Delhi Elections 2025: ಕಾಂಗ್ರೆಸ್‌ಗೆ ಕೈ ಕೊಟ್ಟ INDIA ಒಕ್ಕೂಟ: AAP ಬೆಂಬಲಿಸಿದ ಅಖಿಲೇಶ್, ಮಮತಾ ಬ್ಯಾನರ್ಜಿ
ನವದೆಹಲಿ, ಜನವರಿ09: ಕಳೆದ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಇಂಡಿಯಾ ಒಕ್ಕೂಟವನ್ನ ರಚಿಸಿಕೊಂಡಿತ್ತು. ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಮೂಡಿದ್ದು, ದೆಹಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದ್ದ ಕಾಂಗ್ರೆಸ್ ಗೆ ಇಂಡಿಯಾ ಕೂಟ ಕೈ ಕೊಟ್ಟಿದೆ.
ಹೌದು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ವತಂತ್ರವಾಗಿ ಸ್ಪರ್ಧೆ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸ್ಪಷ್ಟ ಪಡಿಸಿದ್ದು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ INDIA ಮೈತ್ರಿ ಮತ್ತೆ ಛಿದ್ರವಾಗುವ ಲಕ್ಷಣ ಕಾಣುತ್ತಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಪರಸ್ಪರ ಎದುರಾಳಿಗಳಾಗಿವೆ.

ದೆಹಲಿ ಚುನಾವಣೆಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದರೂ, ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳೂ ಕೂಡ ಚುನಾವಣೆಯ ಮೇಲೆ ಕಣ್ಣಿಟ್ಟಿವೆ. ಇಂಡಿಯಾ ಮೈತ್ರಿ ಪಕ್ಷಗಳಾದ ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್ ಪಕ್ಷಗಳು ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಲ್ಲ, ಆಮ್ ಆದ್ಮಿ ಪಕ್ಷಕ್ಕೆ ಬೆಂಬಲವನ್ನು ಘೋಷಿಸಿವೆ. ಇದರಿಂದಾಗಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಬೆಂಬಲ ನೀಡುವ ಹಿಂದಿನ ಉದ್ದೇಶವೇನು ಎಂಬ ಪ್ರಶ್ನೆಗಳು ಉದ್ಬವಿಸಿದೆ.
ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬೆಂಬಲ ಅರವಿಂದ್ ಕೇಜ್ರಿವಾಲ್ ಗೆ ಸಿಕ್ಕಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಟಿಎಂಸಿ ದೆಹಲಿ ಚುನಾವಣೆಯಲ್ಲಿ AAP ಗೆ ಬೆಂಬಲ ಘೋಷಿಸಿದೆ. ಮಮತಾ ದೀದಿಗೆ ನಾನು ವೈಯಕ್ತಿಕವಾಗಿ ಆಭಾರಿಯಾಗಿದ್ದೇನೆ. ಧನ್ಯವಾದಗಳು ಸಹೋದರಿ. ನಮ್ಮ ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ನೀವು ಯಾವಾಗಲೂ ನಮ್ಮನ್ನು ಬೆಂಬಲಿಸಿದ್ದೀರಿ ಮತ್ತು ಆಶೀರ್ವದಿಸಿದ್ದೀರಿ. ಇದಲ್ಲದೆ, ಇತ್ತೀಚೆಗೆ ಅಖಿಲೇಶ್ ಯಾದವ್ ಕೂಡ ಬೆಂಬಲ ನೀಡಿದ್ದು ಅವರಿಗೂ ಧನ್ಯವಾದಗಳು ಎಂದು ಅರವಿಂದ್ ಕೇಜ್ರಿವಾರ್ ಹೇಳಿದ್ದರು.
ಇನ್ನೂ ಅಖಿಲೇಶ್ ಯಾದವ್ ಅವರು ಬೆಂಬಲಕ್ಕೆ ಧನ್ಯವಾದ ತಿಳಿಸಿದರು ಅರವಿಂದ್ ಕೇಜ್ರಿವಾಲ್ ಅವರು, ನೀವು ಯಾವಾಗಲೂ ನಮ್ಮನ್ನು ಬೆಂಬಲಿಸುತ್ತೀರಿ ಮತ್ತು ನಮ್ಮೊಂದಿಗೆ ನಿಲ್ಲುತ್ತೀರಿ. ಇದಕ್ಕಾಗಿ ನಾನು ಮತ್ತು ದೆಹಲಿಯ ಜನತೆಗೆ ಕೃತಜ್ಞರಾಗಿದ್ದೇವೆ ಎಂದು ತಿಳಿಸಿದರು.
ಕಳೆದ ತಿಂಗಳು ಅಖಿಲೇಶ್ ಯಾದವ್ ಅವರು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ದೆಹಲಿಯಲ್ಲಿ ಮಹಿಳೆಯರ ಬೆಂಬಲಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಅವರ ಬೆಂಬಲವನ್ನು ಪಡೆದ ನಂತರ ತಮ್ಮ ಗೆಲುವಿನ ಸಾಧ್ಯತೆ ಹೆಚ್ಚಾಗಿದೆ. ಇನ್ನೂ'ಶೀಶ್ ಮಹಲ್' ಸೇರಿದಂತೆ ವಿವಿಧ ಹಗರಣಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಮೂಲೆಗುಂಪು ಮಾಡುತ್ತಿದೆ. ಆದರೆ ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತೆರೆಮರೆಯಲ್ಲಿ ತಮ್ಮನ್ನು ಸೋಲಿಸಲು ಒಟ್ಟಾಗಿ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿಸಿದ್ದಾರೆ.












Click it and Unblock the Notifications