Delhi Election 2025 Result: ಮಾಜಿ ಸಿಎಂ ಕೇಜ್ರಿವಾಲ್ ಸೋಲಿಸಿದ, ಮಾಜಿ ಸಿಎಂ ಪುತ್ರ!
ನವದೆಹಲಿ, ಫೆಬ್ರವರಿ 08: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಪ್ರಕಟವಾಗಿದೆ. 27 ವರ್ಷಗಳ ಬಳಿಕ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಪಡೆದಿದೆ. ರಾಜ್ಯದ ಆಡಳಿತ ಪಕ್ಷ ಎಎಪಿ ಸೋಲು ಕಂಡಿದೆ. ಎಎಪಿ ಸೋತಿದ್ದು ಮಾತ್ರವಲ್ಲ ಪಕ್ಷದ ಮುಖ್ಯಸ್ಥ, ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಸುಮಾರು 4089 ಮತಗಳ ಅಂತರದಿಂದ ನವದೆಹಲಿ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ಬಿಜೆಪಿ 46ಕ್ಕೂ ಅಧಿಕ ಕ್ಷೇತ್ರದಲ್ಲಿ ಮುನ್ನಡೆಯಲಿದ್ದು, ಸಂಜೆಯ ವೇಳೆಗೆ ಎಷ್ಟು ಸೀಟುಗಳಲ್ಲಿ ಗೆಲುವು ಎಂಬುದು ತಿಳಿಯಲಿದೆ.
ದೆಹಲಿಯ 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 5ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಶನಿವಾರ ಬೆಳಗ್ಗೆ ಮತ ಎಣಿಕೆ ಆರಂಭವಾಯಿತು. ಮೊದಲ ಸುತ್ತಿನಿಂದಲೂ ಮುನ್ನಡೆಯನ್ನು ಕಾಯ್ದುಕೊಂಡ ಬಿಜೆಪಿ, ಅಂತಿಮವಾಗಿ ರಾಷ್ಟ್ರ ರಾಜಧಾನಿಯ ಅಧಿಕಾರವನ್ನು ಹಿಡಿದಿದೆ. ಮುಖ್ಯಮಂತ್ರಿ ಯಾರು? ಎಂಬುದು ಇನ್ನೂ ಸಹ ಅಂತಿಮವಾಗಿಲ್ಲ.

ನವದೆಹಲಿ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಪರ್ವೇಶ್ ವರ್ಮಾ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಲಿಸಿದ್ದಾರೆ. ಬಿಜೆಪಿಯ ಪರ್ವೇಶ್ ವರ್ಮಾ, ಕಾಂಗ್ರೆಸ್‌ನ ಸಂದೀಪ್ ದೀಕ್ಷಿತ್ ಮತ್ತು ಅರವಿಂದ ಕೇಜ್ರಿವಾಲ್ ನಡುವೆ ತೀವ್ರ ಪೈಪೋಟಿಯನ್ನು ನಿರೀಕ್ಷೆ ಮಾಡಲಾಗಿತ್ತು. ಅಂತಿಮವಾಗಿ ಪರ್ವೇಶ್ ವರ್ಮಾ ಗೆಲುವು ಸಾಧಿಸಿದ್ದಾರೆ. 2013, 2015, 2020ರಲ್ಲಿ ಗೆದ್ದ ಕ್ಷೇತ್ರವನ್ನು ಕೇಜ್ರಿವಾಲ್ ಕಳೆದುಕೊಂಡಿದ್ದಾರೆ.
ಮಾಜಿ ಸಿಎಂ ಪುತ್ರ: ಪರ್ವೇಶ್ ವರ್ಮಾ ದೆಹಲಿಯ ಮಾಜಿ ಸಿಎಂ ಸಾಹಿಬ್ ಸಿಂಗ್ ವರ್ಮಾ ಪುತ್ರ. ಈ ಹಿಂದೆ ಎರಡು ಬಾರಿ ಅವರು ಸಂಸದರಾಗಿದ್ದರು. ಮೊದಲಿನಿಂದಲೂ ಆರ್‌ಎಸ್‌ಎಸ್ ಜೊತೆ ಗುರುತಿಸಿಕೊಂಡಿದ್ದ ಪರ್ವೇಶ್ ವರ್ಮಾ ಅವರನ್ನು ಬಿಜೆಪಿ ಅರವಿಂದ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿಸಿತ್ತು.
ಚುನಾವಣೆಯಲ್ಲಿ ಪರ್ವೇಶ್ ವರ್ಮಾ 30088 ಮತಗಳನ್ನು ಪಡೆದು 4089 ಮತಗಳ ಅಂತರದಿಂದ ಅರವಿಂದ ಕೇಜ್ರಿವಾಲ್ ಸೋಲಿಸಿದ್ದಾರೆ. ಅರವಿಂದ ಕೇಜ್ರಿವಾಲ್ 25999 ಮತ್ತು ಕಾಂಗ್ರೆಸ್ ಅಭ್ಯರ್ಥಿ, ದೆಹಲಿ ಮಾಜಿ ಸಿಎಂ ದಿ. ಶೀಲಾ ದೀಕ್ಷಿತ್ ಪುತ್ರ ಸಂದೀಪ್ ದೀಕ್ಷಿತ್ 4568 ಮತಗಳನ್ನು ಪಡೆದಿದ್ದಾರೆ.
ಅರವಿಂದ ಕೇಜ್ರಿವಾಲ್ ವಿರುದ್ಧ 25 ಅಭ್ಯರ್ಥಿಗಳು ಕಣದಲ್ಲಿದ್ದರು. ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಮಾಜಿ ಸಿಎಂ ಪುತ್ರರಾದ ಬಿಜೆಪಿಯ ಪರ್ವೇಶ್ ವರ್ಮಾ, ಕಾಂಗ್ರೆಸ್‌ನ ಸಂದೀಪ್ ದೀಕ್ಷಿತ್ ಪ್ರಮುಖ ಅಭ್ಯರ್ಥಿಗಳಾಗಿದ್ದರು.
ಪಶ್ಚಿಮ ದೆಹಲಿ ಕ್ಷೇತ್ರದಿಂದ 2014ರ ಲೋಕಸಭೆ ಚುನಾವಣೆಯಲ್ಲಿ ಪರ್ವೇಶ್ ವರ್ಮಾ ಜಯಗಳಿಸಿದರೂ ಸಹ 2019ರ ಚುನಾವಣೆಯಲ್ಲಿ ಅವರಿಗೆ ಪಕ್ಷ ಟಿಕೆಟ್ ನೀಡಿರಲಿಲ್ಲ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅವರು ಕಾರ್ಯ ನಿರ್ವಹಣೆ ಮಾಡಿದ್ದರು.
2020ರಲ್ಲಿ ಸಿಎಎ ವಿರುದ್ಧದ ಹೋರಾಟದಲ್ಲಿ ತೊಡಗಿದವರಿಗೆ ಬೆದರಿಕೆ ಹಾಕುವ ಮೂಲಕ ಪರ್ವೇಶ್ ವರ್ಮಾ ದೊಡ್ಡ ಸುದ್ದಿಯಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಪರ್ವೇಶ್ ವರ್ಮಾ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು.
ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಪರ್ವೇಶ್ ವರ್ಮಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದರು. ದೆಹಲಿಯ ಮುಖ್ಯಮಂತ್ರಿ ರೇಸ್‌ನಲ್ಲಿ ಪರ್ವೇಶ್ ವರ್ಮಾ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. 2 ದಿನದಲ್ಲಿ ಬಿಜೆಪಿ ಮುಖ್ಯಮಂತ್ರಿಯನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications