಲುವು ಸಾಧಿಸಿ ಎಎಪಿ ದೆಹಲಿಯಲ್ಲಿ ಸರ್ಕಾರ ರಚನೆ ಮಾಡಿತ್ತು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ಸಿಬಿಐನಿಂದ ಬಂಧನಕ್ಕೊಳಗಾದರು. ಅವರು ಜಾಮೀನು ಪಡೆದು ಬಿಡುಗಡೆಯಾದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದು. ಆಗ ಅತಿಶಿ ಮುಖ್ಯಮಂತ್ರಿಯಾಗಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಘಟಾನುಘಟಿ ಎಎಪಿ ನಾಯಕರು ಸೋಲು ಕಂಡಿದ್ದಾರೆ. ಆದರೆ ಮುಖ್ಯಮಂತ್ರಿಯಾಗಿದ್ದ ಅತಿಶಿ ಕಲ್ಕಾಜಿ ಕ್ಷೇತ್ರದಲ್ಲಿ 52,154 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ರಮೇಶ್ ಬಿಧೂರಿ ವಿರುದ್ಧ 3521 ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ.
ಚುನಾವಣೆಯಲ್ಲಿ ನವದೆಹಲಿ ಕ್ಷೇತ್ರದಲ್ಲಿ ಅರವಿಂದ ಕೇಜ್ರಿವಾಲ್, ಜಂಗ್‌ಪುರ್‌ನಲ್ಲಿ ಮನೀಶ್ ಸಿಸೋಡಿಯಾ, ಗ್ರೇಟರ್ ಕೈಲಾಶ್ ಕ್ಷೇತ್ರದಲ್ಲಿ ಸೌರಭ್ ಭಾರದ್ವಾಜ್, ರಾಜಿಂದರ್ ನಗರದಲ್ಲಿ ದುರ್ಗೇಶ್ ಪಾಠಕ್, ಮಾಳವಿಯಾ ನಗರದಲ್ಲಿ ಸೋಮನಾಥ ಬಾರ್ತಿ, ಶಕುರ್ ಬಸ್ತಿ ಕ್ಷೇತ್ರದಲ್ಲಿ ಸತ್ಯೇಂದರ್ ಜೈನ್ ಸೋಲು ಅನುಭವಿಸಿದ್ದಾರೆ.
ನೂತನ ಸಿಎಂ ಯಾರು?: ದೆಹಲಿಯ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ನವದೆಹಲಿ ಕ್ಷೇತ್ರದಲ್ಲಿ ಸೋಲಿಸಿದ ಬಿಜೆಪಿ ಅಭ್ಯರ್ಥಿ ಪರ್ವೇಜ್ ವರ್ಮಾ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಮತ್ತೊಂದು ಕಡೆ ಮಹಿಳಾ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಮಾತಿದೆ.
2024ರ ಲೋಕಸಭೆ ಚುನಾವಣೆ ಟಿಕೆಟ್ ತಪ್ಪಿಸಿಕೊಂಡಿದ್ದ ಪರ್ವೇಜ್ ವರ್ಮಾ ದೆಹಲಿ ವಿಧಾನಸಭೆ ಚುನಾವಣೆ ಟಿಕೆಟ್ ಪಡೆದು ಅರವಿಂದ ಕೇಜ್ರಿವಾಲ್ ಸೋಲಿಸುವ ಮೂಲಕ ಬಹುದೊಡ್ಡ ಸಾಧನೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಪುತ್ರ ಪರ್ವೇಜ್ ವರ್ಮಾ 2014 ರಿಂದ 2024ರ ತನಕ ಎರಡು ಅವಧಿಗೆ ಪಶ್ಚಿಮ ದೆಹಲಿಯಿಂದ ಸಂಸದರಾಗಿದ್ದರು.
ದೆಹಲಿಯ ಮೆಹ್ರೋಲಿ ಕ್ಷೇತ್ರದ ಶಾಸಕರಾಗಿಯೂ ಅವರು ಕೆಲಸ ಮಾಡಿದ್ದಾರೆ. ಕೇಜ್ರಿವಾಲ್ ಸೋಲಿಸಿರುವ ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ ಬಿಜೆಪಿ ಹೈಕಮಾಂಡ್ ನಾಯಕರು ಸಿಎಂ ಅಭ್ಯರ್ಥಿ ಬಗ್ಗೆ ಇದುವರೆಗೂ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Kerala: ಕೇರಳಂ ವಿಧಾನಸಭೆ ಚುನಾವಣೆ 2026: ಎಲ್ಡಿಎಫ್–ಯುಡಿಎಫ್ ನಡುವೆ ಪೈಪೋಟಿ, ಹೇಗಿದೆ ರಾಜಕೀಯ ಕಣ -
ಮುಟ್ಟಿನ ರಜೆ ಮಹಿಳೆಯರ ಹಕ್ಕು: ಸುಪ್ರೀಂ ಕೋರ್ಟ್ ನಿಲುವನ್ನು ತೀವ್ರವಾಗಿ ಖಂಡಿಸಿದ CPI -
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Kerala Assembly Election 2026: ಕೇರಳಂ ವಿಧಾನಸಭೆ ಚುನಾವಣೆ 2026: ಒಂದೇ ಹಂತದಲ್ಲಿ 140 ಸ್ಥಾನಗಳಿಗೆ ಚುನಾವಣೆ -
Assam Assembly Election 2026: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ, ಮತ ಎಣಿಕೆ ದಿನಾಂಕಗಳ ವಿವರ -
Puducherry Election 2026: ವಿಧಾನಸಭಾ ಚುನಾವಣೆಗೆ ಸಜ್ಜಾದ ಪುದುಚೇರಿ ರಾಜಕೀಯ ಅಖಾಡ: ಏಪ್ರಿಲ್ 9ಕ್ಕೆ ಮತದಾನ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ












Click it and Unblock the Notifications